IND Playing XI vs PAK: ಗಿಲ್ ಆಡುವುದು ಅನುಮಾನ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಇಲ್ಲಿದೆ
India vs Pakistan, ICC World Cup 2023: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 14 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಶುಭ್ಮನ್ ಗಿಲ್ ಆಡುತ್ತಾರ?, ಮೂರನೇ ವೇಗಿಯನ್ನು ಕಣಕ್ಕಿಳಿಸುತ್ತಾರ? ಹೀಗೆ ಅನೇಕ ಪ್ರಶ್ನೆಗಳಿವೆ.
ಐಸಿಸಿ ಏಕದಿನ ವಿಶ್ವಕಪ್ 2023 ರ ಹೈವೋಲ್ಟೇಜ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 14 ಮಧ್ಯಾಹ್ನ 2 ಗಂಟೆಗೆ ಭಾರತ ಮತ್ತು ಪಾಕಿಸ್ತಾನವು (India vs Pakistan) ನಡುವೆ ಮೆಗಾ ಪಂದ್ಯವನ್ನು ಆಯೋಜಿಸಲಾಗಿದೆ. ಎರಡೂ ತಂಡಗಳು ತಮ್ಮ ಮೊದಲೆರಡೂ ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್ನಲ್ಲಿರುವುದರಿಂದ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಇದರ ನಡುವೆ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬ ಕುತೂಹಲ ಮೂಡಿದೆ. ಶುಭ್ಮನ್ ಗಿಲ್ ಆಡುತ್ತಾರ?, ಮೂರನೇ ವೇಗಿಯನ್ನು ಕಣಕ್ಕಿಳಿಸುತ್ತಾರ? ಹೀಗೆ ಅನೇಕ ಪ್ರಶ್ನೆಗಳಿವೆ.
ಶುಭ್ಮನ್ ಗಿಲ್ ಇನ್ನೂ ಚೇತರಿಸಿಕೊಳ್ಳುತ್ತಿರುವುದರಿಂದ, ಇಶಾನ್ ಕಿಶನ್ ಅವರು ಓಪನರ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ. ಆದರೆ, ಗಿಲ್ ಅವರು ಅಹಮದಾಬಾದ್‌ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಬ್ಯಾಟಿಂಗ್ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಇವರು ಕಣಕ್ಕಿಳಿದರೆ ಅಚ್ಚರಿ ಪಡಬೇಕಿಲ್ಲ.
ಲಕ್ಷ ರೂ. ಜೇಬಿನಲ್ಲಿರಲಿ; ಭಾರತ- ಪಾಕ್ ಪಂದ್ಯ ನೋಡಲು ಅಹಮದಾಬಾದ್ಗೆ ಪ್ರಯಾಣಿಸುವವರ ಗಮನಕ್ಕೆ
ಇನ್ನು ರೋಹಿತ್ ಶರ್ಮಾ ಅವರು ಮೂರನೇ ಸೀಮರ್ ಆಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ. ಮೊಹಮ್ಮದ್ ಶಮಿ ಅಥವಾ ಶಾರ್ದೂಲ್ ಠಾಕೂರ್ ಪೈಕಿ ಯಾರಿಗೆ ಸ್ಥಾನ ಸಿಗುತ್ತೆ ಎಂಬುದು ನೋಡಬೇಕಿದೆ. ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ 2023 ರಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 17 ವಿಕೆಟ್ ಪಡೆದಿದ್ದರು. ಶಮಿ ಈ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿರುವ ಕಾರಣ ಅವಕಾಶ ಪಡೆಯುವ ಸಂಭವವಿದೆ.
ಉಳಿದಂತೆ ಭಾರತ ಪರ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. 8 ಸ್ಲಾಟ್ಗೆ ಶಾರ್ದೂಲ್ ಥಾಕೂರ್, ರವಿಚಂದ್ರನ್ ಅಶ್ವಿನ್ ಅಥವಾ ಮೊಹಮ್ಮದ್ ಶಮಿ ಪೈಕಿ ಯಾರಿಗೆ ಸ್ಥಾನ ನೋಡಬೇಕು. ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಪ್ರಮುಖ ಬೌಲರ್ಗಳಾಗಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್/ ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ