India vs Australia 2nd T20: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ 2ನೇ ಟಿ20 ಪಂದ್ಯವು ನಾಳೆ (ಸೆ.23) ನಾಗ್ಪುರದಲ್ಲಿ ನಡೆಯಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಸೋಲನುವಿಸಿತ್ತು. ಹೀಗಾಗಿ 2ನೇ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೆ ಸರಣಿ ಆಸ್ಟ್ರೇಲಿಯಾ (Australia) ಪಾಲಾಗಲಿದೆ. ಹೀಗಾಗಿ ಭಾರತ ತಂಡವು ಗೆಲುವಿಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ.
ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದು ಖಚಿತ. ಇನ್ನು ಮೂರನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ.
ಹಾಗೆಯೇ 6ನೇ ಕ್ರಮಾಂಕದಲ್ಲಿ ಆಲ್ರೌಂಡರ್ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿ ಏಕೈಕ ಎಡಗೈ ಆಟಗಾರನಾಗಿರುವ ಕಾರಣ ಅಕ್ಷರ್ ಪಟೇಲ್ ಅವರನ್ನು ಮುಂಚಿತವಾಗಿ ಕಣಕ್ಕಿಳಿಸಬಹುದು. ಇನ್ನು ಫಿನಿಶರ್ ಪಾತ್ರದಲ್ಲಿ ಈ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ಗೆ 7ನೇ ಕ್ರಮಾಂಕದಲ್ಲಿ ಅವಕಾಶ ನೀಡಬಹುದು. ಇದಾಗ್ಯೂ ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.
ಅದರಂತೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಬುಮ್ರಾ ಕಂಬ್ಯಾಕ್ನಿಂದ ಉಮೇಶ್ ಯಾದವ್ ತಂಡದಿಂದ ಹೊರಗುಳಿಯಬಹುದು. ಒಂದು ವೇಳೆ ಬುಮ್ರಾ ಆಡದಿದ್ದರೆ, ಉಮೇಶ್ ಯಾದವ್ ಬದಲಿಗೆ ದೀಪಕ್ ಚಹರ್ಗೆ ಚಾನ್ಸ್ ಸಿಗಬಹುದು. ಹೀಗಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ ಎಂದೇ ಹೇಳಬಹುದು.
ಇನ್ನುಳಿದಂತೆ ವೇಗಿಗಳಾಗಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಸ್ಥಾನ ಪಡೆದರೆ, ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ 2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
Published On - 4:25 pm, Thu, 22 September 22