AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಐಸಿಸಿ ಏಕದಿನ ರ‍್ಯಾಂಕಿಂಗ್ ಪ್ರಕಟ: ಭಾರತವನ್ನು ಹಿಂದಿಕ್ಕಿ ಮೇಲಕ್ಕೇರಿದ ಪಾಕಿಸ್ತಾನ..!

ICC ODI Rankings: ಟೀಂ ಇಂಡಿಯಾವನ್ನು ಪಾಕಿಸ್ತಾನ ಹಿಂದಿಕ್ಕಿರುವುದು ಟೀಂ ಇಂಡಿಯಾ ಅಭಿಮಾನಿಗಳಿಗೆ ನೋವಿನ ಸಂಗತಿಯಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿನ ಆಧಾರದಲ್ಲಿ ಪಾಕಿಸ್ತಾನ ಭಾರತವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ICC ODI Rankings: ಐಸಿಸಿ ಏಕದಿನ ರ‍್ಯಾಂಕಿಂಗ್ ಪ್ರಕಟ: ಭಾರತವನ್ನು ಹಿಂದಿಕ್ಕಿ ಮೇಲಕ್ಕೇರಿದ ಪಾಕಿಸ್ತಾನ..!
ರೋಹಿತ್- ಬಾಬರ್
TV9 Web
| Updated By: ಪೃಥ್ವಿಶಂಕರ|

Updated on:Jun 13, 2022 | 6:02 PM

Share

ಸದ್ಯ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ (T20 series against South Africa )ಯಲ್ಲಿ ಬ್ಯುಸಿಯಾಗಿದ್ದು, ಮೊದಲೆರಡು ಪಂದ್ಯಗಳಲ್ಲಿ ತಂಡ ಸೋಲನುಭವಿಸಿದೆ. ಆದರೆ, ಟೀಂ ಇಂಡಿಯಾ ಈ ಸಮಸ್ಯೆ ಎದುರಿಸುತ್ತಿರುವುದು ಮಾತ್ರವಲ್ಲದೆ ಭಾರತಕ್ಕೆ ಮತ್ತೊಂದು ಹಿನ್ನಡೆ ಉಂಟಾಗಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Council)ಯ ಇತ್ತೀಚಿನ ಏಕದಿನ ಶ್ರೇಯಾಂಕ (ODI Rankings)ದಲ್ಲಿ ಭಾರತಕ್ಕೆ ಹಿನ್ನಡೆ ಎದುರಾಗಿದೆ. ಫೆಬ್ರವರಿಯಿಂದ ಭಾರತ ಕ್ರಿಕೆಟ್ ತಂಡವು ಏಕದಿನ ಪಂದ್ಯವನ್ನು ಆಡಿಲ್ಲ, ಹೀಗಾಗಿ ಹೊಸ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಇದರ ಭಾರವನ್ನು ಹೊರಬೇಕಾಗಿದೆ. ಈಗ ಈ ಹಿನ್ನಡೆಯೊಂದಿಗೆ ಟೀಂ ಇಂಡಿಯಾವನ್ನು ಪಾಕಿಸ್ತಾನ ಹಿಂದಿಕ್ಕಿರುವುದು ಟೀಂ ಇಂಡಿಯಾ ಅಭಿಮಾನಿಗಳಿಗೆ ನೋವಿನ ಸಂಗತಿಯಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿನ ಆಧಾರದಲ್ಲಿ ಪಾಕಿಸ್ತಾನ ಭಾರತವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ಸೋಮವಾರ, ಜೂನ್ 13 ರಂದು, ICC ಇತ್ತೀಚಿನ ODI ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಟೀಂ ಇಂಡಿಯಾ ನಾಲ್ಕನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ರಾಷ್ಟ್ರ ಪಾಕಿಸ್ತಾನದ ತಂಡ ಭಾರತವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ. ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡ ಇತ್ತೀಚಿನ ದಿನಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ಮಾರ್ಚ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ನಂತರ, ಪಾಕಿಸ್ತಾನವು ಜೂನ್ 12 ರ ಭಾನುವಾರದ ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸುವುದರೊಂದಿಗೆ ಸರಣಿಯನ್ನು 3-0ಯಿಂದ ಕ್ಲೀನ್ ಸ್ವೀಪ್ ಮಾಡಿತು.

ಇದನ್ನೂ ಓದಿ
Image
IND vs SA T20 Match Live Streaming: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ
Image
SL vs AUS: ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ; ಯಾರಿಗೆಲ್ಲ ಅವಕಾಶ?
Image
IND vs SA: ದಿನೇಶ್ ಕಾರ್ತಿಕ್​ಗೂ ಮೊದಲ ಅಕ್ಷರ್ ಬ್ಯಾಟಿಂಗ್; ಪಂತ್ ನಾಯಕತ್ವದ ಮೇಲೆ ಪ್ರಶ್ನೆ ಎತ್ತಿದ ಫ್ಯಾನ್ಸ್

ನ್ಯೂಜಿಲೆಂಡ್ ಇನ್ನೂ ನಂಬರ್ ಒನ್

ವೆಸ್ಟ್ ಇಂಡೀಸ್‌ ತಂಡದ ಕ್ಲೀನ್​ಸ್ವೀಪ್ ಲಾಭ ಪಡೆದುಕೊಂಡ ಪಾಕಿಸ್ತಾನ ಈಗ 106 ಅಂಕಗಳನ್ನು ಪಡೆದಿದೆ. ಅದರ ಆಧಾರದ ಮೇಲೆ ಬಾಬರ್ ಬಳಗ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತ ತಂಡ 105 ಅಂಕ ಪಡೆದು ಐದನೇ ಸ್ಥಾನದಲ್ಲಿದೆ. 125 ಅಂಕಗಳೊಂದಿಗೆ ನ್ಯೂಜಿಲೆಂಡ್ ಇನ್ನೂ ಮೊದಲ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ ಮತ್ತು ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಭಾರತಕ್ಕಿಂತ ಕೆಳಗಿವೆ.

ಇದನ್ನೂ ಓದಿ: IND vs SA: ಟೀಂ ಇಂಡಿಯಾದ ಮ್ಯಾಚ್ ಪ್ರಾಕ್ಟೀಸ್​​ ನೋಡಲು ಬಂದ ಫ್ಯಾನ್ಸ್; ಭರ್ತಿಯಾಯ್ತು ಇಡೀ ಸ್ಟೇಡಿಯಂ

ಇಂಗ್ಲೆಂಡ್‌ಗೆ ಮರಳಲಿದೆ ಟೀಂ ಇಂಡಿಯಾ!

ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನ ಹೊರತಾಗಿ ಭಾರತ ತಂಡದ ಅನುಪಸ್ಥಿತಿಯಿಂದಲೂ ಪಾಕಿಸ್ತಾನಕ್ಕೆ ಲಾಭವಾಗಿದೆ. ಫೆಬ್ರವರಿಯಿಂದ ಟೀಂ ಇಂಡಿಯಾ ಯಾವುದೇ ಏಕದಿನ ಪಂದ್ಯವನ್ನು ಆಡಿಲ್ಲ. ಭಾರತ ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿತ್ತು. ಭಾರತ ತಂಡ ಇದೀಗ ಮತ್ತೊಮ್ಮೆ ಶ್ರೇಯಾಂಕದಲ್ಲಿ ತನ್ನ ಸ್ಥಾನವನ್ನು ಸುಧಾರಿಸಲು ಮುಂದೆ ಪ್ರಯತ್ನಿಸಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಇದೇ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಟೆಸ್ಟ್ ಮತ್ತು ಟಿ20 ಬಳಿಕ ಟೀಂ ಇಂಡಿಯಾ ಅಲ್ಲಿಯೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯ ಫಲಿತಾಂಶದ ಮೇಲೆ ಟೀಂ ಇಂಡಿಯಾ ಶ್ರೇಯಾಂಕ ನಿರ್ಧಾರವಾಗಲಿದೆ.

Published On - 5:54 pm, Mon, 13 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್