AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ

India playing XI vs Afghanistan: ಓಪನರ್​ಗಳಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದು, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಹಾಗೆಯೇ 5ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ
ಟೀಮ್ ಇಂಡಿಯಾ
TV9 Web
| Updated By: ಝಾಹಿರ್ ಯೂಸುಫ್|

Updated on: Oct 10, 2023 | 6:26 PM

Share

ಏಕದಿನ ವಿಶ್ವಕಪ್​ನ 9ನೇ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಅ.11) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಶುಭ್​ಮನ್ ಗಿಲ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಕೂಡ ಇಶಾನ್ ಕಿಶನ್ ಅವರೇ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ಓಪನರ್​ಗಳಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದು, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಹಾಗೆಯೇ 5ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ದೆಹಲಿ ಪಿಚ್​ ಬ್ಯಾಟಿಂಗ್​ಗೆ ಸಹಕಾರಿ. ಹೀಗಾಗಿ ಹಿರಿಯ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಸ್ಪಿನ್ನರ್​ ಆಗಿ ಕುಲ್ದೀಪ್ ಯಾದವ್ ಆಡಿದ್ರೆ, ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

  1. ರೋಹಿತ್ ಶರ್ಮಾ
  2. ಇಶಾನ್ ಕಿಶನ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್
  6. ಹಾರ್ದಿಕ್ ಪಾಂಡ್ಯ
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಕುಲ್ದೀಪ್ ಯಾದವ್
  10. ಜಸ್​ಪ್ರೀತ್ ಬುಮ್ರಾ
  11. ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Virat Kohli: ದಾಖಲೆಗಳ ಮೇಲೆ ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.