IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ

India Playing XI: ಇಂದೋರ್​ನಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಏಕದಿನ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡವು 2ನೇ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 23, 2023 | 10:59 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯ 2ನೇ ಪಂದ್ಯವು ಭಾನುವಾರ (ಸೆ.23) ನಡೆಯಲಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿರಲಿಲ್ಲ.

ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ ಠಾಕೂರ್ ಕಳಪೆ ಪ್ರದರ್ಶನ ನೀಡಿದ್ದರು. 10 ಓವರ್​ಗಳನ್ನು ಎಸೆದಿದ್ದ ಠಾಕೂರ್ 78 ರನ್ ನೀಡಿದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ದ್ವಿತೀಯ ಪಂದ್ಯದಿಂದ ಶಾರ್ದೂಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಇನ್ನು ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಸಿರಾಜ್​ಗೆ ಸ್ಥಾನ ಸಿಗುವುದು ಖಚಿತ ಎನ್ನಬಹುದು.

ಈ ಒಂದು ಬದಲಾವಣೆಯ ಹೊರತಾಗಿ ಭಾರತ ತಂಡದ ಆಡುವ ಬಳಗದಲ್ಲಿ ಮಹತ್ವದ ಚೇಂಜ್ ಕಂಡು ಬರುವ ಸಾಧ್ಯತೆಯಿಲ್ಲ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಶುಭ್​ಮನ್ ಗಿಲ್
  2. ರುತುರಾಜ್ ಗಾಯಕ್ವಾಡ್
  3. ಶ್ರೇಯಸ್ ಅಯ್ಯರ್
  4. ಕೆಎಲ್ ರಾಹುಲ್ (ನಾಯಕ)
  5. ಇಶಾನ್ ಕಿಶನ್
  6. ಸೂರ್ಯಕುಮಾರ್ ಯಾದವ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಶಮಿ
  11. ಮೊಹಮ್ಮದ್ ಸಿರಾಜ್.

2ನೇ ಪಂದ್ಯಕ್ಕೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ಪಾಲಿಗೆ ನಿರ್ಣಾಯಕ ಪಂದ್ಯ:

ಇಂದೋರ್​ನಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಏಕದಿನ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡವು 2ನೇ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಇದನ್ನೂ ಓದಿ: ಗೆದ್ದ ಟೀಮ್ ಇಂಡಿಯಾ: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕು. ಈ ಮೂಲಕ ಸರಣಿಯನ್ನು ಮೂರನೇ ಪಂದ್ಯದತ್ತ ಕೊಂಡೊಯ್ಯಬಹುದು. ಹೀಗಾಗಿ ಇಂದೋರ್​ನ ಹೋಲ್ಕರ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬಳಗದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Published On - 10:58 pm, Sat, 23 September 23

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ