AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing: ತಂಡದಲ್ಲಿಲ್ಲ ಕೊಹ್ಲಿ, ರೋಹಿತ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India Playing XI For 1st T20 vs New Zealand: ಪರಿಪೂರ್ಣ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್​ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್ ಹಾಗೂ ಶಿವಂ ಮಾವಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಬಹುದು.

India Playing: ತಂಡದಲ್ಲಿಲ್ಲ ಕೊಹ್ಲಿ, ರೋಹಿತ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
TV9 Web
| Edited By: |

Updated on: Jan 26, 2023 | 9:25 PM

Share

India vs New Zealand 1st T20: ಭಾರತ-ನ್ಯೂಜಿಲೆಂಡ್ ನಡುವಣ ಟಿ20 ಸರಣಿಯು ಶುಕ್ರವಾರದಿಂದ (ಜ.27) ಶುರುವಾಗಲಿದೆ. ಮೊದಲ ಪಂದ್ಯಕ್ಕೆ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋತಿರುವ ನ್ಯೂಜಿಲೆಂಡ್ ತಂಡವು ಟಿ20 ಸರಣಿ ಗೆಲುವಿನ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಬಳಗವು ಮೊದಲ ಪಂದ್ಯದಲ್ಲೇ ಕಿವೀಸ್ ಪಡೆಯನ್ನು ಬಗ್ಗು ಬಡಿದು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಹೀಗಾಗಿ ಉಭಯ ತಂಡಗಳಿಂದ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹಾಗೆಯೇ ಗಾಯಗೊಂಡಿರುವ ರುತುರಾಜ್ ಗಾಯಕ್ವಾಡ್ ಕೂಡ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

ಅದರಂತೆ ಆರಂಭಿಕರಾಗಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಇನಿಂಗ್ಸ್​ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ ಬ್ಯಾಟ್ ಬೀಸಲಿದ್ದಾರೆ. 4ನೇ ಕ್ರಮಾಂಕದಲ್ಲಿ ಎಂದಿನಂತೆ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ನಾಯಕ ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದು, 6ನೇ ಕ್ರಮಾಂಕದಲ್ಲಿ ಮತ್ತೋರ್ವ ಆಲ್​ರೌಂಡರ್ ದೀಪಕ್ ಹೂಡಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಇನ್ನು ಸ್ಪಿನ್ ಆಲ್​ರೌಂಡರ್ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್​ ಸಿಗಲಿದೆ.

ಹಾಗೆಯೇ ಪರಿಪೂರ್ಣ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್​ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್ ಹಾಗೂ ಶಿವಂ ಮಾವಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

  • ಶುಭ್​ಮನ್ ಗಿಲ್
  • ಇಶಾನ್ ಕಿಶನ್
  • ರಾಹುಲ್ ತ್ರಿಪಾಠಿ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ದೀಪಕ್ ಹೂಡಾ
  • ವಾಷಿಂಗ್ಟನ್ ಸುಂದರ್
  • ಅರ್ಷದೀಪ್ ಸಿಂಗ್
  • ಉಮ್ರಾನ್ ಮಲಿಕ್
  • ಶಿವಂ ಮಾವಿ
  • ಯುಜ್ವೇಂದ್ರ ಚಹಾಲ್

ಟೀಮ್ ಇಂಡಿಯಾ ಟಿ20 ತಂಡ ಹೀಗಿದೆ:

ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?