AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೊಹ್ಲಿ ಶತಕ.. ಕುಲ್ದೀಪ್, ರಾಣಾ ಕಮಾಲ್; ಕೊನೆಯ ಓವರ್​ನಲ್ಲಿ ಗೆದ್ದ ಟೀಂ ಇಂಡಿಯಾ

India vs South Africa ODI: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ಸಾಧಿಸಿದೆ. ರಾಂಚಿಯಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದರೆ, ರೋಹಿತ್ ಮತ್ತು ರಾಹುಲ್ ಅರ್ಧಶತಕ ಗಳಿಸಿದರು. 349 ರನ್‌ಗಳ ಗುರಿ ಬೆನ್ನಟ್ಟಿದ ಆಫ್ರಿಕಾ 17 ರನ್‌ಗಳಿಂದ ಸೋತಿತು, ಕಾರ್ಬಿನ್ ಭಾಷ್ ಏಕಾಂಗಿ ಹೋರಾಟವೂ ವ್ಯರ್ಥವಾಯಿತು. ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

IND vs SA: ಕೊಹ್ಲಿ ಶತಕ.. ಕುಲ್ದೀಪ್, ರಾಣಾ ಕಮಾಲ್; ಕೊನೆಯ ಓವರ್​ನಲ್ಲಿ ಗೆದ್ದ ಟೀಂ ಇಂಡಿಯಾ
Ind Vs Sa
ಪೃಥ್ವಿಶಂಕರ
|

Updated on:Nov 30, 2025 | 10:38 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ (India vs South Africa) ಯಶಸ್ವಿಯಾಗಿದೆ. ಧೋನಿ ತವರಾದ ರಾಂಚಿ ಮೈದಾನದಲ್ಲಿ ನಡೆದ ಉಭಯ ತಂಡಗಳ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೊಹ್ಲಿ (Virat Kohli) ಶತಕ ಹಾಗೂ ರೋಹಿತ್ (Rohit Sharma) ಮತ್ತು ರಾಹುಲ್ ಅವರ ಅರ್ಧಶತಕದ ನೆರವಿನಿಂದ 349 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೊನೆಯ ಓವರ್​ನಲ್ಲಿ ಆಲೌಟ್ ಆಗುವ ಮೂಲಕ 17 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆಫ್ರಿಕಾ ಗೆಲುವಿಗಾಗಿ ಆಲ್‌ರೌಂಡರ್ ಕಾರ್ಬಿನ್ ಭಾಷ್ ಏಕಾಂಗಿ ಹೋರಾಟ ನೀಡಿದರಾದರೂ ಅವರಿಗೆ ಕೊನೆಯಲ್ಲಿ ಬೆಂಬಲ ಸಿಗದ ಕಾರಣ ಆಫ್ರಿಕಾ ತಂಡ ಸೋಲಬೇಕಾಯಿತು.

ರೋ-ಕೊ ಶತಕದ ಜೊತೆಯಾಟ

ರಾಂಚಿಯ ಜೆಎಸ್‌ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ 18 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಆ ಬಳಿಕ ಎರಡನೇ ವಿಕೆಟ್​ಗೆ ಜೊತೆಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಒಂದು ತಿಂಗಳ ಹಿಂದೆ ಸಿಡ್ನಿಯಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಪಂದ್ಯ ಗೆಲ್ಲುವ ಜೊತೆಯಾಟ ರೂಪಿಸಿದ್ದ ಈ ಇಬ್ಬರು ಅನುಭವಿಗಳು ರಾಂಚಿಯಲ್ಲೂ ಮತ್ತದೆ ಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರು 2ನೇ ವಿಕೆಟ್​ಗೆ 136 ರನ್‌ಗಳ ಜೊತೆಯಾಟ ಕಟ್ಟಿದರು. ಆದರೆ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸುವ ಮೂಲಕ ಈ ಜೊತೆಯಾಟ ಮುರಿದುಬಿತ್ತು.

52ನೇ ಏಕದಿನ ಶತಕ ಬಾರಿಸಿದ ಕೊಹ್ಲಿ

ರೋಹಿತ್ ಔಟಾದ ಬಳಿಕ ತಮ್ಮ ಬ್ಯಾಟಿಂಗ್ ವೇಗವನ್ನು ಕಡಿಮೆ ಮಾಡಿದ ವಿರಾಟ್ ಕೊಹ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಿ ತಮ್ಮ 52ನೇ ಏಕದಿನ ಶತಕವನ್ನು ಪೂರೈಸಿದರು. ಆದಾಗ್ಯೂ ನಾಲ್ಕನೇ ಕ್ರಮಾಂಕದಲ್ಲಿ ಬಂದ ರುತುರಾಜ್ ಹಾಗೂ ವಾಷಿಂಗ್ಟನ್ ಸುಂದರ್ ಬೇಗನೇ ಪೆವಿಲಿಯನ್ ಸೇರಿಕೊಂಡರು. ಇದು ತಂಡದ ರನ್ ವೇಗವನ್ನು ಕಡಿಮೆ ಮಾಡಿತು. ಆದರೆ 6ನೇ ಕ್ರಮಾಂಕದಲ್ಲಿ ಬಂದ ನಾಯಕ ರಾಹುಲ್, ಕೊಹ್ಲಿಗೆ ಉತ್ತಮ ಸಾಥ್ ನೀಡಿದರು. ಅಂತಿಮವಾಗಿ ಕೊಹ್ಲಿ ಕೇವಲ 120 ಎಸೆತಗಳಲ್ಲಿ 11 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಿತ 135 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇತ್ತ ನಾಯಕ ಕೆ.ಎಲ್. ರಾಹುಲ್ ಅರ್ಧಶತಕ ಬಾರಿಸಿದರೆ, ರವೀಂದ್ರ ಜಡೇಜಾ ಕೂಡ ಚುರುಕಾದ ಇನ್ನಿಂಗ್ಸ್ ಆಡಿದರು. ದಕ್ಷಿಣ ಆಫ್ರಿಕಾ ಪರ, ಕಾರ್ಬಿನ್ ಬಾಷ್ ಸೇರಿದಂತೆ ನಾಲ್ವರು ವೇಗಿಗಳು ತಲಾ ಎರಡು ವಿಕೆಟ್ ಪಡೆದರು.

IND vs SA: ರಾಂಚಿಯಲ್ಲಿ ರಾಜನ ದರ್ಬಾರ್; 52ನೇ ಏಕದಿನ ಶತಕ ಬಾರಿಸಿದ ವಿರಾಟ್ ಕೊಹ್ಲಿ

ಹರಿಣಗಳಿಗೆ ಆರಂಭಿಕ ಆಘಾತ

ರಾಂಚಿ ಪಿಚ್​ನಲ್ಲಿ ಗುರಿ ಬೆನ್ನಟ್ಟುವ ತಂಡಕ್ಕೆ ಹೆಚ್ಚಿನ ನೆರವು ಸಿಗುವ ಕಾರಣ, ದಕ್ಷಿಣ ಆಫ್ರಿಕಾಕ್ಕೆ ರನ್ ಗಳಿಸುವುದು ಅಷ್ಟು ಕಷ್ಟವಲ್ಲ ಎಂಬುದು ಸ್ಪಷ್ಟವಾಗಿತ್ತು. ಆದರೆ ಎರಡನೇ ಓವರ್‌ನಲ್ಲಿ ಮಾರಕ ದಾಳಿ ನಡೆಸಿದ ಹರ್ಷಿತ್ ರಾಣಾ ತಮ್ಮ ಓವರ್‌ನ ಮೊದಲ ಎಸೆತದಲ್ಲೇ ರಯಾನ್ ರಿಕಲ್ಟನ್ ಅವರನ್ನು ಔಟ್ ಮಾಡಿದರೆ, ಮೂರನೇ ಎಸೆತದಲ್ಲಿ ಕ್ವಿಂಟನ್ ಡಿ ಕಾಕ್ ಅವರನ್ನು ಔಟ್ ಮಾಡಿದರು. ಈ ಇಬ್ಬರೂ ಶೂನ್ಯಕ್ಕೆ ಔಟಾದರು. ನಂತರ ಮೂರನೇ ಬ್ರೇಕ್‌ಥ್ರೂ ನೀಡಿದ ಅರ್ಷದೀಪ್, ನಾಯಕ ಐಡೆನ್ ಮಾರ್ಕ್ರಾಮ್ ಅವರನ್ನು ಔಟ್ ಮಾಡಿದರು. ಹೀಗಾಗಿ ಕೇವಲ 11 ರನ್‌ಗಳಿಗೆ ಆಫ್ರಿಕಾದ ಮೂರು ವಿಕೆಟ್‌ಗಳು ಬಿದ್ದವು. ಆದರೆ ಇದರ ಹೊರತಾಗಿಯೂ, ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಭಾರತಕ್ಕೆ ಸುಲಭವಾಗಿ ಗೆಲುವು ಧಕ್ಕದಂತೆ ಮಾಡಿದರು.

ಆಫ್ರಿಕಾಗೆ ಆಲ್​ರೌಂಡರ್​ಗಳ ಆನೆ ಬಲ

ಮ್ಯಾಥ್ಯೂ ಬ್ರೆಟ್ಜ್ಕಿ ಜೊತೆಯಾದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ 97 ರನ್‌ಗಳ ಭರ್ಜರಿ ಜೊತೆಯಾಟ ಕಟ್ಟಿ ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಆದರೆ ಈ ವೇಳೆ ದಾಳಿಗಿಳಿದ ಕುಲ್ದೀಪ್ ಯಾದವ್ 34 ನೇ ಓವರ್‌ನಲ್ಲಿ ಇಬ್ಬರನ್ನೂ ಔಟ್ ಮಾಡುವ ಮೂಲಕ ಟೀಂ ಇಂಡಿಯಾವನ್ನು ಮತ್ತೆ ಆಟಕ್ಕೆ ತಂದರು. ಆದಾಗ್ಯೂ, ದಕ್ಷಿಣ ಆಫ್ರಿಕಾ ಸುಲಭವಾಗಿ ಶರಣಾಗಲಿಲ್ಲ. ಕಾರ್ಬಿನ್ ಬಾಷ್ ಅದ್ಭುತ ಬ್ಯಾಟಿಂಗ್ ಮಾಡಿ ಕೇವಲ 40 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಕೊನೆಯ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 18 ರನ್‌ಗಳು ಬೇಕಾಗಿದ್ದವು. ಆದರೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಬೌಲ್ ಮಾಡಿದ 50ನೇ ಓವರ್​ನ ಎರಡನೇ ಎಸೆತದಲ್ಲಿ ಬಾಷ್, ರೋಹಿತ್​ಗೆ ಕ್ಯಾಚ್ ನೀಡುವ ಮೂಲಕ ದಕ್ಷಿಣ ಆಫ್ರಿಕಾದ ಭರವಸೆಯನ್ನು ಕೊನೆಗೊಳಿಸಿದರು. ಭಾರತದ ಪರ ಕುಲ್ದೀಪ್ 4 ವಿಕೆಟ್, ಹರ್ಷಿತ್ ರಾಣಾ 3 ವಿಕೆಟ್ ಪಡೆದರೆ, ಅರ್ಷದೀಪ್ 2 ಹಾಗೂ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Sun, 30 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ