India Playing XI vs SL: ಒಂದು ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11
India Playing XI vs Sri Lanka: ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ರವಿ ಬಿಷ್ಣೋಯ್ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದರು.
Asia Cup 2022: ಏಷ್ಯಾಕಪ್ನ ಸೂಪರ್-4 ಹಂತದ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು (India vs Sri Lanka) ಎದುರಿಸಲಿದೆ. ಟೀಮ್ ಇಂಡಿಯಾ (Team India) ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಏಕೆಂದರೆ ಈಗಾಗಲೇ ಲಂಕಾ ತಂಡವು ಸೂಪರ್-4 ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಪಾಯಿಂಟ್ ಟೇಬಲ್ನಲ್ಲಿ ಮೇಲೇರಬಹುದು. ಅಲ್ಲದೆ ಈ ಪಂದ್ಯದಲ್ಲಿ ಭಾರತ ತಂಡ ಸೋತರೆ ಬಹುತೇಕ ಏಷ್ಯಾಕಪ್ನಿಂದ ಹೊರಬೀಳಲಿದೆ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ನೊಂದಿಗೆ ಕಣಕ್ಕಿಳಿಯಬಹುದು.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದು ಖಚಿತ. ಇನ್ನು 3ನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್ಮನ್ ರಿಷಭ್ ಪಂತ್ ಆಡಬಹುದು. ಇನ್ನು 6ನೇ ಕ್ರಮಾಂಕದಲ್ಲಿ ದೀಪಕ್ ಹೂಡಾ ಕಣಕ್ಕಿಳಿದರೆ, ಫಿನಿಶರ್ ಪಾತ್ರದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ.
ಇನ್ನು ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ರವಿ ಬಿಷ್ಣೋಯ್ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದರು. ಇದಾಗ್ಯೂ ಕಳೆದ ಎರಡು ಪಂದ್ಯಗಳಲ್ಲಿ ಯುಜ್ವೇಂದ್ರ ಚಹಾಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಪಾಕ್ ವಿರುದ್ದ ಚಹಾಲ್ 4 ಓವರ್ಗಳಲ್ಲಿ ಬರೋಬ್ಬರಿ 43 ರನ್ ನೀಡಿದ್ದರು. ಹೀಗಾಗಿ ಚಹಾಲ್ ಬದಲಿಗೆ ಅಕ್ಷರ್ ಪಟೇಲ್ಗೆ ಸ್ಥಾನ ನೀಡುವ ಸಾಧ್ಯತೆಯಿದೆ.
ಏಕೆಂದರೆ ಶಾರ್ಜಾ ಮೈದಾನವು ಚೇಸಿಂಗ್ಗೆ ಅನುಕೂಲಕರ ಪಿಚ್ ಅನ್ನು ಹೊಂದಿದೆ. ಇಲ್ಲಿ ಚಹಾಲ್ ಬದಲು ಅಕ್ಷರ್ ಪಟೇಲ್ರನ್ನು ಆಯ್ಕೆ ಮಾಡುವುದರಿಂದ ಬ್ಯಾಟಿಂಗ್ ಲೈನಪ್ ಅನ್ನು ಕೂಡ ಬಲಿಷ್ಠಗೊಳಿಸಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
- ರೋಹಿತ್ ಶರ್ಮಾ (ನಾಯಕ)
- ಕೆಎಲ್ ರಾಹುಲ್
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್ ಯಾದವ್
- ರಿಷಭ್ ಪಂತ್ (ವಿಕೆಟ್ ಕೀಪರ್)
- ದೀಪಕ್ ಹೂಡಾ
- ಹಾರ್ದಿಕ್ ಪಾಂಡ್ಯ
- ಅಕ್ಷರ್ ಪಟೇಲ್
- ರವಿ ಬಿಷ್ಣೋಯ್
- ಭುವನೇಶ್ವರ್ ಕುಮಾರ್
- ಅರ್ಷದೀಪ್ ಸಿಂಗ್
ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್.
ಮೀಸಲು ಆಟಗಾರರು: ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.