South Africa vs India: 2ನೇ ಏಕದಿನದಿಂದ ಇಬ್ಬರು ಆಟಗಾರರು ಔಟ್: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

India Predicted Playing XI For 2nd ODI vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ದ್ವಿತೀಯ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಪ್ರಮುಖ ಎರಡು ಬದಲಾವಣೆ ನಿರೀಕ್ಷಿಸಲಾಗಿದೆ. ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ ನೋಡಿ.

South Africa vs India: 2ನೇ ಏಕದಿನದಿಂದ ಇಬ್ಬರು ಆಟಗಾರರು ಔಟ್: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ
India Playing XI vs SA 2nd ODI
Follow us
| Edited By: Vinay Bhat

Updated on: Jan 21, 2022 | 10:03 AM

ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​​ನಲ್ಲಿ ಇಂದು​​ ಭಾರತ ಮತ್ತು ದಕ್ಷಿಣ ಆಫ್ರಿಕಾ (South Africa vs India) ನಡುವೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಈ ಪಂದ್ಯ ಸೋತರೆ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ ಮೊದಲ ಪಂದ್ಯ ಸೋತು 0-1 ರಿಂದ ಹಿನ್ನಡೆಯಲ್ಲಿದೆ. ಸರಣಿಯನ್ನು ಜೀವಂತವಾಗಿರಿಸಬೇಕಾದರೆ ಹೇಗಾದರು ಮಾಡಿ ಇಂದಿನ ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಜೊತೆಗೆ ಕೆಎಲ್ ರಾಹುಲ್​ಗೂ (KL Rahul) ಇದು ಅಗ್ನಿಪರೀಕ್ಷೆಯಾಗಿದ್ದು ನಾಯಕನ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕಿದೆ. ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಕಂಟಕವಾಗಿದ್ದು ಮಧ್ಯಮ ಕ್ರಮಾಂಕ. ಶ್ರೇಯಸ್‌ ಅಯ್ಯರ್‌, ರಿಷಭ್‌ ಪಂತ್‌ ಮತ್ತು ವೆಂಕಟೇಶ್‌ ಅಯ್ಯರ್‌ (Venkatesh Iyer) ಅವರನ್ನು ಭಾರತ ಮಧ್ಯಮ ಕ್ರಮಾಂಕದಲ್ಲಿ ನಂಬಿಕೊಂಡಿತ್ತು. ಆದರೆ, ಈ ಮೂವರಿಂದ ಒಟ್ಟುಗೂಡಿದ್ದು 35 ರನ್‌ ಮಾತ್ರ. ಹೀಗಾಗಿ ಇಂದಿನ ಎರಡನೇ ಏಕದಿನ ಪಂದ್ಯಕ್ಕೆ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ.

ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಜೊತೆ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಅನುಮಾನ. ಯಾಕಂದ್ರೆ ರಾಹುಲ್ ಏಕದಿನ ಕ್ರಿಕೆಟ್​ನ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಇವರು 5ನೇ ಸ್ಥಾನದಲ್ಲಿ ಆಡುವ ಸಾಧ್ಯತೆ ಇದೆ. ಹೀಗಾದಲ್ಲಿ ಮೂಲತಃ ಆರಂಭಿಕನಾಗಿರುವ ವೆಂಕಟೇಶ್ ಅಯ್ಯರ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಕೊಹ್ಲಿ ನಾಯಕತ್ವ ಬಿಟ್ಟ ನಂತರ ಬ್ಯಾಟಿಂಗ್‌ನಲ್ಲಿ ಹೇಗೆ ಮಿಂಚುತ್ತಾರೆ ಎಂಬ ಕುತೂಹಲಕ್ಕೆ ಬುಧವಾರದ ಪಂದ್ಯದಲ್ಲಿ ಉತ್ತರ ಸಿಕ್ಕಿದೆ. ಹೀಗಾಗಿ ಇವರ ಮೇಲೆ ನಿರೀಕ್ಷೆ ಹೆಚ್ಚಿದೆ.

ಭಾರತಕ್ಕೆ ತಲೆನೋವಾಗಿರುವುದು 4ನೇ ಕ್ರಮಾಂಕ. ಕೊಹ್ಲಿ ನಾಯಕತ್ವದ ದಿನಗಳಲ್ಲೂ ಇದ್ದ ಈ ಸಮಸ್ಯೆ ಕೆಎಲ್ ರಾಹುಲ್ ಅವರ ಹಂಗಾಮಿ ಸಾರಥ್ಯದಲ್ಲೂ ಮುಂದುವರಿದಿದೆ. ಶ್ರೇಯಸ್ ಅಯ್ಯರ್ ಕೆಲ ಪಂದ್ಯಗಳಲ್ಲಿ ಆಡಿದರೆ ಕೆಲ ಪಂದ್ಯಗಳಲ್ಲಿ ಕೈಕೊಡುತ್ತಿದ್ದಾರೆ. ಇಂದು ಗೆಲ್ಲಲೇ ಬೇಕಾದ ಪಂದ್ಯ ಆಗಿರುವುದರಿಂದ ಅಯ್ಯರ್ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಸಾಧ್ಯತೆ ದಟ್ಟವಾಗಿದೆ. ನಂತರದ ಸ್ಥಾನದಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ.

ಆರ್. ಅಶ್ವಿನ್ ಹಾಗೂ ಯುಜ್ವೇಂದ್ರ ಚಹಾಲ್​ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು. ಶಾರ್ದೂಲ್ ಥಾಕೂರ್ ಅರ್ಧಶತಕ ಸಿಡಿಸಿದ ನಡುವೆಯೂ ಬೌಲಿಂಗ್‌ನಲ್ಲಿ ದುಬಾರಿಯಾಗಿದ್ದರು. ಅವರ ಬದಲು ದೀಪಕ್ ಚಹರ್ ಅಥವಾ ಮೊಹಮ್ಮದ್ ಸಿರಾಜ್ ಕಣಕ್ಕಿಳಿದರೆ ಅಚ್ಚರಿ ಇಲ್ಲ. ಬೂಮ್ರಾ ಎರಡು ವಿಕೆಟ್ ತೆಗೆದುಕೊಂಡಿದ್ದರು. ಉಳಿದವರು ದುಬಾರಿಯಾಗಿದ್ದರು. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI:

ಶಿಖರ್ ಧವನ್, ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್‌ಕೀಪರ್), ಆರ್. ಅಶ್ವಿನ್, ದೀಪಕ್ ಚಹಾರ್/ಶಾರ್ದೂಲ್ ಥಾಕೂರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಜಸ್‌ಪ್ರೀತ್ ಬುಮ್ರಾ.

India vs South Africa: 2ನೇ ಏಕದಿನ ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?

South Africa vs India: ಇಂದು ಭಾರತ- ದಕ್ಷಿಣ ಆಫ್ರಿಕಾ ಎರಡನೇ ಏಕದಿನ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಹುಲ್ ಪಡೆ

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ