India vs New Zealand: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತದಲ್ಲಿ ಬರೋಬ್ಬರಿ 4 ಬದಲಾವಣೆಯಂತೆ!
India’s Predicted Playing XI Against New Zealand: ಹಾರ್ದಿಕ್ ಪಾಂಡ್ಯ ಲಭ್ಯತೆ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ. ಎಲ್ಲಾದರು ಇವರು ಆಡುವುದಿಲ್ಲ ಎಂದಾದರೆ ಶಾರ್ದೂಲ್ ಠಾಕೂರ್ಗೆ ಸ್ಥಾನ ನೀಡಬಹುದು. ಅಂತೆಯೆ ಭುವನೇಶ್ವರ್ ಕುಮಾರ್ ಸ್ವಿಂಗ್ ಕೂಡ ಇಲ್ಲಿ ವರ್ಕ್ ಆಗುತ್ತಿಲ್ಲ.
ಐಸಿಸಿ ಟಿ20 ವಿಶ್ವಕಪ್ನಲ್ಲಿ (T20 World Cup) ಪಾಕಿಸ್ತಾನ (Pakistan) ವಿರುದ್ಧ ಸೋತು ಅಭಿಯಾನ ಆರಂಭಿಸಿರುವ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡ ಇಂದಿನ 28ನೇ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿದೆ. ವಿರಾಟ್ ಕೊಹ್ಲಿ (Viral Kohli) ಹಾಗೂ ಕೇನ್ ವಿಲಿಯಮ್ಸನ್ (Kane Williamson) ಪಡೆಯ ಕಾದಾಟಕ್ಕೆ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ವೇದಿಕೆ ಸಿದ್ದವಾಗಿದೆ. ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ (Team India) 10 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತ್ತು. ಆ ಮೂಲಕ ಟೂರ್ನಿಯಲ್ಲಿ ಭಾರತ ತಂಡ ನೀರಸ ಆರಂಭ ಕಂಡಿತ್ತು. ಹೀಗಾಗಿ ಸೆಮೀಸ್ ಹಂತಕ್ಕೇರುವ ದೃಷ್ಟಿಯಿಂದ ಎರಡು ತಂಡಗಳಿಗೂ ಈ ಪಂದ್ಯ ಕ್ವಾರ್ಟಫೈನಲ್ ಹಣಾಹಣಿಯಂತಿದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ಕೊಹ್ಲಿ ಪಡೆಯ ಪ್ಲೇಯಿಂಗ್ XI ನಲ್ಲಿ (India Playing XI) 4 ಬದಲಾವಣೆ ಆಗುವ ನಿರೀಕ್ಷೆ ಇದೆಯಂತೆ.
ಹೌದು, ಟೀಮ್ ಇಂಡಿಯಾ ಪರ ಓಪನರ್ಗಳಾಗಿ ರೋಹಿತ್ ಶರ್ಮಾ ಮತ್ತು ಕೆ. ಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇವರು ಅಭ್ಯಾಸ ಪಂದ್ಯದಲ್ಲಿ ನೀಡಿದ ಪ್ರದರ್ಶನವನ್ನು ಮತ್ತೆ ಮರುಕಳಿಸಬೇಕಿದೆ. ಮೂರನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಆಡಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಮಾಲ್ ಮಾಡುತ್ತಿಲ್ಲ. ಕಳೆದ ಐಪಿಎಲ್ನಿಂದಲೂ ಇವರು ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಅಭ್ಯಾಸ ಪಂದ್ಯದಲ್ಲೂ ಇವರ ಬ್ಯಾಟ್ ಸದ್ದು ಮಾಡಲಿಲ್ಲ. ಹೀಗಾಗಿ ಸೂರ್ಯಕುಮಾರ್ ಬದಲು ಇಶಾನ್ ಕಿಶನ್ಗೆ ಅವಕಾಶ ಕೊಡುವ ಸಾಧ್ಯತೆ ದಟ್ಟವಾಗಿದೆ.
ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಲಭ್ಯತೆ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ. ಎಲ್ಲಾದರು ಇವರು ಆಡುವುದಿಲ್ಲ ಎಂದಾದರೆ ಶಾರ್ದೂಲ್ ಠಾಕೂರ್ಗೆ ಸ್ಥಾನ ನೀಡಬಹುದು. ಅಂತೆಯೆ ಭುವನೇಶ್ವರ್ ಕುಮಾರ್ ಸ್ವಿಂಗ್ ಕೂಡ ಇಲ್ಲಿ ವರ್ಕ್ ಆಗುತ್ತಿಲ್ಲ. ಹೀಗಾಗಿ ಆರ್. ಅಶ್ವಿನ್ ಸ್ಥಾನ ಪಡೆಯುವ ಸಂಭವವಿದೆ. ಹೀಗಾದಲ್ಲಿ ಪವರ್ ಪ್ಲೇನಲ್ಲಿ ಓರ್ವ ಸ್ಪಿನ್ನರ್ ಅನ್ನು ಬೌಲಿಂಗ್ ಮಾಡಲು ಬಿಡಬಹುದು. ಇನ್ನು ವರುಣ್ ಚಕ್ರವರ್ತಿ ಜೊತೆ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಪ್ರಮುಖ ಅಸ್ತ್ರಗಳಾಗಿದ್ದಾರೆ.
ಇತ್ತ ಕಿವೀಸ್ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ಕೇನ್ ವಿಲಿಯಮ್ಸನ್ ಹಾಗೂ ಮಾರ್ಟಿನ್ ಗುಪ್ಟಿಲ್ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಹೀಗಾಗಿ ಇವರು ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಪ್ರಮುಖ ಬ್ಯಾಟರ್‌ಗಳು ಅಲಭ್ಯರಾದರೆ ಬೌಲಿಂಗ್ ಪಡೆ ಮೇಲೆ ಒತ್ತಡ ಹೆಚ್ಚಾಗಲಿದೆ. ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಆಡಂ ಮಿಲ್ನೆ, ಕೈಲ್ ಜೇಮಿಸನ್ ಒಳಗೊಂಡ ಬಲಿಷ್ಠ ಬೌಲಿಂಗ್ ಪಡೆಯೇ ತಂಡದ ಶಕ್ತಿಯಾಗಿದೆ. ನ್ಯೂಜಿಲೆಂಡ್ ತಂಡ ಐಸಿಸಿ ಟೂರ್ನಿಗಳಲ್ಲಿ ಭಾರತ ತಂಡದ ಎದುರು ಮೇಲುಗೈ ಸಾಧಿಸಿರುವುದು ಅವರ ಪ್ಲಸ್ ಪಾಯಿಂಟ್ ಆಗಿದೆ.
Virat Kohli: ಪಾಕ್ ನಾಯಕನ ದಾಖಲೆ ಉಡೀಸ್ ಮಾಡ್ತಾರ ವಿರಾಟ್: ಒಂದಲ್ಲ ಎರಡಲ್ಲ ಮೂರು ದಾಖಲೆ ಮೇಲೆ ಕೊಹ್ಲಿ ಕಣ್ಣು
(India Playing XI vss New Zealand Big changes will happen in Virat Kohli Team India)
Published On - 10:40 am, Sun, 31 October 21