IND vs WI: ಟಾಸ್ ಗೆದ್ದ ವೆಸ್ಟ್ ಇಂಡೀಸ್: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ

India Playing XI: ಅಂಕಿ ಅಂಶಗಳ ಪ್ರಕಾರ ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಮೇಲುಗೈ ಸಾಧಿಸಿರುವುದು ಸ್ಪಷ್ಟ. ಆದರೆ ಕಳೆದೆರಡು ದಶಕದಿಂದ ಕೆರಿಬಿಯನ್ನರ ವಿರುದ್ಧ ಟೀಮ್ ಇಂಡಿಯಾ ಪಾರುಪತ್ಯ ಸಾಧಿಸುತ್ತಾ ಬಂದಿದೆ.

IND vs WI: ಟಾಸ್ ಗೆದ್ದ ವೆಸ್ಟ್ ಇಂಡೀಸ್: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ
West Indies vs India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 20, 2023 | 7:08 PM

India vs West Indies: ಪೋರ್ಟ್ ಆಫ್ ಸ್ಪೇನ್​ನ ಕ್ವೀನ್ಸ್ ಪಾರ್ಕ್​ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಭಾರತ ತಂಡವು ಮೊದಲು ಇನಿಂಗ್ಸ್​ ಆರಂಭಿಸಲಿದೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ  ವೇಗಿ ಮುಖೇಶ್ ಕುಮಾರ್ ಪಾದಾರ್ಪಣೆ ಮಾಡುತ್ತಿದ್ದು, ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ ಠಾಕೂರ್ ಹೊರಗುಳಿದಿದ್ದಾರೆ.

ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 141 ರನ್​ಗಳಿಂದ ಗೆದ್ದು ಬೀಗಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಮಾತ್ರ ವೆಸ್ಟ್​ ಇಂಡೀಸ್ ತಂಡವು ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಬಹುದು. ಹೀಗಾಗಿಯೇ ಈ ಪಂದ್ಯವು ವಿಂಡೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

100ನೇ ಟೆಸ್ಟ್ ಪಂದ್ಯ:

ವಿಶೇಷ ಎಂದರೆ ಈ ಪಂದ್ಯವು ಭಾರತ-ವೆಸ್ಟ್ ಇಂಡೀಸ್ ನಡುವಣ 100ನೇ ಟೆಸ್ಟ್ ಪಂದ್ಯ. ಉಭಯ ತಂಡಗಳು ಇದುವರೆಗೆ 99 ಟೆಸ್ಟ್​ ಪಂದ್ಯಗಳನ್ನಾಡಿದ್ದು, ಈ ವೇಳೆ ಭಾರತ ತಂಡವು 23 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ವಿಂಡೀಸ್ ಬರೋಬ್ಬರಿ 30 ಪಂದ್ಯಗಳನ್ನು ಗೆದ್ದುಕೊಂಡಿದೆ. ಹಾಗೆಯೇ 46 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಇಲ್ಲಿ ಟೀಮ್ ಇಂಡಿಯಾ ವಿರುದ್ಧ ವೆಸ್ಟ್ ಇಂಡೀಸ್ ಮೇಲುಗೈ ಸಾಧಿಸಿರುವುದು ಸ್ಪಷ್ಟ. ಆದರೆ ಕಳೆದೆರಡು ದಶಕದಿಂದ ಕೆರಿಬಿಯನ್ನರ ವಿರುದ್ಧ ಟೀಮ್ ಇಂಡಿಯಾ ಪಾರುಪತ್ಯ ಸಾಧಿಸುತ್ತಾ ಬಂದಿದೆ.

ಅಂದರೆ ವೆಸ್ಟ್ ಇಂಡೀಸ್ ಕೊನೆಯ ಬಾರಿ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದಿದ್ದು 2002 ರಲ್ಲಿ. ಇದಾದ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 8 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ.

ಇದೀಗ 100ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸುವ ಉತ್ಸಾಹದಲ್ಲಿರುವ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಅದರಂತೆ ಭಾರತ ತಂಡದ ಪ್ಲೇಯಿಂಗ್ 11 ಈ ಕೆಳಗಿನಂತಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11:

  • 1- ರೋಹಿತ್ ಶರ್ಮಾ
  • 2- ಯಶಸ್ವಿ ಜೈಸ್ವಾಲ್
  • 3- ಶುಭ್​ಮನ್ ಗಿಲ್
  • 4- ವಿರಾಟ್ ಕೊಹ್ಲಿ
  • 5- ಅಜಿಂಕ್ಯ ರಹಾನೆ
  • 6- ರವೀಂದ್ರ ಜಡೇಜಾ
  • 7- ಇಶಾನ್ ಕಿಶನ್ (ವಿಕೆಟ್ ಕೀಪರ್)
  • 8- ಆರ್​. ಅಶ್ವಿನ್
  • 9- ಮುಖೇಶ್ ಕುಮಾರ್
  • 10- ಜಯದೇವ್ ಉನದ್ಕತ್
  • 11- ಮೊಹಮ್ಮದ್ ಸಿರಾಜ್.
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ