IND vs AUS: ಸಂಜು ಸ್ಯಾಮ್ಸನ್ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟಿ20 ಪಂದ್ಯ ನಾಳೆ (ನ.6) ನಡೆಯಲಿದೆ. ಕ್ವೀನ್ಸ್ಲ್ಯಾಂಡ್ನ ಕ್ಯಾರೆರಾ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಏಕೆಂದರೆ ಈ ಮ್ಯಾಚ್ ಭಾರತದ ಪಾಲಿಗೆ ನಿರ್ಣಾಯಕ.
ಅಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ರದ್ದಾಗಿರುವ ಕಾರಣ ಇದೀಗ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ಇದೀಗ ನಾಲ್ಕನೇ ಮ್ಯಾಚ್ನಲ್ಲಿ ಗೆದ್ದರೆ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಅಲ್ಲದೆ ಕೊನೆಯ ಪಂದ್ಯದಲ್ಲಿ ಜಯಗಳಿಸಿ ಸರಣಿಯನ್ನು ಜಯಿಸಬಹುದು. ಹೀಗಾಗಿ ನಾಳಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಸರಣಿ ನಿರ್ಣಾಯಕವಾಗಿದೆ.
ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದ ಬಳಗವನ್ನೇ ಮತ್ತೆ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೋಬಾರ್ಟ್ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿತ್ತು. ಹೀಗಾಗಿ ಇದೇ ಬಳಗವನ್ನೇ ಗೋಲ್ಡ್ ಕೋಸ್ಟ್ನಲ್ಲೂ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.
ಇದರಿಂದಾಗಿ 4ನೇ ಟಿ20 ಪಂದ್ಯದಿಂದ ಸಂಜು ಸ್ಯಾಮ್ಸನ್ ಹಾಗೂ ಹರ್ಷಿತ್ ರಾಣಾ ಹೊರಗುಳಿಯಬೇಕಾಗಿ ಬರಬಹುದು. ಏಕೆಂದರೆ ಈ ಇಬ್ಬರನ್ನು 3ನೇ ಟಿ20 ಪಂದ್ಯದಿಂದ ಹೊರಗಿಡಲಾಗಿತ್ತು. ಇವರ ಬದಲಿಗೆ ಜಿತೇಶ್ ಶರ್ಮಾ ಹಾಗೂ ಅರ್ಷದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿತ್ತು. ಇವರನ್ನೇ 4ನೇ ಟಿ20 ಪಂದ್ಯದಲ್ಲೂ ಮುಂದುವರೆಸುವ ಸಾಧ್ಯತೆ ಹೆಚ್ಚು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಭಾರತ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.
ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
Published On - 1:24 pm, Wed, 5 November 25
