IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಖಚಿತ

|

Updated on: Dec 05, 2024 | 12:29 PM

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯವು ಭಾರತದ ಎರಡನೇ ವಿದೇಶಿ ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಹೀಗಾಗಿ ವಿದೇಶಿ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭಾರತ ಮೊದಲ ಜಯವನ್ನು ಎದುರು ನೋಡುತ್ತಿದೆ

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಖಚಿತ
Team India
Follow us on

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯ ಶುಕ್ರವಾರದಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡುವುದು ಖಚಿತ. ಏಕೆಂದರೆ ಪರ್ತ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಯಂಗ್ ಬ್ಯಾಟರ್ ಶುಭ್​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯವಾಡಲಿದ್ದಾರೆ. ಹೀಗಾಗಿ ಆಡುವ ಬಳಗದಿಂದ ಇಬ್ಬರು ಹೊರಬೀಳುವುದು ಕನ್ಫರ್ಮ್.

ಅದರಂತೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಅಡಿಲೇಡ್ ಟೆಸ್ಟ್ ಪಂದ್ಯದಿಂದ ಹೊರಬೀಳಲಿದ್ದಾರೆ. ಇವರಿಬ್ಬರ ಸ್ಥಾನಗಳಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೂರನೇ ಕ್ರಮಾಂಕದಲ್ಲಿ ಶುಭ್​ಮನ್ ಗಿಲ್ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಇನ್ನು ಐದನೇ ಮತ್ತು ಆರನೇ ಕ್ರಮಾಂಕಗಳಲ್ಲಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.

ಆಲ್​ರೌಂಡರ್ ಗಳಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಇನ್ನು ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಜೊತೆ ಮೊಹಮ್ಮದ್ ಸಿರಾಜ್ ಹಾಗೂ ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್​​ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್​​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

 

Published On - 7:11 am, Thu, 5 December 24