ಬಹುನಿರೀಕ್ಷಿತ 12ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Women’s World Cup 2022) ಟೂರ್ನಿಗೆ ಈಗಾಗಲೇ ಚಾಲನೆ ಸಿಕ್ಕಿದೆ. ನ್ಯೂಜಿಲೆಂಡ್ನಲ್ಲಿ ನಡೆಯುತ್ತಿರುವ ಈ ಮಹಾ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಹಿಳಾ ತಂಡ (West Indies Womens Team) ಕಿವೀಸ್ ವಿರುದ್ಧ 3 ರನ್‌ಗಳ ರೋಚಕ ಜಯ ಸಾಧಿಸಿತು. ಏಪ್ರಿಲ್ 3ರ ವರೆಗೂ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿದ್ದು, ಕ್ರೈಸ್ಟ್‌ಚರ್ಚ್, ಆಕ್ಲೆಂಡ್, ಡ್ಯುನೆಡಿನ್, ತೌರಂಗ, ಹ್ಯಾಮಿಲ್ಟನ್ ಹಾಗೂ ವೆಲ್ಲಿಂಗ್ಟನ್ ಕ್ರೀಡಾಂಗಣಗಳು ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಕಳೆದ ಬಾರಿಯ ರನ್ನರ್-ಅಪ್ ಭಾರತಕ್ಕೆ ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಬದ್ಧ ವೈರಿ ಪಾಕಿಸ್ತಾನ (India vs Pakistan) ಎದುರಾಗಲಿದೆ. ಹಾಗಾದ್ರೆ ಭಾರತ-ಪಾಕ್ ಪಂದ್ಯ ಯಾವಾಗ?, ಎಷ್ಟು ಗಂಟೆಗೆ ಆರಂಭವಾಗಲಿದೆ?, ಯಾವುದರಲ್ಲಿ ನೇರಪ್ರಸಾರ ವೀಕ್ಷಿಸಸಬಹುದು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಭಾರತ ಹಾಗೂ ಪಾಕಿಸ್ತಾನ ನಡುವಣ ವಿಶ್ವಕಪ್ ಏಕದಿನ ಪಂದ್ಯ ಮಾರ್ಚ್ 6 ಭಾನುವಾರದಂದು ನಡೆಯಲಿದೆ.
ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 6:30ಕ್ಕೆ ಪಂದ್ಯ ಶುರುವಾಗಲಿದೆ.
ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನ ಈ ರೋಚಕ ಕದನಕ್ಕೆ ಸಾಕ್ಷಿಯಾಗಲಿದೆ.
ಈ ಪಂದ್ಯ ಸ್ಟಾರ್ ಸ್ಫೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ. ಡಿಸ್ನಿ+ ಹಾಟ್ಸ್ಟಾರ್ನಲ್ಲೂ ಲೈವ್ ವೀಕ್ಷಿಸಬಹುದು.
ವಿಶೇಷ ಎಂದರೆ ಭಾರತ ಮಹಿಳಾ ತಂಡ ಮತ್ತು ಪಾಕಿಸ್ತಾನ ಮಹಿಳಾ ತಂಡ ಇಲ್ಲಿಯವರೆಗೆ ಎರಡು ಬಾರಿ ಮುಖಾಮುಖಿಯಾಗಿವೆ. ಈ ಎರಡು ಪಂದ್ಯಗಳಲ್ಲೂ ಭಾರತ ಮಹಿಳಾ ತಂಡ ಗೆಲುವಿನ ನಗೆ ಬೀರಿದೆ. ಕಳೆದ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಆತಿಥ್ಯವನ್ನು ವಹಿಸಿತ್ತು. 2017ರಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಫೈನಲ್ ಪ್ರವೇಶಿಸಿ ಟ್ರೋಫಿ ಗೆಲ್ಲುವ ನಿರೀಕ್ಷೆ ಮೂಡಿಸಿತ್ತು. ಆದರೆ ಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ಎದುರು 9 ರನ್‌ಗಳ ರೋಚಕ ಸೋಲು ಕಾಣುವ ಮೂಲಕ ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಭಾರತೀಯ ವನಿತೆಯರು ಕೈಚೆಲ್ಲಿದ್ದರು.
ಇದೀಗ ಮತ್ತೆ ಭಾರತ ವಿಶ್ವಕಪ್ ಗೆಲ್ಲುವ ಕನಸಿನೊಂದಿಗೆ ಕಣಕ್ಕಿಳಿಯಲಿದೆ. ಭಾರತದ ಅನುಭವಿ ಆಟಗಾರ್ತಿಯರಾದ ಮಿಥಾಲಿ ರಾಜ್ ಹಾಗೂ ಜೂಲನ್ ಗೋಸ್ವಾಮಿ ಪಾಲಿಗೆ ಇದು ಕಡೆಯ ಏಕದಿನ ವಿಶ್ವಕಪ್ ಆಗಿರುವುದರಿಂದ ಟ್ರೋಫಿ ಗೆದ್ದು ಕ್ರಿಕೆಟ್ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲು ಎದುರು ನೋಡುತ್ತಿದ್ದಾರೆ. ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆಯಲು ಭಾರತೀಯ ವನಿತೆಯರು ಎದುರು ನೋಡುತ್ತಿದ್ದಾರೆ.
ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದ ಭಾರತ:
ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತ ಈಗಾಗಲೇ ಬೊಂಬಾಟ್ ಪ್ರದರ್ಶನ ನೀಡಿ ಭರವಸೆ ಮೂಡಿಸಿದೆ. ಅಪಾಯಕಾರಿ ವೆಸ್ಟ್ ಇಂಡೀಸ್ ಎದುರು 81 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನಾ 67 ಎಸೆತಗಳಲ್ಲಿ 66 ರನ್ ಸಿಡಿಸಿದ್ದರು. ಆಲ್‌ರೌಂಡರ್ ದೀಪ್ತಿ ಶರ್ಮಾ 51 ರನ್‌ಗಳ ಕೊಡುಗೆ ನೀಡಿದ್ದರು. ಫೆ.27ರಂದು ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡುವೆ ದಕ್ಷಿಣ ಆಫ್ರಿಕಾ ಎದುರು 2 ರನ್‌ಗಳ ರೋಚಕ ಜಯ ದಾಖಲಿಸಿತ್ತು.
ಭಾರತದ ವೇಳಾಪಟ್ಟಿ ಹೀಗಿದೆ ನೋಡಿ:
ಭಾರತ vs ಪಾಕಿಸ್ತಾನ – 6ನೇ ಮಾರ್ಚ್ – 6:30 am
ಭಾರತ vs ನ್ಯೂಜಿಲೆಂಡ್ – 10ನೇ ಮಾರ್ಚ್ – 6:30 am
ಭಾರತ vs ವೆಸ್ಟ್ ಇಂಡೀಸ್ – 12ನೇ ಮಾರ್ಚ್ – 6:30 am
ಭಾರತ vs ಇಂಗ್ಲೆಂಡ್ – 16ನೇ ಮಾರ್ಚ್ – 6:30 am
ಭಾರತ vs ಆಸ್ಟ್ರೇಲಿಯಾ – 19ನೇ ಮಾರ್ಚ್ – 6:30 am
ಭಾರತ vs ಬಾಂಗ್ಲಾದೇಶ – 22ನೇ ಮಾರ್ಚ್ – 6:30 am
ಭಾರತ vs ದಕ್ಷಿಣ ಆಫ್ರಿಕಾ – 27ನೇ ಮಾರ್ಚ್ – 6:30 am
ಭಾರತ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ, ಶಫಾಲಿ, ಯಾಸ್ತಿಕಾ, ದೀಪ್ತಿ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಜೂಲನ್ ಗೂಸ್ವಾಮಿ, ಪೂಜಾ, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್.
Shane Warne: ಶೇನ್ ವಾರ್ನ್ಗೆ ಶ್ರದ್ಧಾಂಜಲಿ: ಎರಡನೇ ದಿನದಾಟ ಆರಂಭಕ್ಕೂ ಮುನ್ನ ಒಂದು ನಿಮಿಷ ಮೈದಾನವಿಡೀ ಮೌನ
Virat Kohli: ಕೊಹ್ಲಿ 45 ರನ್ಗೆ ಔಟಾದಾಗ ಡ್ರೆಸ್ಸಿಂಗ್ ರೂಮ್ನಲ್ಲಿ ರೋಹಿತ್ ಶರ್ಮಾ ಮಾಡಿದ್ದೇನು ನೋಡಿ