IND vs AUS: ಒಂದು ಬದಲಾವಣೆ ಖಚಿತ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India possible playing 11: ಆಲ್​ರೌಂಡರ್ ಆಗಿ​ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿ ಏಕೈಕ ಎಡಗೈ ಆಟಗಾರನಾಗಿರುವ ಕಾರಣ ಅಕ್ಷರ್ ಪಟೇಲ್​ ಅವರನ್ನು ಮುಂಚಿತವಾಗಿ ಕಣಕ್ಕಿಳಿಸಬಹುದು.

IND vs AUS: ಒಂದು ಬದಲಾವಣೆ ಖಚಿತ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 22, 2022 | 5:48 PM

India vs Australia 2nd T20: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ 2ನೇ ಟಿ20 ಪಂದ್ಯವು ನಾಳೆ (ಸೆ.23) ನಾಗ್ಪುರದಲ್ಲಿ ನಡೆಯಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಸೋಲನುವಿಸಿತ್ತು. ಹೀಗಾಗಿ 2ನೇ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೆ ಸರಣಿ ಆಸ್ಟ್ರೇಲಿಯಾ (Australia) ಪಾಲಾಗಲಿದೆ. ಹೀಗಾಗಿ ಭಾರತ ತಂಡವು ಗೆಲುವಿಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸಲಿದೆ.

ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದು ಖಚಿತ. ಇನ್ನು ಮೂರನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟ್​ ಬೀಸಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ.

ಹಾಗೆಯೇ 6ನೇ ಕ್ರಮಾಂಕದಲ್ಲಿ ಆಲ್​ರೌಂಡರ್​ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿ ಏಕೈಕ ಎಡಗೈ ಆಟಗಾರನಾಗಿರುವ ಕಾರಣ ಅಕ್ಷರ್ ಪಟೇಲ್​ ಅವರನ್ನು ಮುಂಚಿತವಾಗಿ ಕಣಕ್ಕಿಳಿಸಬಹುದು. ಇನ್ನು ಫಿನಿಶರ್ ಪಾತ್ರದಲ್ಲಿ ಈ ಪಂದ್ಯದಲ್ಲೂ ದಿನೇಶ್ ಕಾರ್ತಿಕ್​ಗೆ 7ನೇ ಕ್ರಮಾಂಕದಲ್ಲಿ ಅವಕಾಶ ನೀಡಬಹುದು. ಇದಾಗ್ಯೂ ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅದರಂತೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಬುಮ್ರಾ ಕಂಬ್ಯಾಕ್​ನಿಂದ ಉಮೇಶ್ ಯಾದವ್ ತಂಡದಿಂದ ಹೊರಗುಳಿಯಬಹುದು. ಒಂದು ವೇಳೆ ಬುಮ್ರಾ ಆಡದಿದ್ದರೆ, ಉಮೇಶ್ ಯಾದವ್ ಬದಲಿಗೆ ದೀಪಕ್ ಚಹರ್​ಗೆ ಚಾನ್ಸ್​ ಸಿಗಬಹುದು. ಹೀಗಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ ಎಂದೇ ಹೇಳಬಹುದು.

ಇನ್ನುಳಿದಂತೆ ವೇಗಿಗಳಾಗಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಸ್ಥಾನ ಪಡೆದರೆ, ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ 2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:

  1. ರೋಹಿತ್ ಶರ್ಮಾ
  2. ಕೆಎಲ್ ರಾಹುಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ಹಾರ್ದಿಕ್ ಪಾಂಡ್ಯ
  6. ಅಕ್ಷರ್ ಪಟೇಲ್
  7. ದಿನೇಶ್ ಕಾರ್ತಿಕ್
  8. ಹರ್ಷಲ್ ಪಟೇಲ್
  9. ಭುವನೇಶ್ವರ್ ಕುಮಾರ್
  10. ಜಸ್​ಪ್ರೀತ್ ಬುಮ್ರಾ
  11. ಯುಜ್ವೇಂದ್ರ ಚಹಾಲ್

Published On - 4:25 pm, Thu, 22 September 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್