ಟೀಮ್ ಇಂಡಿಯಾದಲ್ಲಿ 1 ಬದಲಾವಣೆ ಖಚಿತ: ಹೀಗಿರಲಿದೆ ಪ್ಲೇಯಿಂಗ್ 11

India vs Pakistan: ಪಾಕಿಸ್ತಾನ್ ವಿರುದ್ಧದ ಮೊದಲ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಕಣಕ್ಕಿಳಿದಿದ್ದರು. ಆಲ್​ರೌಂಡರ್ ಕೋಟಾದಲ್ಲಿ ಸ್ಥಾನ ಪಡೆದಿದ್ದರೂ ಶಾರ್ದೂಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಈ ಪಂದ್ಯದಿಂದ ಠಾಕೂರ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ.

ಟೀಮ್ ಇಂಡಿಯಾದಲ್ಲಿ 1 ಬದಲಾವಣೆ ಖಚಿತ: ಹೀಗಿರಲಿದೆ ಪ್ಲೇಯಿಂಗ್ 11
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 09, 2023 | 10:59 PM

ಏಷ್ಯಾಕಪ್​ನ ಸೂಪರ್ ಫೋರ್​ ಹಂತದ 3ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊನ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಪಾಕಿಸ್ತಾನ್ ತಂಡವು ಈಗಾಗಲೇ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಆದರೆ ಟೀಮ್ ಇಂಡಿಯಾ ಆಡುವ ಬಳಗವನ್ನು ಆಯ್ಕೆ ಮಾಡುವುದೇ ದೊಡ್ಡ ಸವಾಲು.

ಏಕೆಂದರೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಇದೀಗ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಹಾಗೆಯೇ ನೇಪಾಳ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಕೂಡ ಈಗ ತಂಡದಲ್ಲಿದ್ದಾರೆ.

ಈ ಇಬ್ಬರು ಆಟಗಾರರು ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರು. ಆದರೆ ಇದೀಗ ಇವರಿಗೆ ಸ್ಥಾನ ಕಲ್ಪಿಸಲು ಯಾರನ್ನು ಕೈ ಬಿಡಬೇಕೆಂಬ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಮೊದಲ ಸುತ್ತಿನಲ್ಲಿ ಪಾಕಿಸ್ತಾನ್ ವಿರುದ್ಧ ಕೆಎಲ್ ರಾಹುಲ್ ಬದಲಿಯಾಗಿ ಕಾಣಿಸಿಕೊಂಡಿದ್ದ ಇಶಾನ್ ಕಿಶನ್ 82 ರನ್ ಬಾರಿಸುವ ಮೂಲಕ ಮಿಂಚಿದ್ದರು. ಅಲ್ಲದೆ ಕಳೆದ ನಾಲ್ಕು ಏಕದಿನ ಇನಿಂಗ್ಸ್​ಗಳಲ್ಲಿ ಕಿಶನ್ ಸತತ 4 ಅರ್ಧಶತಕಗಳನ್ನು ಬಾರಿಸಿ ತಮ್ಮ ಫಾರ್ಮ್ ಅನ್ನು ನಿರೂಪಿಸಿದ್ದಾರೆ.

ಇನ್ನು ನೇಪಾಳ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಕಾರಣ ಜಸ್​ಪ್ರೀತ್ ಬುಮ್ರಾ ಸ್ಥಾನದಲ್ಲಿ ಮೊಹಮ್ಮದ್ ಶಮಿ ಕಣಕ್ಕಿಳಿದಿದ್ದರು. ಇತ್ತ ಮುಂಬರುವ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಶಮಿಗೆ ಮತ್ತಷ್ಟು ಅವಕಾಶ ನೀಡಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಕೆಎಲ್ ರಾಹುಲ್ ಹಾಗೂ ಬುಮ್ರಾಗೆ ಸ್ಥಾನ ಕಲ್ಪಿಸಲು ಯಾರನ್ನು ಕೈ ಬಿಡುವುದು ಎಂಬ ಚಿಂತೆಯೊಂದು ಟೀಮ್ ಇಂಡಿಯಾಗೆ ಶುರುವಾಗಿದೆ.

ಇಶಾನ್ ಕಿಶನ್​ಗೆ ಅವಕಾಶ?

ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅತ್ಯುತ್ತಮ ಫಾರ್ಮ್​ನಲ್ಲಿರುವ ಕಾರಣ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿಲ್ಲ. ಒಂದು ವೇಳೆ ಕಿಶನ್ ಅವರನ್ನು ಕಣಕ್ಕಿಳಿಸಿದರೆ ಕೆಎಲ್ ರಾಹುಲ್ ಬೆಂಚ್ ಕಾಯಬೇಕಾಗಿ ಬರಬಹುದು. ಅಲ್ಲದೆ ಈ ಪಂದ್ಯದಲ್ಲಿ ವಿಫಲರಾಗುವ ಆಟಗಾರನ ಸ್ಥಾನದಲ್ಲಿ ಮುಂದಿನ ಪಂದ್ಯದಲ್ಲಿ ರಾಹುಲ್​ಗೆ ಅವಕಾಶ ನೀಡಬಹುದು.

ಶಮಿ ಅಥವಾ ಶಾರ್ದೂಲ್ ಠಾಕೂರ್?

ಪಾಕಿಸ್ತಾನ್ ವಿರುದ್ಧದ ಮೊದಲ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಕಣಕ್ಕಿಳಿದಿದ್ದರು. ಆಲ್​ರೌಂಡರ್ ಕೋಟಾದಲ್ಲಿ ಸ್ಥಾನ ಪಡೆದಿದ್ದರೂ ಶಾರ್ದೂಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಈ ಪಂದ್ಯದಿಂದ ಠಾಕೂರ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ. ಬದಲಾಗಿ ಮೊಹಮ್ಮದ್ ಶಮಿಗೆ ಚಾನ್ಸ್ ನೀಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.

  1. ರೋಹಿತ್ ಶರ್ಮಾ (ನಾಯಕ)
  2. ಶುಭ್​ಮನ್ ಗಿಲ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಇಶಾನ್ ಕಿಶನ್ (ವಿಕೆಟ್ ಕೀಪರ್)
  6. ಹಾರ್ದಿಕ್ ಪಾಂಡ್ಯ (ಉಪ ನಾಯಕ)
  7. ರವೀಂದ್ರ ಜಡೇಜಾ
  8. ಕುಲ್ದೀಪ್ ಯಾದವ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಶಮಿ
  11. ಮೊಹಮ್ಮದ್ ಸಿರಾಜ್.

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್:

  1. ಬಾಬರ್ ಆಝಂ (ನಾಯಕ)
  2. ಶಾದಾಬ್ ಖಾನ್ (ಉಪನಾಯಕ)
  3. ಫಖರ್ ಝಮಾನ್
  4. ಇಮಾಮ್ ಉಲ್ ಹಕ್
  5. ಸಲ್ಮಾನ್ ಅಲಿ ಆಘಾ
  6. ಇಫ್ತಿಕರ್ ಅಹ್ಮದ್
  7. ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್)
  8. ಫಯೀಮ್ ಅಶ್ರಫ್
  9. ನಸೀಮ್ ಶಾ
  10. ಶಾಹೀನ್ ಅಫ್ರಿದಿ
  11. ಹ್ಯಾರಿಸ್ ರೌಫ್.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ಡೇವಿಡ್ ವಾರ್ನರ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.