IND vs BAN: ಪಂತ್ ಔಟ್: ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್​ಗೆ ಚಾನ್ಸ್

IND vs BAN: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಸಹ ಆಡಲಿದೆ. ಈ ಸರಣಿಯು ಅಕ್ಟೋಬರ್ 7 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 10 ರಂದು ಜರುಗಲಿರುವ 2ನೇ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

IND vs BAN: ಪಂತ್ ಔಟ್: ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್​ಗೆ ಚಾನ್ಸ್
Ishan Kishan - Sanju Samson
Follow us
|

Updated on: Sep 26, 2024 | 7:36 AM

ಭಾರತ-ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಮೂರು ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾ ವಿಕೆಟ್​ ಕೀಪರ್​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮುಂಬರುವ ಟಿ20 ಸರಣಿಯಿಂದ ಹೊರಗುಳಿಯಲಿದ್ದು, ಅವರ ಬದಲಿಗೆ ಇಶಾನ್ ಕಿಶನ್​ಗೆ ಚಾನ್ಸ್ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದಕ್ಕೂ ಮುನ್ನ ಟಿ20 ವಿಶ್ವಕಪ್​ನಲ್ಲಿ ರಿಷಭ್ ಪಂತ್ ಮೊದಲ ವಿಕೆಟ್ ಕೀಪರ್ ಆಗಿದ್ದರೆ, ಸಂಜು ಸ್ಯಾಮ್ಸನ್ ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದರು. ಅಲ್ಲದೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಸ್ಯಾಮ್ಸನ್ ಮುಂದುವರೆದಿದ್ದರು. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲೂ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಲಿದೆ ಎಂದು ತಿಳಿದು ಬಂದಿದೆ.

ರಿಷಭ್ ಪಂತ್ ಹೊರಗುಳಿಯುತ್ತಿರುದೇಕೆ?

ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧದ ಸರಣಿಯ ಬಳಿಕ ನ್ಯೂಝಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಬೇಕಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಕಾರಣದಿಂದಾಗಿ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಅಲ್ಲದೆ ಈ ಸರಣಿಯ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಸಹ ಆಡಬೇಕಿದೆ.

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳುವ ಅನ್​ಕ್ಯಾಪ್ಡ್​ ಆಟಗಾರ ಯಾರು?

ಈ ಎಲ್ಲಾ ಸರಣಿಗಳನ್ನು ಗಮನದಲ್ಲಿರಿಸಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯ ವೇಳೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತಿದೆ. ಹೀಗಾಗಿ ರಿಷಭ್ ಪಂತ್ ಕೂಡ ಬಾಂಗ್ಲಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.

ಭಾರತ ಮತ್ತು ಬಾಂಗ್ಲಾ ಟಿ20 ಸರಣಿ ಯಾವಾಗ ಶುರು?

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯ 2ನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಇದಾದ ಬಳಿಕ  ಅಕ್ಟೋಬರ್ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 10 ರಂದು ಜರುಗಲಿರುವ 2ನೇ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ಅಕ್ಟೋಬರ್ 13 ರಂದು ಹೈದರಾಬಾದ್​ನಲ್ಲಿ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ್ ಟಿ20 ಸರಣಿ ವೇಳಾಪಟ್ಟಿ:

1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್