IND vs AUS: ಇಬ್ಬರು ಇನ್, ಇಬ್ಬರು ಔಟ್; ಅಚ್ಚರಿಯ ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆ ಭಾರತ

Team India's Probable Playing XI: ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೆ ಸಿದ್ಧವಾಗಿದೆ. ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಲಿದ್ದಾರೆ. ತಂಡದಲ್ಲಿ ಶುಭ್‌ಮನ್ ಗಿಲ್ ಮತ್ತು ಪ್ರಸಿದ್ಧ್ ಕೃಷ್ಣ ಆಡುವ ಸಾಧ್ಯತೆಗಳಿವೆ. ಈ ಪಂದ್ಯ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸಲು ಅತ್ಯಂತ ಮಹತ್ವದ್ದಾಗಿದೆ. ಇತ್ತ ಆಸ್ಟ್ರೇಲಿಯಾ ತಂಡದಲ್ಲಿಯೂ ಒಂದು ಬದಲಾವಣೆ ಮಾಡಲಾಗಿದೆ.

IND vs AUS: ಇಬ್ಬರು ಇನ್, ಇಬ್ಬರು ಔಟ್; ಅಚ್ಚರಿಯ ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆ ಭಾರತ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jan 02, 2025 | 6:25 PM

ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ಶುಕ್ರವಾರದಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಸದ್ಯ ಭಾರತ ತಂಡ ಸರಣಿಯಲ್ಲಿ 1-2ರಿಂದ ಹಿನ್ನಡೆಯಲ್ಲಿರುವ ಕಾರಣ ಈ ಪ್ರತಿಷ್ಠಿತ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಈಗ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಹೀಗಾಗಿ ಗೆಲುವಿನೊಂದಿಗೆ ಸರಣಿಯನ್ನು ಅಂತ್ಯಗೊಳಿಸಲು ಮತ್ತು ಹೊಸ ವರ್ಷವನ್ನು ಆರಂಭಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಲಿಷ್ಠ ತಂಡವನ್ನು ಕಣಕ್ಕಿಳಿಸಲು ಬಯಸಿದ್ದು, ಇದರ ಚಿತ್ರಣ ಬಹುತೇಕ ನಿಚ್ಚಳವಾಗಿದೆ. ರೋಹಿತ್ ಶರ್ಮಾ ಐದನೇ ಟೆಸ್ಟ್‌ನಿಂದ ಹೊರಗುಳಿಯುವುದು ಖಚಿತ ಎನ್ನಲಾಗುತಿದ್ದು ಅವರ ಸ್ಥಾನದಲ್ಲಿ ಶುಭ್​ಮನ್‌ ಗಿಲ್‌ ಆಡುವ ಸಾಧ್ಯತೆ ಇದೆ. ಹಾಗೆಯೇ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಟೆಸ್ಟ್​ನಲ್ಲಿ ಆಡುವ ಅವಕಾಶ ಸಿಗಬಹುದು.

ಸಿಡ್ನಿ ಟೆಸ್ಟ್​ಗೆ ತಂಡದಲ್ಲಿ 4 ಬದಲಾವಣೆ

ಮಾಧ್ಯಮ ವರದಿಗಳ ಪ್ರಕಾರ, ಸಿಡ್ನಿ ಟೆಸ್ಟ್‌ನಲ್ಲಿ ಭಾರತ ತಂಡವು ತನ್ನ ಪ್ಲೇಯಿಂಗ್​ 11ನಲ್ಲಿ 4 ಪ್ರಮುಖ ಬದಲಾವಣೆಗಳನ್ನು ಮಾಡಬಹುದು. ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿ, ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ರೋಹಿತ್ ಶರ್ಮಾ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಈ ವಿಚಾರವನ್ನು ರೋಹಿತ್, ಮುಖ್ಯ ಆಯ್ಕೆಗಾರ ಅಜಿತ್ ಅಗರ್ ಮತ್ತು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ತಿಳಿಸಿದ್ದು, ಅವರೂ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ರೋಹಿತ್ ಕೊನೆಯ ಟೆಸ್ಟ್ ಆಡದಿದ್ದರೆ ಅವರ ಜಾಗದಲ್ಲಿ ಶುಭಮನ್ ಗಿಲ್‌ಗೆ ಅವಕಾಶ ನೀಡಬಹುದು. ಅವರು 3ನೇ ಕ್ರಮಾಂಕದಲ್ಲಿ ಆಡುವುದರಿಂದ ಕೆಎಲ್ ರಾಹುಲ್ ಮತ್ತೆ ಓಪನಿಂಗ್ ಮಾಡಬಹುದು.

ಆಡುವ ಹನ್ನೊಂದರಲ್ಲಿ ಮೂರನೇ ಪ್ರಮುಖ ಬದಲಾವಣೆಯನ್ನು ಬೌಲಿಂಗ್‌ನಲ್ಲಿ ಮಾಡಬಹುದು. ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಆಡಿದ ವೇಗದ ಬೌಲರ್ ಆಕಾಶ್ ದೀಪ್ ಬೆನ್ನುನೋವಿನಿಂದ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಇದೀಗ ಫೈನಲ್ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ ನೀಡಲಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಿರುವ ಪ್ರಸಿದ್ಧ್ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಆಡಲಿದ್ದಾರೆ.

ಬುಮ್ರಾಗೆ ಮತ್ತೆ ನಾಯಕತ್ವ

ಸಿಡ್ನಿ ಟೆಸ್ಟ್‌ನ ನಾಲ್ಕನೇ ದೊಡ್ಡ ಬದಲಾವಣೆ ಎಂದರೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವನ್ನು ಪರ್ತ್ ಟೆಸ್ಟ್ ವಿಜೇತ ಜಸ್ಪ್ರೀತ್ ಬುಮ್ರಾ ಅವರಿಗೆ ನೀಡುವುದು ಖಚಿತವಾಗಿದೆ. ತಮ್ಮ ನಾಯಕತ್ವದಲ್ಲಿ ತಂಡಕ್ಕೆ ಗೆಲುವಿನ ಆರಂಭ ಕೊಟ್ಟಿದ್ದ ಬುಮ್ರಾ ಇದೀಗ ತಮ್ಮ ನಾಯಕತ್ವದಲ್ಲೇ ಸರಣಿಗೆ ಗೆಲುವಿನ ವಿದಾಯ ಹೇಳಲಿ ಎಂಬುದು ಎಲ್ಲರ ಆಶಯವಾಗಿದೆ.

ಇತ್ತ ಆಸ್ಟ್ರೇಲಿಯ ಕೂಡ ಅಂತಿಮ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಆ ಪ್ರಕಾರ ಸರಣಿಯ ಕೊನೆಯ ಟೆಸ್ಟ್‌ಗೆ ತಂಡದಲ್ಲಿ 1 ಬದಲಾವಣೆ ಮಾಡಿದರುವ ಆತಿಥೇಯರು ಮಿಚೆಲ್ ಮಾರ್ಷ್ ಅವರನ್ನು ತಂಡದಿಂದ ಕೈಬಿಟ್ಟಿದ್ದಾರೆ. ಮಾರ್ಷ್ ಬದಲಿಗೆ ಆಲ್‌ರೌಂಡರ್ ಬ್ಯೂ ವೆಬ್‌ಸ್ಟರ್‌ಗೆ ಅವಕಾಶ ನೀಡಲಾಗಿದೆ. ವೆಬ್‌ಸ್ಟರ್ ಭಾರತದ ವಿರುದ್ಧ ಟೆಸ್ಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ಭಾರತ ಸಂಭಾವ್ಯ ತಂಡ: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಸ್ಯಾಮ್ ಕೊನ್ಸ್ಟನ್ಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್​ ಕೀಪರ್), ನಾಥನ್ ಲಿಯಾನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Thu, 2 January 25

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ