AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಪಡೆಗೆ ಸೆಮಿಫೈನಲ್‌ ಕಂಟಕ; ಐಸಿಸಿ ಟೂರ್ನಿಗಳ ಸೆಮಿಫೈನಲ್‌ನಲ್ಲಿ ಭಾರತದ ಸಾಧನೆ ಹೇಗಿದೆ ಗೊತ್ತಾ?

T20 World Cup 2022: ಅಂದಹಾಗೆ, ಭಾರತಕ್ಕೆ 2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ದುಸ್ವಪ್ನದಂತೆ ಕಾಡುತ್ತಿದೆ. ಇದಕ್ಕೆ ಪ್ರಮುಖ ಕಾರಣ ಕಳೆದ ನಾಲ್ಕು ಐಸಿಸಿ ಟ್ರೋಫಿಗಳ ಸೆಮಿಫೈನಲ್‌ನಲ್ಲಿ ಭಾರತ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿರುವುದು.

ರೋಹಿತ್ ಪಡೆಗೆ ಸೆಮಿಫೈನಲ್‌ ಕಂಟಕ; ಐಸಿಸಿ ಟೂರ್ನಿಗಳ ಸೆಮಿಫೈನಲ್‌ನಲ್ಲಿ ಭಾರತದ ಸಾಧನೆ ಹೇಗಿದೆ ಗೊತ್ತಾ?
team india
TV9 Web
| Edited By: |

Updated on: Nov 08, 2022 | 7:16 AM

Share

ಟೀಂ ಇಂಡಿಯಾ (Indian cricket team) ಸೂಪರ್ 12 ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆಯನ್ನು ಏಕಪಕ್ಷೀಯವಾಗಿ ಸೋಲಿಸಿ ಟಿ20 ವಿಶ್ವಕಪ್ (T20 World Cup 2022) ಸೆಮಿಫೈನಲ್‌ಗೆ ಪ್ರವೇಶಿಸಿದೆ. ರೋಹಿತ್ ಪಡೆ ಈ ಸುತ್ತಿನಲ್ಲಿ ಆಡಿದ 5 ಪಂದ್ಯಗಳಲ್ಲಿ 4 ರಲ್ಲಿ ಜಯಗಳಿಸುವ ಮೂಲಕ ಗುಂಪು 2 ರಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಭಾರತದ ಸೆಮಿಫೈನಲ್ ಪಂದ್ಯ ಗುರುವಾರ ಅಡಿಲೇಡ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ ಆದರೆ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವುದು ಸುಲಭವಲ್ಲ. ಆಂಗ್ಲರ ಬ್ಯಾಟಿಂಗ್ ಮತ್ತು ಬೌಲಿಂಗ್ ಟೀಂ ಇಂಡಿಯಾಕ್ಕಿಂತ ಕಡಿಮೆಯೇನಿಲ್ಲ, ಇಂತಹ ಪರಿಸ್ಥಿತಿಯಲ್ಲಿ ರೋಚಕ ಪಂದ್ಯ ನಡೆಯುವುದು ಗ್ಯಾರಂಟಿ.

ಅಂದಹಾಗೆ, ಭಾರತಕ್ಕೆ 2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ದುಸ್ವಪ್ನದಂತೆ ಕಾಡುತ್ತಿದೆ. ಇದಕ್ಕೆ ಪ್ರಮುಖ ಕಾರಣ ಕಳೆದ ನಾಲ್ಕು ಐಸಿಸಿ ಟ್ರೋಫಿಗಳ ಸೆಮಿಫೈನಲ್‌ನಲ್ಲಿ ಭಾರತ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿರುವುದು. ಐಸಿಸಿ ಟೂರ್ನಮೆಂಟ್‌ಗಳ ಕೊನೆಯ ನಾಲ್ಕು ಸೆಮಿಫೈನಲ್‌ಗಳಲ್ಲಿ ಟೀಮ್ ಇಂಡಿಯಾದ ಗೆಲುವಿನ ತೂಕ ತೀರ ಕಡಿಮೆ ಇರುವುದು.

ಐಸಿಸಿ ಟೂರ್ನಿಗಳ ಸೆಮಿಫೈನಲ್‌ನಲ್ಲಿ ಭಾರತದ ಸಾಧನೆ

ಕಳೆದ ನಾಲ್ಕು ಐಸಿಸಿ ವಿಶ್ವಕಪ್ ಸೆಮಿಫೈನಲ್‌ಗಳಲ್ಲಿ ಭಾರತ ಅಷ್ಟಾಗಿ ಯಶಸ್ವಿಯಾಗಿಲ್ಲ. 2019ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿತ್ತು. ಆ ಬಳಿಕ 2017 ರ ಚಾಂಪಿಯನ್ಸ್ ಟ್ರೋಫಿಯ ಸೆಮಿ-ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿತ್ತು. ಆದರೆ 2016 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್‌ ವಿರುದ್ದ ಮುಗ್ಗರಿಸಿತ್ತು. ಹಾಗೆಯೇ 2015 ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋಲೊಪ್ಪಿಕೊಂಡಿತ್ತು.

ಐಸಿಸಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತದ ಸಾಧನೆ

  1. 1983 ರ ವಿಶ್ವಕಪ್‌- ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ಗೆಲುವು
  2. 1987ರ ವಿಶ್ವಕಪ್‌- ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ಎದುರು ಸೋಲು
  3. 1996 ರ ವಿಶ್ವಕಪ್- ಸೆಮಿಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೋಲು
  4. 1998 ಐಸಿಸಿ ಚಾಂಪಿಯನ್ಸ್ ಟ್ರೋಫಿ- ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲು
  5. 2000 ಐಸಿಸಿ ಚಾಂಪಿಯನ್ಸ್ ಟ್ರೋಫಿ- ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು.
  6. 2002 ಐಸಿಸಿ ಚಾಂಪಿಯನ್ಸ್ ಟ್ರೋಫಿ- ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು
  7. 2003 ರ ವಿಶ್ವಕಪ್- ಸೆಮಿಫೈನಲ್‌ನಲ್ಲಿ ಕೀನ್ಯಾ ವಿರುದ್ಧ ಗೆಲುವು
  8. 2007ರ ಟಿ20 ವಿಶ್ವಕಪ್‌- ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು
  9. 2011ರ ವಿಶ್ವಕಪ್- ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಗೆಲುವು
  10. 2013ರ ಚಾಂಪಿಯನ್ಸ್ ಟ್ರೋಫಿ- ಸೆಮಿಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಗೆಲುವು
  11. 2014ರ ಟಿ20 ವಿಶ್ವಕಪ್‌- ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು
  12. 2015ರ ವಿಶ್ವಕಪ್- ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು
  13. 2016 ರ ಟಿ20 ವಿಶ್ವಕಪ್- ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲು.
  14. 2017ರ ಚಾಂಪಿಯನ್ಸ್ ಟ್ರೋಫಿ- ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು
  15. 2019ರ ವಿಶ್ವಕಪ್‌- ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಸೋಲು

ಇದೀಗ ಈ ಟೂರ್ನಿಯ ಅತ್ಯುತ್ತಮ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತ ತಂಡದ ಮುಂದೆ ಇಂಗ್ಲೆಂಡ್ ಸವಾಲು ಎದುರಾಗಿದೆ. ಇದೀಗ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆ ಇಡುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು