IND vs AUS: 4 ಆಟಗಾರರ ನಡುವೆ ಪೈಪೋಟಿ: ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?

| Updated By: ಝಾಹಿರ್ ಯೂಸುಫ್

Updated on: Sep 19, 2022 | 2:10 PM

India Playing XI vs Australia: ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್.

IND vs AUS: 4 ಆಟಗಾರರ ನಡುವೆ ಪೈಪೋಟಿ: ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?
Team India
Follow us on

India vs Australia T20: ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನ ಬಳಿಕ ಇದೀಗ ಟೀಮ್ ಇಂಡಿಯಾ (Team India) ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ ಶುರುವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾದ ಅನಿವಾರ್ಯತೆಯಿದೆ.

ಏಕೆಂದರೆ ಏಷ್ಯಾಕಪ್​ನಲ್ಲಿ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಾಡಿಕೊಂಡ ಬದಲಾವಣೆಗಳೇ ಟೀಮ್ ಇಂಡಿಯಾ ಪಾಲಿಗೆ ಮುಳುವಾಯಿತು ಎಂದರೆ ತಪ್ಪಾಗಲಾರದು. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಭಾರತ ತಂಡವು ಖಾಯಂ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಿಕೊಳ್ಳಬೇಕಿದೆ.

ಆದರೆ ಅಂತಹದೊಂದು ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡುವ ಸಂದಿಗ್ಧತೆ ಸಿಲುಕಿದ್ದಾರೆ ರೋಹಿತ್ ಶರ್ಮಾ. ಏಕೆಂದರೆ ತಂಡದಲ್ಲಿ ನಾಲ್ವರು ಆಟಗಾರರ ನಡುವೆ 2 ಸ್ಥಾನಗಳಿಗಾಗಿ ಭರ್ಜರಿ ಪೈಪೋಟಿ ಇದೆ. ಇಲ್ಲಿ ವಿಕೆಟ್ ಕೀಪರ್ ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬ ಪ್ರಶ್ನೆ ಒಂದೆಡೆಯಾದರೆ, ಆಲ್​ರೌಂಡರ್​ ಆಗಿ ಯಾರು ಕಣಕ್ಕಿಳಿಸಬೇಕೆಂಬುದು ಮತ್ತೊಂದು ದೊಡ್ಡ ಪ್ರಶ್ನೆ.

ಇದನ್ನೂ ಓದಿ
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅಂದರೆ ತಂಡದಲ್ಲಿ ವಿಕೆಟ್ ಕೀಪರ್​ಗಳಾಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ನಡುವೆ ನೇರ ಪೈಪೋಟಿ ಇದೆ. ಏಷ್ಯಾಕಪ್​ನಲ್ಲಿ ದಿನೇಶ್ ಕಾರ್ತಿಕ್ ಬದಲು ಕೆಲ ಪಂದ್ಯಗಳಲ್ಲಿ ಪಂತ್​ಗೆ ಅವಕಾಶ ನೀಡಲಾಗಿತ್ತು. ಇದಾಗ್ಯೂ ರಿಷಭ್ ಯಶಸ್ವಿಯಾಗಿರಲಿಲ್ಲ.
ಆದರೆ ಈ ಬಾರಿ ಯಾರಿಗೆ ಪ್ರಾಶಸ್ತ್ಯ ಸಿಗಲಿದೆ ಎಂಬುದೇ ಪ್ರಶ್ನೆ.

ಏಕೆಂದರೆ ಟಿ20 ವಿಶ್ವಕಪ್​ ಹಿನ್ನೆಲೆಯಲ್ಲಿ ಖಾಯಂ ವಿಕೆಟ್ ಕೀಪರ್​ನ ಆಯ್ಕೆ ಮಾಡಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ಇಬ್ಬರಲ್ಲಿ ಒಬ್ಬರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಬೇಕಾಗುತ್ತದೆ. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ ಕಾದು ನೋಡಬೇಕಿದೆ.

ಇನ್ನು ಮತ್ತೊಂದೆಡೆ ರವೀಂದ್ರ ಜಡೇಜಾ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇಲ್ಲೂ ಕೂಡ ಅಕ್ಷರ್ ಪಟೇಲ್ ಹಾಗೂ ದೀಪಕ್ ಹೂಡಾ ನಡುವೆ ಪೈಪೋಟಿಯಿದೆ. ಒಂದು ವೇಳೆ ಎಡಗೈ ಸ್ಪಿನ್ನರ್​ಗೆ ಮಣೆಹಾಕಿದರೆ ಅಕ್ಷರ್ ಪಟೇಲ್ ಸ್ಥಾನ ಪಡೆಯಬಹುದು. ಹಾಗೆಯೇ ಬ್ಯಾಟಿಂಗ್ ಆಲ್​ರೌಂಡರ್​ ಆಯ್ಕೆಗೆ ಒತ್ತು ನೀಡಿದರೆ ದೀಪಕ್ ಹೂಡಾಗೆ ಅವಕಾಶ ಸಿಗಬಹುದು. ಹೀಗಾಗಿ ಇವರಿಬ್ಬರಲ್ಲಿ ಯಾರಿಗೆ ಮಣೆಹಾಕಲಿದ್ದಾರೆ ಎಂಬುದೇ ಈಗ ಕುತೂಹಲ.

ಒಟ್ಟಿನಲ್ಲಿ ಸ್ಟಾರ್ ಆಟಗಾರರ ದಂಡೇ ಇರುವ ಟೀಮ್ ಇಂಡಿಯಾದಲ್ಲಿ ಇದೀಗ ಪ್ಲೇಯಿಂಗ್ ಇಲೆವೆನ್ ರೂಪಿಸುವುದೇ ದೊಡ್ಡ ಸವಾಲು. ಟಿ20 ವಿಶ್ವಕಪ್​ಗೂ ಮುನ್ನ ಈ ಸವಾಲಿಗೆ ಉತ್ತರ ಕಂಡುಕೊಳ್ಳಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿದೆ ಟೀಮ್ ಇಂಡಿಯಾ. ಅದರಂತೆ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಯಾರಿಗೆಲ್ಲಾ ಚಾನ್ಸ್ ನೀಡಲಿದೆ ಕಾದು ನೋಡಬೇಕಿದೆ.

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.