IND vs ENG: ಅಂತಿಮ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್! ಬುಮ್ರಾಗೆ ನಾಯಕತ್ವ
IND vs ENG: ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.
ಶುಕ್ರವಾರದಿಂದ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎಜ್‌ಬಾಸ್ಟನ್ ಟೆಸ್ಟ್‌ನಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. ಗುರುವಾರ ರೋಹಿತ್ ಪ್ರತಿಜನಕ ಪರೀಕ್ಷೆ (antigen test)ಗೆ ಒಳಗಾದರು, ಅದರಲ್ಲಿ ರೋಹಿತ್ ಇನ್ನೂ ಕೊರೊನಾ ಸೋಂಕಿನಿಂದ ಬಳಲುತ್ತಿರುವುದು ಪತ್ತೆಯಾಗಿದೆ. ಅವರ ಸ್ಥಾನದಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ (Rishabh Pant) ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಕಳೆದ ವರ್ಷ ಭಾರತ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾಗ ಐದು ಟೆಸ್ಟ್‌ಗಳ ಸರಣಿಯನ್ನು ಆಡಬೇಕಿತ್ತು. ಆದರೆ, ಸರಣಿಯ ನಾಲ್ಕು ಪಂದ್ಯಗಳು ಮಾತ್ರ ನಡೆದಿದ್ದವು. ಕೊರೊನಾ ಕಾರಣದಿಂದಾಗಿ ಐದನೇ ಮತ್ತು ಕೊನೆಯ ಪಂದ್ಯವನ್ನು ಮುಂದೂಡಲಾಗಿತ್ತು. ಈಗ ಈ ಪಂದ್ಯ ಜುಲೈ 1 ರಿಂದ ನಡೆಯಲಿದೆ.
ಸರಣಿಯಲ್ಲಿ ಭಾರತದ ಮುನ್ನಡೆ
ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು. ಇದರ ನಂತರ ಲಂಡನ್‌ನಲ್ಲಿ ನಡೆದ ಮುಂದಿನ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಗೆದ್ದುಕೊಂಡಿತು. ಲೀಡ್ಸ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಕಮ್ ಬ್ಯಾಕ್ ಮಾಡಿ 76 ರನ್‌ಗಳಿಂದ ಗೆದ್ದಿತ್ತು. ನಂತರ ಭಾರತ ಲಂಡನ್‌ನಲ್ಲಿ 157 ರನ್‌ಗಳಿಂದ ನಾಲ್ಕನೇ ಟೆಸ್ಟ್ ಗೆದ್ದಿತು. ಹೀಗಾಗಿ ನಾಲ್ಕು ಪಂದ್ಯಗಳ ನಂತರ ಭಾರತ ತಂಡ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಇದಾದ ಬಳಿಕ ಟೀಂ ಇಂಡಿಯಾದ ಸ್ಟಾರ್ ಆಟಗಾರರಿಗೆ ಕೊರೊನಾ ತಟ್ಟಿದ್ದು, ಐದನೇ ಪಂದ್ಯವನ್ನು ಮುಂದೂಡಲಾಗಿದೆ.
NEWS ? – @Jaspritbumrah93 to lead #TeamIndia in the fifth Test Match against England.@RishabhPant17 will be the vice-captain for the match.#ENGvIND pic.twitter.com/ueWXfOMz1L
— BCCI (@BCCI) June 30, 2022
ಭಾರತ ಟೆಸ್ಟ್ ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ಉಪನಾಯಕ), ಕೆಎಸ್ ಭರತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ , ಪ್ರಸಿದ್ಧ್ ಕೃಷ್ಣ, ಮಯಾಂಕ್ ಅಗರ್ವಾಲ್
ತಂಡ ಪ್ರಕಟಿಸಿದ ಇಂಗ್ಲೆಂಡ್
ಈ ಮೊದಲು ಇಂಗ್ಲೆಂಡ್ ಕೂಡ ಈ ಪಂದ್ಯಕ್ಕೆ ಆಡುವ ಇಲೆವೆನ್ ಪ್ರಕಟಿಸಿತ್ತು. ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ ಅದೇ ತಂಡವನ್ನು ಆಯ್ಕೆ ಮಾಡಿದೆ. ಆ ತಂಡದಲ್ಲಿ ಒಂದೇ ಒಂದು ಬದಲಾವಣೆಯಾಗಿದೆ. ಜೇಮ್ಸ್ ಆಂಡರ್ಸನ್ ಟೆಸ್ಟ್ ಹಿಂತಿರುಗಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ XI: ಅಲೆಕ್ಸ್ ಲೀಸ್, ಜ್ಯಾಕ್ ಕ್ರೌಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಮ್ಯಾಥ್ಯೂ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
Published On - 6:34 pm, Thu, 30 June 22