Asia Cup 2023: ಟೀಮ್ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ
India Playing XI: ಈ ಪಂದ್ಯವು ಭಾರತ ತಂಡದ ಪಾಲಿಗೆ ಔಪಚಾರಿಕವಾಗಿರುವ ಕಾರಣ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಟೀಮ್ ಇಂಡಿಯಾ ಸತತ ಮೂರು ದಿನಗಳ ಕಾಲ ಪಂದ್ಯವಾಡಿದೆ. ಇದೀಗ ಫೈನಲ್ಗೂ ಮುನ್ನ ಕೆಲ ಪ್ರಯೋಗಗಳನ್ನು ಮಾಡಲು ಟೀಮ್ ಇಂಡಿಯಾ ಮುಂದಾಗಬಹುದು.
ಏಷ್ಯಾಕಪ್ನ ಸೂಪರ್-4 ಹಂತದ 6ನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ (India vs Bangladesh) ವಿರುದ್ಧ ಸೆಣಸಲಿದೆ. ಈಗಾಗಲೇ ಫೈನಲ್ಗೇರಿರುವ ಟೀಮ್ ಇಂಡಿಯಾಗೆ ಈ ಪಂದ್ಯ ಔಪಚಾರಿಕ. ಅತ್ತ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಏಷ್ಯಾಕಪ್ಗೆ ಗೆಲುವಿನ ವಿದಾಯ ಹೇಳುವ ಇರಾದೆಯಲ್ಲಿ ಬಾಂಗ್ಲಾದೇಶ್ ತಂಡ.
ಮೇಲೆ ಹೇಳಿರುವಂತೆ ಈ ಪಂದ್ಯವು ಭಾರತ ತಂಡದ ಪಾಲಿಗೆ ಔಪಚಾರಿಕವಾಗಿರುವ ಕಾರಣ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಟೀಮ್ ಇಂಡಿಯಾ ಸತತ ಮೂರು ದಿನಗಳ ಕಾಲ ಪಂದ್ಯವಾಡಿದೆ.
ಭಾನುವಾರ ನಡೆಯಬೇಕಿದ್ದ ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ಮುಗಿದದ್ದು ಸೋಮವಾರ. ಇನ್ನು ಮಂಗಳವಾರ ಮತ್ತೆ ಶ್ರೀಲಂಕಾ ವಿರುದ್ಧ ಕಣಕ್ಕಿಳಿದಿತ್ತು. ಇದೀಗ ಮತ್ತೆ ಬಾಂಗ್ಲಾದೇಶ್ ವಿರುದ್ಧ ಪಂದ್ಯವಾಡಬೇಕಿದೆ. ಹೀಗಾಗಿ ಕೆಲ ಆಟಗಾರರು ಈ ಪಂದ್ಯದ ವೇಳೆ ವಿಶ್ರಾಂತಿ ಪಡೆಯಬಹುದು.
ಅದರಂತೆ ಇಲ್ಲಿ ಇಶಾನ್ ಕಿಶನ್ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಕಣಕ್ಕಿಳಿಸಿ ಪ್ರಯೋಗ ನಡೆಸಬಹುದು. ಹಾಗೆಯೇ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ಗೆ ಅವಕಾಶ ನೀಡಬಹುದು.
ಇನ್ನು ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಹಿರಿಯ ವೇಗಿ ಮೊಹಮ್ಮದ್ ಶಮಿ ಯುವ ವೇಗಿ ಮೊಹಮ್ಮದ್ ಸಿರಾಜ್ ಸ್ಥಾನದಲ್ಲಿ ಸ್ಥಾನದಲ್ಲಿ ಕಾಣಿಸಿಕೊಳ್ಳಬಹುದು. ಈ ಮೂರು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಬಾಂಗ್ಲಾದೇಶ್ ತಂಡವನ್ನು ಎದುರಿಸುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
- ರೋಹಿತ್ ಶರ್ಮಾ (ನಾಯಕ)
- ಶುಭ್ಮನ್ ಗಿಲ್
- ವಿರಾಟ್ ಕೊಹ್ಲಿ
- ಕೆಎಲ್ ರಾಹುಲ್ (ವಿಕೆಟ್ ಕೀಪರ್)
- ಸೂರ್ಯಕುಮಾರ್ ಯಾದವ್
- ಶಾರ್ದೂಲ್ ಠಾಕೂರ್
- ರವೀಂದ್ರ ಜಡೇಜಾ
- ಅಕ್ಷರ್ ಪಟೇಲ್
- ಕುಲ್ದೀಪ್ ಯಾದವ್
- ಜಸ್ಪ್ರೀತ್ ಬುಮ್ರಾ
- ಮೊಹಮ್ಮದ್ ಶಮಿ
ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.