Asia Cup 2025: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

Asia Cup 2025: ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿರುವುದು ಸೆಪ್ಟೆಂಬರ್ 10 ರಿಂದ. ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಇ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14 ರಂದು ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಇನ್ನು ಮೊದಲ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಲಿದೆ.

Asia Cup 2025: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Team India

Updated on: Aug 20, 2025 | 2:04 PM

ಏಷ್ಯಾಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಪ್ಲೇಯಿಂಗ್ ಇಲೆವೆನ್ ಆಯ್ಕೆಯು ಟೀಮ್ ಇಂಡಿಯಾ ಕೋಚ್ ಮುಂದಿರುವ ದೊಡ್ಡ ಸವಾಲು. ಏಕೆಂದರೆ ತಂಡದಲ್ಲಿ ಮೂವರು ಆರಂಭಿಕ ದಾಂಡಿಗರಿದ್ದಾರೆ. ಹಾಗೆಯೇ ನಾಲ್ವರು ಆಲ್​ರೌಂಡರ್​ಗಳಿದ್ದಾರೆ. ಇವರಲ್ಲಿ ಯಾರನ್ನು ಕಣಕ್ಕಿಳಿಸಬೇಕು? ಯಾರನ್ನು ಕೈ ಬಿಡಬೇಕು ಎಂಬದೇ ಪ್ರಶ್ನೆ.

ಈ ಪ್ರಶ್ನೆಗಳ ನಡುವೆ ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಏಕೆಂದರೆ ಅಭಿಷೇಕ್ ಈ ಹಿಂದೆಯೂ ಓಪನರ್ ಆಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದೀಗ ಉಪನಾಯಕನಾಗಿ ಶುಭ್​ಮನ್ ಗಿಲ್ ಎಂಟ್ರಿ ಕೊಟ್ಟಿರುವ ಕಾರಣ ಸಂಜು ಸ್ಯಾಮ್ಸನ್ ಆರಂಭಿಕನ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಖಚಿತ. ನಾಲ್ಕನೇ ಕ್ರಮಾಂಕವು ನಾಯಕ ಸೂರ್ಯಕುಮಾರ್ ಯಾದವ್​ಗೆ ಫಿಕ್ಸ್. ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ. ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಏಳನೇ ಕ್ರಮಾಂಕದಲ್ಲಿ ಶಿವಂ ದುಬೆ ಕಾಣಿಸಿಕೊಂಡರೆ, ಎಂಟನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಯುಎಇ ಪಿಚ್​ಗಳು ಸ್ಪಿನ್ನರ್​ಗಳಿಗೆ ಸಹಕಾರಿ. ಹೀಗಾಗಿ ಅಕ್ಷರ್ ಪಟೇಲ್ ಅವರನ್ನು ಸ್ಪಿನ್ ಆಲ್​ರೌಂಡರ್ ಆಗಿ ಕಣಕ್ಕಿಳಿಸಲಿದ್ದಾರೆ ಎನ್ನಬಹುದು. ಇನ್ನು ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಏಕೆಂದರೆ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಸ್ಥಾನ ಪಡೆಯುವುದರಿಂದ ಟೀಮ್ ಇಂಡಿಯಾ ಆರು ಬೌಲರ್​ಗಳನ್ನು ಬಳಸಿಕೊಳ್ಳಬಹುದು. ಇದರ ಜೊತೆಗೆ ಅಭಿಷೇಕ್ ಶರ್ಮಾ ಅವರನ್ನು ಹೆಚ್ಚುವರಿ ಬೌಲರ್ ಆಗಿ ಬಳಸಿಕೊಳ್ಳುವ ಅವಕಾಶವಿದೆ. ಹೀಗಾಗಿ ಟೀಮ್ ಇಂಡಿಯಾ 8 ಬ್ಯಾಟರ್​ಗಳೊಂದಿಗೆ ಪ್ಲೇಯಿಂಗ್ ಇಲೆವೆನ್ ರೂಪಿಸುವ ಸಾಧ್ಯತೆ ಹೆಚ್ಚು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಅಭಿಷೇಕ್ ಶರ್ಮಾ
  2. ಶುಭ್​ಮನ್ ಗಿಲ್
  3. ತಿಲಕ್ ವರ್ಮಾ
  4. ಸೂರ್ಯಕುಮಾರ್ ಯಾದವ್ (ನಾಯಕ)
  5. ಹಾರ್ದಿಕ್ ಪಾಂಡ್ಯ
  6. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  7. ಶಿವಂ ದುಬೆ
  8. ಅಕ್ಷರ್ ಪಟೇಲ್
  9. ಜಸ್​ಪ್ರೀತ್ ಬುಮ್ರಾ
  10. ಅರ್ಷದೀಪ್ ಸಿಂಗ್
  11. ವರುಣ್ ಚಕ್ರವರ್ತಿ

ಇದನ್ನೂ ಓದಿ: ಆಸ್ಟ್ರೇಲಿಯಾ ಪಡೆಯ ಗರ್ವಭಂಗ: 34 ವರ್ಷಗಳ ಬಳಿಕ ಅತ್ಯಂತ ಹೀನಾಯ ಸೋಲು

ಭಾರತ ಟಿ20 ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)ಅಭಿಷೇಕ್ ಶರ್ಮಾತಿಲಕ್ ವರ್ಮಾಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾಅರ್ಷದೀಪ್ ಸಿಂಗ್ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.