ಸ್ಟಾರ್ ಆಟಗಾರ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

| Updated By: ಝಾಹಿರ್ ಯೂಸುಫ್

Updated on: Oct 07, 2023 | 10:20 PM

India Playing XI: ಶುಭ್​ಮನ್​ ಗಿಲ್ ಹೊರಗುಳಿದಿರುವ ಕಾರಣ ಇಶಾನ್ ಕಿಶನ್​ಗೆ ಚಾನ್ಸ್ ಸಿಗಲಿದೆ. ಅದರಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ, 5ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ.

ಸ್ಟಾರ್ ಆಟಗಾರ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us on

ಏಕದಿನ ವಿಶ್ವಕಪ್ 2023ರ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗಿದೆ. ಭಾನುವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕಣಕ್ಕಿಳಿಯುವುದಿಲ್ಲ. ಡೆಂಗಿ ಜ್ವರದಿಂದ ಬಳಲುತ್ತಿರುವ ಶುಭ್​ಮನ್ ಗಿಲ್​ಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಗಿಲ್ ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗಿದೆ.

ಇನ್ನು ಶುಭ್​ಮನ್​ ಗಿಲ್ ಹೊರಗುಳಿದಿರುವ ಕಾರಣ ಇಶಾನ್ ಕಿಶನ್​ಗೆ ಚಾನ್ಸ್ ಸಿಗಲಿದೆ. ಅದರಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ.

4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ, 5ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಆಲ್ ರೌಂಡರ್​ ಆಗಿ ​ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಖಚಿತ. ಆದರೆ ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಅಭ್ಯಾಸದ ವೇಳೆ ಗಾಯಗೊಂಡಿದ್ದು, ನೋವು ಕಡಿಮೆಯಾದರೆ ಮಾತ್ರ ಕಣಕ್ಕಿಳಿಯಲಿದ್ದಾರೆ.

ಇನ್ನು ಸ್ಪಿನ್ನರ್​ಗಳಾಗಿ ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚು. ಏಕೆಂದರೆ ಚೆನ್ನೈನ ಪಿಚ್​ ಸ್ಪಿನ್ನರ್​ಗಳಿಗೆ ಸಹಕಾರಿ. ಹಾಗೆಯೇ ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್​ಪ್ರೀತ್ ಬುಮ್ರಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1.  ರೋಹಿತ್ ಶರ್ಮಾ
  2.  ಇಶಾನ್ ಕಿಶನ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5.  ಕೆಎಲ್ ರಾಹುಲ್
  6.  ಹಾರ್ದಿಕ್ ಪಾಂಡ್ಯ
  7.  ರವೀಂದ್ರ ಜಡೇಜಾ
  8.  ರವಿಚಂದ್ರನ್ ಅಶ್ವಿನ್
  9.  ಕುಲ್ದೀಪ್ ಯಾದವ್
  10.  ಜಸ್​ಪ್ರೀತ್ ಬುಮ್ರಾ
  11. ಮೊಹಮ್ಮದ್ ಸಿರಾಜ್

ಇದನ್ನೂ ಓದಿ: ತೂಫಾನ್ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮಾರ್ಕ್ರಾಮ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.