IND vs SL: ಬಲಿಷ್ಠವಾಗಿದೆ ಭಾರತ: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ XI ಹೇಗಿರಲಿದೆ?

India Predicted Playing XI vs SL: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್​ಗೆ ಯಾರಿಗೆಲ್ಲ ಅವಕಾಶ ನೀಡಬೇಕು ಎಂಬುದು ಕೋಚ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾಗೆ ತಲೆನೋವಾಗಿದೆ. ಹಾಗಾದ್ರೆ ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಹೇಗಿರಬಹುದು?, ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

IND vs SL: ಬಲಿಷ್ಠವಾಗಿದೆ ಭಾರತ: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ XI ಹೇಗಿರಲಿದೆ?
India Playing XI vs SL 1st Test
Follow us
TV9 Web
| Updated By: Vinay Bhat

Updated on: Mar 03, 2022 | 11:20 AM

ಶ್ರೀಲಂಕಾ ವಿರುದ್ಧದ ಸೀಮಿತ ಓವರ್​ಗಳ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿ ಯಶಸ್ಸು ಸಾಧಿಸಿರುವ ಭಾರತ (India vs Sri Lanka) ತಂಡ ಇದೀಗ ಟೆಸ್ಟ್​ ಕ್ರಿಕೆಟ್​ಗೆ ತಯಾರಿ ನಡೆಸುತ್ತಿದೆ. ಮಾರ್ಚ್ 4 ರಿಂದ ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಪ್ರಾರಂಭವಾಗಲಿದೆ. ಟಿ20 ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ(Virat Kohli) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಮೊದಲ ಟೆಸ್ಟ್​ನ ಪ್ರಮುಖ ಹೈಲೇಟ್ ಕೊಹ್ಲಿಯಾಗಿದ್ದು, 100ನೇ ಟೆಸ್ಟ್ ಪಂದ್ಯ ಆಡಲಿದ್ದಾರೆ. ಪಂತ್-ಕೊಹ್ಲಿ ತಂಡ ಸೇರಿಕೊಂಡಿರುವುದು ರೋಹಿತ್​ಗೆ ಆನೆಬಲ ಬಂದಂತಾಗಿದೆ. ಇದರ ಜೊತೆಗೆ ಮೊದಲ ಟೆಸ್ಟ್​ಗೆ ಯಾರಿಗೆಲ್ಲ ಅವಕಾಶ ನೀಡಬೇಕು ಎಂಬುದು ಕೋಚ್ ದ್ರಾವಿಡ್ ಹಾಗೂ ನಾಯಕನಿಗೆ ತಲೆನೋವಾಗಿದೆ. ಅನೇಕ ಸ್ಟಾರ್ ಆಟಗಾರರ ದಂಡೇ ತಂಡದಲ್ಲಿದ್ದು ಅವಕಾಶಕ್ಕಾಗಿ ಯುವ ಆಟಗಾರರು ಕೂಡ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಹಾಗಾದ್ರೆ ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಹೇಗಿರಬಹುದು?, ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ (India Playing XI).

ನಾಯಕ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಕಣಕ್ಕಿಳಿಯುವ ಮಯಾಂಕ್ ಅಗರ್ವಾಲ್ ಮತ್ತು ಶುಭ್ಮನ್ ಗಿಲ್ ಇಬ್ಬರು ಬ್ಯಾಟ್ಸ್​ಮನ್​ಗಳು ತಯಾರಿದ್ದಾರೆ. ಆದರೆ, ಚೇತೇಶ್ವರ್ ಪೂಜಾರ ಇಲ್ಲದಿರುವ ಕಾರಣ ರೋಹಿತ್ ಜೊತೆ ಮಯಾಂಕ್ ಅಗರ್ವಾನ್ ಇನ್ನಿಂಗ್ಸ್ ಆರಂಭಿಸಲಿದ್ದು, ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಡಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನಾಡಲು 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬರಲಿದ್ದಾರೆ.

ಈ ವರ್ಷದ ಆರಂಭದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಶ್ರೇಯಸ್ ಅಯ್ಯರ್ ಚೊಚ್ಚಲ ಪಂದ್ಯದಲ್ಲೇ ಶತಕ ಮತ್ತು ಅರ್ಧಶತಕ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ ರಹಾನೆ ಆಡುತ್ತಿದ್ದ ಐದನೇ ಕ್ರಮಾಂಕದಲ್ಲಿ ಅಯ್ಯರ್ ಕಣಕ್ಕಿಳಿಯಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ನಂತರದ ಸ್ಥಾನದಲ್ಲಿ ಆಡಲಿದ್ದಾರೆ. ಹನುಮಾ ವಿಹಾರಿ ಕೂಡ ಸ್ಥಾನ ಪಡೆಯುವ ಸಂಭವವಿದ್ದು ಫಾರ್ಮ್​ನಲ್ಲಿದ್ದಾರೆ.

ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಹಲವು ತಿಂಗಳುಗಳ ಬಳಿಕ ಟೆಸ್ಟ್​ ಕ್ರಿಕೆಟ್​ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇವರಿಗೆ ಜೊತೆಯಾಗಿ ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುವುದು ಖಚಿತ. ವೇಗಿಗಳಾಗಿ ಮೂವರು ಬೆಂಕಿಯ ಚೆಂಡು ಉಗುಳಲು ಕಾತುರರಾಗಿದ್ದಾರೆ. ಉಪ ನಾಯಕ ಜಸ್​ಪ್ರೀತ್ ಬುಮ್ರಾ ಮುಂದಾಳತ್ವದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆದುಕೊಳ್ಳಬಹುದು.

ಭಾರತ ಟೆಸ್ಟ್‌ ತಂಡ: ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್‌ ಗಿಲ್, ರಿಷಭ್ ಪಂತ್ (ವಿಕೆಟ್‌ಕೀಪರ್), ಕೆ.ಎಸ್ ಭರತ್ (ವಿಕೆಟ್‌ಕೀಪರ್‌), ರವೀಂದ್ರ ಜಡೇಜಾ, ಜಯಂತ್ ಯಾದವ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಸೌರಭ್ ಕುಮಾರ್ , ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಮೊಹಮ್ಮದ್‌ ಶಮಿ, ಜಸ್‌ಪ್ರೀತ್ ಬುಮ್ರಾ (ಉಪನಾಯಕ).

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹನುಮಾ ವಿಹಾರಿ, ರವೀಂದ್ರ ಜಡೇಜಾ, ಆರ್. ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಭಾರತ ಹಾಗೂ ಶ್ರೀಲಂಕಾ ತಂಡಗಳು ಈವರೆಗೆ 44 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ 20 ಪಂದ್ಯಗಳಲ್ಲಿ ಗೆದ್ದಿದ್ದು ಮೇಲುಗೈ ಸಾಧಿಸಿದೆ. ಶ್ರೀಲಂಕಾ ತಂಡ ಈವರೆಗೆ ಭಾರತದ ವಿರುದ್ಧ 7 ಟೆಸ್ಟ್ ಪಂದ್ಯಗಳಲ್ಲಿ ಮಾತ್ರವೇ ಗೆದ್ದಿದೆ. ಇನ್ನುಳಿದ 17 ಪಂದ್ಯಗಳು ಡ್ರಾ ಕಂಡಿದೆ. ಇನ್ನು ಮೊಹಾಲಿ ಟೆಸ್ಟ್ ಅಂಕಿಅಂಶ ಗಮನಿಸುವುದಾದರೆ ಇಲ್ಲಿ ಭಾರತ ಈವರೆಗೆ 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 7ರಲ್ಲಿ ಗೆದ್ದು 5ರಲ್ಲಿ ಡ್ರಾ ಮಾಡಿಕೊಂಡಿದೆ. ಈ ಮೈದಾನದಲ್ಲಿ ಭಾರತೀಯ ತಂಡ ಒಂದು ಪಂದ್ಯವನ್ನು ಸೋತಿದೆಯಷ್ಟೆ.

IND vs SL Test: ಭಾರತ- ಶ್ರೀಲಂಕಾ ಮೊದಲ ಟೆಸ್ಟ್ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?

IND vs SL Test: ರೋಚಕತೆ ಸೃಷ್ಟಿಸಿರುವ ಭಾರತ- ಶ್ರೀಲಂಕಾ ಮೊದಲ ಟೆಸ್ಟ್​ಗೆ ಒಂದೇ ದಿನ ಬಾಕಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್