ಏಕದಿನ ವಿಶ್ವಕಪ್ನ 9ನೇ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಅ.11) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಶುಭ್ಮನ್ ಗಿಲ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಕೂಡ ಇಶಾನ್ ಕಿಶನ್ ಅವರೇ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಅದರಂತೆ ಓಪನರ್ಗಳಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದು, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಹಾಗೆಯೇ 5ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ದೆಹಲಿ ಪಿಚ್ ಬ್ಯಾಟಿಂಗ್ಗೆ ಸಹಕಾರಿ. ಹೀಗಾಗಿ ಹಿರಿಯ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಆಡಿದ್ರೆ, ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
ಇದನ್ನೂ ಓದಿ: Virat Kohli: ದಾಖಲೆಗಳ ಮೇಲೆ ದಾಖಲೆ ಬರೆದ ಕಿಂಗ್ ಕೊಹ್ಲಿ