India Playing XI vs ENG: ಏಕದಿನ ಸರಣಿ ವಶಕ್ಕೆ ಪಡೆಯಲು ಮಾಸ್ಟರ್ ಪ್ಲಾನ್: ಭಾರತದಲ್ಲಿ ಮಹತ್ವದ ಬದಲಾವಣೆ

IND vs ENG 2nd ODI: ವಿರಾಟ್ ಕೊಹ್ಲಿ ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಆಡುವುದು ಅನುಮಾನ. ಹಾಗಾದರೆ ಇಂದಿನ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದನ್ನು ನೋಡೋಣ.

India Playing XI vs ENG: ಏಕದಿನ ಸರಣಿ ವಶಕ್ಕೆ ಪಡೆಯಲು ಮಾಸ್ಟರ್ ಪ್ಲಾನ್: ಭಾರತದಲ್ಲಿ ಮಹತ್ವದ ಬದಲಾವಣೆ
IND Playing 11 vs ENG 2nd ODI
Follow us
TV9 Web
| Updated By: Vinay Bhat

Updated on: Jul 14, 2022 | 9:01 AM

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಎರಡನೇ ಏಕದಿನ ಪಂದ್ಯ ಇಂದು ನಡೆಯಲಿದ್ದು ಲಂಡನ್​ನ ಲಾರ್ಡ್​​ ಮೈದಾನದಲ್ಲಿ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್​ಗಳ ಜಯ ಸಾಧಿಸಿರುವ ರೋಹಿತ್ ಪಡೆ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯ ಗೆದ್ದರೆ ಆಂಗ್ಲರ ನಾಡಲ್ಲಿ ಟಿ20 ಬಳಿಕ ಏಕದಿನ ಸರಣಿಯನ್ನೂ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಇತ್ತ ಇಂಗ್ಲೆಂಡ್​ಗೆ ಮಾನ ಉಳಿಸಿಕೊಳ್ಳಲು ಇದು ಕೊನೆಯ ಅವಕಾಶ. ಬಾಕಿ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಸೋತರೆ ಜೋಸ್ ಬಟ್ಲರ್ (Jos Buttler) ನಾಯಕತ್ವದ ಮೇಲೂ ಪರಿಣಾಮ ಬೀಳಲಿದೆ. ಭಾರತ ಪರ ಇಂಜುರಿಯಿಂದಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ (Virat Kohli) ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. ಹಾಗಾದರೆ ದ್ವಿತೀಯ ಏಕದಿನ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದನ್ನು ನೋಡೋಣ.

ಪ್ರಥಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿ ಅಜೇಯ ಶತಕದ ಜೊತೆಯಾಟ ಆಡಿತ್ತು. ಹಿಟ್​​ಮ್ಯಾನ್ ಅರ್ಧಶತಕ ಸಿಡಿಸಿ ಮಿಂಚಿದ್ದರೆ, ಧವನ್ ಉತ್ತಮ ಸಾಥ್ ನೀಡಿದ್ದರು. ಹೀಗಾಗಿ ಈ ಜೋಡಿಯೂ ಇಂದು ಮೋಡಿ ಮಾಡುವುದು ಖಚಿತ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬಂದರೆ ಶ್ರೇಯಸ್ ಅಯ್ಯರ್ ಹೊರಗುಳಿಯಲಿದ್ದಾರೆ. ಕೊಹ್ಲಿ ಅಲಭ್ಯರಾದರೆ ಅಯ್ಯರ್​ಗೆ ಮತ್ತೊಂದು ಅವಕಾಶ ಸಿಗಲಿದೆ. ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನಕ್ಕೆ ಫಿಟ್ ಆಗಿದ್ದಾರೆ.

ವಿಕೆಟ್ ಕೀಪರ್  – ಬ್ಯಾಟರ್ ರಿಷಭ್ ಪಂತ್ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಆಲ್ರೌಂಡರ್ ಜವಾಬ್ದಾರಿಯನ್ನು ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ವಹಿಸಿಕೊಳ್ಳುವುದು ಖಚಿತ. ಬೌಲಿಂಗ್ ವಿಭಾಗದಲ್ಲಿ ಭಾರತ ಒಂದು ಬದಲಾವಣೆ ಮಾಡುವ ನಿರೀಕ್ಷೆಯಿದೆ. ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಕಳೆದ ಪಂದ್ಯದಲ್ಲಿ ಮಾರಕವಾಗಿದ್ದರು. ಇಂಗ್ಲೆಂಡ್ ಬ್ಯಾಟರ್​ಗಳನ್ನು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್​ಗೆ ಅಟ್ಟಿದ್ದರು. ಹೀಗಾಗಿ ಇವರು ಆಡುವ ಬಳಗದಲ್ಲಿ ಇರಲಿದ್ದಾರೆ.

ಇದನ್ನೂ ಓದಿ
Image
IND vs ENG 2nd ODI: ಕ್ರಿಕೆಟ್ ಕಾಶಿಯಲ್ಲಿಂದು ದ್ವಿತೀಯ ಏಕದಿನ: ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅನುಮಾನ
Image
IND vs WI: ವೆಸ್ಟ್ ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದಲೂ ಕೊಹ್ಲಿ ಔಟ್..! ರಾಹುಲ್ ಕಥೆ ಏನು?
Image
ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!
Image
66 ನೇ ವಯಸ್ಸಿನಲ್ಲಿ ಮದುವೆ: ಈಗ ಕೋಚ್ ಹುದ್ದೆಗೆ ರಾಜೀನಾಮೆ ನೀಡಿ ಹನಿಮೂನ್‌ಗೆ ಹಾರಿದ ಭಾರತದ ಮಾಜಿ ಕ್ರಿಕೆಟಿಗ

ಆದರೆ, ಪ್ರಸಿದ್ಧ್ ಕೃಷ್ಣ ಜಾಗದಲ್ಲಿ ಶಾರ್ದೂಲ್ ಥಾಕೂರ್ ಅಥವಾ ಮೊಹಮ್ಮದ್ ಸಿರಾಜ್​​ ಆಡುವ ಸಾಧ್ಯತೆ ಇದೆ. ಯಾಕೆಂದರೆ ಲಾರ್ಡ್ಸ್‌ ಕ್ರೀಡಾಂಗಣದ ಪಿಚ್ ಮೊದಲಿನಿಂದಲೂ ಸ್ವಿಂಗ್ ಎಸೆತಗಳಿಗೆ ಹೆಚ್ಚು ನೆರವು ನೀಡುವ ಗುಣ ಹೊಂದಿದೆ. ಹೀಗಾಗಿ ಪಿಚ್​​ನಲ್ಲಿ ಚೆಂಡು ಹೆಚ್ಚು ಟರ್ನ್ ಆಗುವುದರಿಂದ ಇವರಿಬ್ಬರಲ್ಲಿ ಒಬ್ಬರು ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಇಲ್ಲಿ 70 ಏಕದಿನ ಪಂದ್ಯಗಳು ನಡೆದಿವೆ. ಅದರಲ್ಲಿ ಇಲ್ಲಿ ದಾಖಲಾದ ಗರಿಷ್ಠ ಮೊತ್ತ 238 ರನ್. ಎರಡೂ ಇನಿಂಗ್ಸ್‌ಗಳಲ್ಲಿಯೂ ಬೌಲರ್‌ಗಳು ಹೆಚ್ಚು ಯಶಸ್ಸು ಕಂಡಿರುವುದರಿಂದ ಬೌಲಿಂಗ್​ನಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ.

ಇತ್ತ ಆಂಗ್ಲರ ತಂಡದಲ್ಲಿ ಬೆನ್​ ಸ್ಟೋಕ್ಸ್​, ಜೋ ರೂಟ್​, ಬೈರ್​ಸ್ಟೋರಂತಹ ಬಲಿಷ್ಠ ಆಟಗಾರರಿದ್ದರು ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್ ವೈಫಲ್ಯವನ್ನು ಸರಿಪಡಿಸಿಕೊಂಡರೆ, ಈ ಪಂದ್ಯದಲ್ಲಿ ಜಯಿಸುವ ಆಸೆ ಈಡೇರಬಹುದು. ಇಂಗ್ಲೆಂಡ್ ಬ್ಯಾಟಿಂಗ್ ಲೈನ್​ಅಪ್ ಬಲಿಷ್ಠ ಆಗಿರುವುದರಿಂದ ಇದರಲ್ಲಿ ಬದಲಾವಣೆ ಅನುಮಾನ. ಬೌಲಿಂಗ್​ನಲ್ಲಿ ಹ್ಯಾರಿ ಬ್ರೂಕ್ ಮತ್ತು ಪಿಲ್ ಸಲ್ಟ್ ಎರಡು ಆಯ್ಕೆಗಳಿದ್ದು ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡರೆ ಅಚ್ಚರಿಪಡಬೇಕಿಲ್ಲ.

ಭಾರತ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಮೊಹಮ್ಮದ್ ಶಮಿ, ಜಸ್​​ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ