IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಖಚಿತ
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯವು ಭಾರತದ ಎರಡನೇ ವಿದೇಶಿ ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಹೀಗಾಗಿ ವಿದೇಶಿ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭಾರತ ಮೊದಲ ಜಯವನ್ನು ಎದುರು ನೋಡುತ್ತಿದೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯ ಶುಕ್ರವಾರದಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಮಾಡುವುದು ಖಚಿತ. ಏಕೆಂದರೆ ಪರ್ತ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಯಂಗ್ ಬ್ಯಾಟರ್ ಶುಭ್ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯವಾಡಲಿದ್ದಾರೆ. ಹೀಗಾಗಿ ಆಡುವ ಬಳಗದಿಂದ ಇಬ್ಬರು ಹೊರಬೀಳುವುದು ಕನ್ಫರ್ಮ್.
ಅದರಂತೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಅಡಿಲೇಡ್ ಟೆಸ್ಟ್ ಪಂದ್ಯದಿಂದ ಹೊರಬೀಳಲಿದ್ದಾರೆ. ಇವರಿಬ್ಬರ ಸ್ಥಾನಗಳಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಇನ್ನು ಐದನೇ ಮತ್ತು ಆರನೇ ಕ್ರಮಾಂಕಗಳಲ್ಲಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
ಆಲ್ರೌಂಡರ್ ಗಳಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಜೊತೆ ಮೊಹಮ್ಮದ್ ಸಿರಾಜ್ ಹಾಗೂ ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.
Published On - 7:11 am, Thu, 5 December 24