India Probable Playing XI: 2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ: ಇಲ್ಲಿದೆ ಭಾರತದ ಪ್ಲೇಯಿಂಗ್ XI

India vs New Zealand 2nd T20I Playing XI: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖ ಮೂರು ಬದಲಾವಣೆಯನ್ನು ನಿರೀಕ್ಷಿಸಲಾಗಿದೆ. ಹಾಗಾದ್ರೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?. ಹೊಸದಾಗಿ ಕಣಕ್ಕಿಳಿಯುವವರು ಯಾರು?, ಇಲ್ಲಿದೆ ಮಾಹಿತಿ.

India Probable Playing XI: 2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ: ಇಲ್ಲಿದೆ ಭಾರತದ ಪ್ಲೇಯಿಂಗ್ XI
India Playing XI vs Wes Indies T20
Follow us
TV9 Web
| Updated By: Vinay Bhat

Updated on: Nov 19, 2021 | 8:52 AM

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಟಿ20 ಪಂದ್ಯದಲ್ಲಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ (Team India) ಇಂದಿನ ಪಂದ್ಯ ಗೆದ್ದು ಸರಣಿ ವಶ ಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ. ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಜಯ ಸಾಧಿಸಿತಾದರೂ ಅದು ಸುಲಭದ್ದಾಗಿರಲಿಲ್ಲ. ಬೌಲರ್​ಗಳು ಸಾಕಷ್ಟು ರನ್​ಗಳನ್ನು ಹರಿಬಿಟ್ಟಿದ್ದರು. ಆಲ್ರೌಂಡರ್ ಪಾತ್ರವನ್ನು ಸರಿಯಾಗಿ ನಿಭಾಯಿಸಿರಲಿಲ್ಲ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ (India) ತಂಡದಲ್ಲಿ ಪ್ರಮುಖ ಮೂರು ಬದಲಾವಣೆಯನ್ನು ನಿರೀಕ್ಷಿಸಲಾಗಿದೆ. ಹಾಗಾದ್ರೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ (India Playing XI) ಹೇಗಿರಲಿದೆ?. ಹೊಸದಾಗಿ ಕಣಕ್ಕಿಳಿಯುವವರು ಯಾರು?, ಇಲ್ಲಿದೆ ಮಾಹಿತಿ.

ಭಾರತದ ಓಪನಿಂಗ್ ಜೋಡಿ ಚೆನ್ನಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಉಪ ನಾಯಕ ಕೆಎಲ್ ರಾಹುಲ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅವರ ಜಾಗದಲ್ಲಿ ಆಡುತ್ತಿರುವ ಸೂರ್ಯಕುಮಾರ್ ಕೂಡ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಇವರು ಅರ್ಧಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದ್ದಾರೆ. ಅನುಭವಿ ಶ್ರೇಯಸ್ ಅಯ್ಯರ್ ಮತ್ತು ಹೊಸ ಪ್ರತಿಭೆ ವೆಂಕಟೇಶ್ ಅಯ್ಯರ್ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರೆ ಮಧ್ಯಮ ಕ್ರಮಾಂಕ ಬಲಿಷ್ಠವಾಗಲಿದೆ. ರಿಷಭ್ ಪಂತ್ ತಮ್ಮ ಎಂದಿನ ಶೈಲಿಯಲ್ಲೇ ಬ್ಯಾಟ್ ಬೀಸುತ್ತಿದ್ದಾರೆ.

ಆಲ್‌ರೌಂಡರ್ ಜವಾಬ್ದಾರಿ ಹೊತ್ತಿರುವ ಅಕ್ಷರ್ ಪಟೇಲ್ ಅಷ್ಟೊಂದು ಕಮಾಲ್ ಮಾಡಿಲ್ಲವಾದರೂ ಮತ್ತೊಂದು ಅವಕಾಶ ನೀಡಬಹುದು. ರವಿಚಂದ್ರನ್ ಅಶ್ವಿನ್ ಮತ್ತು ಭುವನೇಶ್ವರ್ ಕುಮಾರ್ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದರು. ಹೀಗಾಗಿ ಇವರ ಬದಲು ಆವೇಶ್ ಖಾನ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಅಂದಾಜಿದೆ. ಅಂತೆಯೆ ದೀಪಕ್ ಚಹರ್ ಬದಲು ಹರ್ಷಲ್ ಪಟೇಲ್ ಆಡಬಹುದು. ಎಲ್ಲಾದರು ಅಕ್ಷರ್ ಪಟೇಲ್ ಜಾಗದಲ್ಲಿ ಯುಜ್ವೇಂದ್ರ ಚಹಾಲ್ ಆಡಿದರೂ ಅಚ್ಚರಿ ಪಡಬೇಕಿಲ್ಲ.

ಇತ್ತ ನಿಯಮಿತ ನಾಯಕ ಕೇನ್‌ ವಿಲಿಯಮ್ಸನ್‌ ಹಾಗೂ ಕೈಲ್‌ ಜೇಮಿಸನ್‌ ಅವರ ಅನುಪಸ್ಥಿತಿಯಲ್ಲಿ ಮೊದಲನೇ ಪಂದ್ಯ ಸೋತಿರುವ ನ್ಯೂಜಿಲೆಂಡ್ ತಂಡದಲ್ಲೂ ಬದಲಾವಣೆ ಖಚಿತ. ಯಾಕಂದ್ರೆ ಇಂದಿನ ಪಂದ್ಯ ನ್ಯೂಜಿಲೆಂಡ್‌ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈಗಾಗಲೇ ಮೊದಲನೇ ಪಂದ್ಯ ಸೋತಿದ್ದರಿಂದ ನ್ಯೂಜಿಲೆಂಡ್‌, ಎರಡನೇ ಪಂದ್ಯ ಗೆದ್ದು ಟಿ20 ಸರಣಿಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕಾದ ಕ್ಲಿಷ್ಟ ಸನ್ನಿವೇಶಕ್ಕೆ ಒಳಗಾಗಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ- ನಾಯಕ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್/ಯುಜ್ವೇಂದ್ರ ಚಹಾಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್.

India vs New Zealand T20: ಇಂದು ಭಾರತ-ನ್ಯೂಜಿಲೆಂಡ್ 2ನೇ ಟಿ20: ಗೆದ್ದು ಸರಣಿ ವಶಪಡಿಸಿಕೊಳ್ಳುತ್ತ ರೋಹಿತ್ ಪಡೆ?

(India Probable Playing XI for 2nd T20I vs New Zealand three changes Team India to seal the T20I series)

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು