ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಕುತ್ತು: ಯಾರಿಗೆ ಸಿಗಲಿದೆ ಚಾನ್ಸ್​?

| Updated By: ಝಾಹಿರ್ ಯೂಸುಫ್

Updated on: Oct 31, 2023 | 10:08 PM

India vs Sri Lanka: ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸೆಮಿಫೈನಲ್ ಆಡುವುದು ಖಚಿತವಾಗಲಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ಹಾಗೂ ನೆದರ್​ಲೆಂಡ್ಸ್​ ವಿರುದ್ಧ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಕುತ್ತು: ಯಾರಿಗೆ ಸಿಗಲಿದೆ ಚಾನ್ಸ್​?
Shreyas Iyer
Follow us on

ಏಕದಿನ ವಿಶ್ವಕಪ್​ 2023 ರಲ್ಲಿ ಟೀಮ್ ಇಂಡಿಯಾ ಸೋಲಿಲ್ಲದ ಸರದಾರನಾಗಿ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ರೋಹಿತ್ ಶರ್ಮಾ ಪಡೆ ಇದೀಗ 7ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಎದುರಾಳಿ ಶ್ರೀಲಂಕಾ.

ಲಂಕಾ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸೆಮಿಫೈನಲ್ ಆಡುವುದು ಖಚಿತವಾಗಲಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ಹಾಗೂ ನೆದರ್​ಲೆಂಡ್ಸ್​ ವಿರುದ್ಧ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ಆರು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಪಂದ್ಯಗಳಲ್ಲಿ ಅಯ್ಯರ್ ಕ್ರಮವಾಗಿ 0, 25, 53, 19, 33 ಮತ್ತು 4 ರನ್​ಗಳಿಸಿ ಔಟಾಗಿದ್ದರು.

ಅಂದರೆ 6 ಪಂದ್ಯಗಳಿಂದ ಕೇವಲ 134 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಅತ್ತ ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧ 49 ರನ್​ ಬಾರಿಸಿ ಮಿಂಚಿದ್ದರು. ಇದೀಗ ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಮಾಡಿದರೆ ಓರ್ವ ಆಟಗಾರ ಹೊರಗುಳಿಯಲೇಬೇಕಾಗುತ್ತದೆ.

ಇಲ್ಲಿ ಶ್ರೇಯಸ್ ಅಯ್ಯರ್ ಅಥವಾ ಸೂರ್ಯಕುಮಾರ್ ಯಾದವ್…ಇವರಿಬ್ಬರಲ್ಲಿ ಯಾರು ಹೊರಗುಳಿಯಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ಶ್ರೇಯಸ್ ಅಯ್ಯರ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರುತ್ತಿಲ್ಲ. ಇತ್ತ ಸಿಕ್ಕ ಅವಕಾಶದಲ್ಲಿ ಉತ್ತಮವಾಗಿ ಆಡುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯಗಾಗಿ ಯಾರು ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

ಇತ್ತ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೂ ಮುನ್ನ ಬ್ಯಾಟಿಂಗ್ ನೂನ್ಯತೆಗಳನ್ನು ಸರಿಪಡಿಸಿಕೊಳ್ಳುವ ಇರಾದೆಯಲ್ಲಿದೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್, ಈ ಮೂವರಲ್ಲಿ ಯಾರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಗಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ: Virat Kohli: ಒಂದೇ ಒಂದು ರನ್ ​ಗಳಿಸದೇ ದಾಖಲೆ ಬರೆದ ವಿರಾಟ್ ಕೊಹ್ಲಿ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.