AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing XI: ಕ್ಲೈಮ್ಯಾಕ್ಸ್ ಕದನಕ್ಕೆ ಎರಡು ಪ್ರಮುಖ ಬದಲಾವಣೆ: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

South Africa vs India: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಅಂತಿಮ ಟೆಸ್ಟ್‌ ಪಂದ್ಯ ಕೇಪ್‌ ಟೌನ್‌ ಕ್ರೀಡಾಂಗಣದಲ್ಲಿ ಜನವರಿ 11 ರಿಂದ ಶುರುವಾಗಲಿದೆ. ಈ ಸಲುವಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇದೆ.

India Playing XI: ಕ್ಲೈಮ್ಯಾಕ್ಸ್ ಕದನಕ್ಕೆ ಎರಡು ಪ್ರಮುಖ ಬದಲಾವಣೆ: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ
India Playing XI vs SA 3rs Test
TV9 Web
| Updated By: Vinay Bhat|

Updated on: Jan 10, 2022 | 9:46 AM

Share

ಹರಿಣಗಳ ನಾಡಿನಲ್ಲಿ ಇದುವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆಲ್ಲದ ಭಾರತ (India) ತಂಡ ಇದೀಗ ಇತಿಹಾಸ ನಿರ್ಮಿಸುವ ಹೊಸ್ತಿಲಲ್ಲಿದೆ. ದಕ್ಷಿಣ ಆಫ್ರಿಕಾ (India vs South Africa) ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಸೆಂಚೂರಿಯನ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 113 ರನ್​ಗಳ ಜಯ ಸಾಧಿಸಿ ಐತಿಹಾಸಿಕ ಸಾಧನೆ ಮಾಡಿದರೆ, ಜೋಹಾನ್ಸ್​ಬರ್ಗ್​​ನಲ್ಲಿ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಸೌತ್ ಆಫ್ರಿಕಾ 7 ವಿಕೆಟ್​ಗಳ ಗೆಲುವು ಕಂಡಿತು. ಹೀಗಾಗಿ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ. ಸದ್ಯ ಮೂರನೇ ಟೆಸ್ಟ್​ ಪಂದ್ಯದ ಮೇಲೆ ಸರಣಿ ಗೆಲುವಿನ ಲೆಕ್ಕಾಚಾರ ನಿಂತಿದೆ. 3ನೇ ಹಾಗೂ ಅಂತಿಮ ಟೆಸ್ಟ್‌ ಕೇಪ್‌ ಟೌನ್‌ (Cape Town Test) ಕ್ರೀಡಾಂಗಣದಲ್ಲಿ ಜನವರಿ 11ರಿಂದ 15ರವರೆಗೆ ನಡೆಯಲಿದ್ದು, ಎಲ್ಲರ ಗಮನ ಈ ಟೆಸ್ಟ್‌ ಕಡೆಗೆ ನೆಲೆಸಿದೆ. ಭಾರತ ತಂಡದ ಪಾಲಿಗೆ ಅತ್ಯಂತ ಮಹತ್ವದ ಟೆಸ್ಟ್‌ ಪಂದ್ಯ ಇದಾಗಿದ್ದು, ಈ ಸಲುವಾಗಿ ತನ್ನ ಆಡುವ ಹನ್ನೊಂದರ ಬಳಗದಲ್ಲಿ (India Playing XI) ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇದೆ.

ಬೆನ್ನುನೋವು ಇದ್ದ ಕಾರಣಕ್ಕೆ ನಾಯಕ ವಿರಾಟ್ ಕೊಹ್ಲಿ, ಜೋಹಾನ್ಸ್‌ಬರ್ಗ್‌ನಲ್ಲಿ ನಡೆದಿದ್ದ ಸರಣಿಯ ಎರಡನೇ ಪಂದ್ಯದಲ್ಲಿ ಆಡಿರಲಿಲ್ಲ. ಆದರೀಗ ಇವರು ಗುಣಮುಖರಾಗಿದ್ದಾರೆ. ನೆಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದು ಕ್ಲೈಮ್ಯಾಕ್ಸ್ ಕದನಕ್ಕೆ ಫಿಟ್ ಆಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್​ನಲ್ಲಿ ಇವರ ಬದಲು ಕಣಕ್ಕಿಳಿದಿದ್ದ ಹನುಮಾ ವಿಹಾರಿ ಕಥೆ ಏನು ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ ಮೊಹಮ್ಮದ್ ಸಿರಾಜ್ ಇಂಜುರಿಗೆ ತುತ್ತಾಗಿದ್ದು, ಇವರು ಕೂಡ ಮೂರನೇ ಟೆಸ್ಟ್​ಗೆ ಅನುಮಾನ.

ಓಪನರ್​ಗಳಾಗಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಕಣಕ್ಕಿಳಿಯುವುದು ಖಚಿತ. ಹಿರಿಯ ಅನುಭವಿ ಆಟಗಾರರು ಎಂಬ ಕಾರಣಕ್ಕೆ ಚೇತೇಶ್ವರ್ ಪೂಜಾರಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ನಾಯಕ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಆಡಿದರೆ ಅಜಿಂಕ್ಯಾ ರಹಾನೆ ಐದನೇ ಸ್ಥಾನದಲ್ಲಿ ಬ್ಯಾಟ್ ಬೀಸಲಿದ್ದಾರೆ. ಇತ್ತ ಹನುಮಾ ವಿಹಾರಿ ಬೆಂಚ್ ಕಾಯಬೇಕಿದೆ.

ರಿಷಭ್ ಪಂತ್ ಬ್ಯಾಟ್​ನಿಂದ ನಿರೀಕ್ಷೆಗೆ ತಕ್ಕಂತೆ ಆಟ ಬರುತ್ತಿಲ್ಲ. ಇವರ ಶಾಟ್ ಸೆಲೆಕ್ಷನ್ ಬಗ್ಗೆ ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಕೋಚ್ ಕೂಡ ಈ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ. ಹೀಗಾಗಿ ಇವರಿಗೆ ಇನ್ನೊಂದು ಅವಕಾಶ ಕೊಡಬಹುದು. ಸ್ಪಿನ್ನರ್​ಗಳಿಗೆ ಹೇಳಿ ಮಾಡಿಸಿದ ಪಿಚ್ ಅಲ್ಲದಿದ್ದರೂ ಆರ್. ಅಶ್ವಿನ್ ಬ್ಯಾಟಿಂಗ್​ನಲ್ಲಿ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಶಾರ್ದೂಲ್ ಠಾಕೂರ್ ಆಲ್ರೌಂಡರ್ ಪ್ರದರ್ಶನ ಇನ್ನಷ್ಟು ತಂಡಕ್ಕೆ ಸಹಕಾರಿ ಆಗಬೇಕಿದೆ.

ಮೊಹಮ್ಮದ್ ಶಮಿ ಹಾಗೂ ಜಸ್​ಪ್ರೀತ್ ಬುಮ್ರಾ ತಂಡದ ಪ್ರಮುಖ ಕೀ ಆಟಗಾರರಾಗಿದ್ದಾರೆ. ಸಿರಾಜ್ ಇಂಜುರಿಗೆ ಬಗ್ಗೆ ಯಾವುದೇ ಅಪ್ಡೇಟ್ ಇಲ್ಲ. ಹೀಗಾಗಿ ಇವರು ಪ್ಲೇಯಿಂಗ್ XI ನಲ್ಲಿ ಆಡುತ್ತಾರ ಎಂಬ ಖಚಿತತೆ ಸಿಕ್ಕಿಲ್ಲ. ಆದ್ರೆ, ಇಶಾಂತ್ ಶರ್ಮಾ ಫಿಟ್ ಆಗಿದ್ದಾರಂತೆ. ಹೀಗಾಗಿ ಸಿರಾಜ್ ಇಲ್ಲವಾದಲ್ಲಿ ಇಶಾಂತ್ ಶರ್ಮಾ ಅಥವಾ ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI: ಕೆಎಲ್ ರಾಹುಲ್ (ಉಪ ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್‌ಪ್ರಿತ್‌ ಬುಮ್ರಾ, ಇಶಾಂತ್ ಶರ್ಮಾ/ಉಮೇಶ್ ಯಾದವ್.

IPL 2022: ಹರಾಜಿನ ಬಳಿಕ ಅಂತಿಮ ನಿರ್ಧಾರ: ಐಪಿಎಲ್ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ಬಿಸಿಸಿಐ

Virat Kohli: ದ. ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್​ಗೆ ಕೊಹ್ಲಿ ಫಿಟ್: ಕೇಪ್​ಟೌನ್​ನಲ್ಲಿ ಭರ್ಜರಿ ಅಭ್ಯಾಸ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ