
ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಧೋನಿಯ ತವರು ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 17 ರನ್‌ಗಳಿಂದ ಜಯಗಳಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಡಿಸೆಂಬರ್ 3 ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ಇರಾದೆಯಲ್ಲಿದೆ. ಇತ್ತ ಮೊದಲ ಏಕದಿನದಲ್ಲಿ ಗೆಲುವಿಗಾಗಿ ಸಾಕಷ್ಟು ಹೋರಾಟ ನೀಡಿದ್ದ ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿಡಲು ಪ್ರಯತ್ನಿಸಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಏಕದಿನ ಪಂದ್ಯ ಡಿಸೆಂಬರ್ 3 ರಂದು ನಡೆಯಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಏಕದಿನ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಏಕದಿನ ಪಂದ್ಯ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಟಾಸ್ ಮಧ್ಯಾಹ್ನ 12:30 ಕ್ಕೆ ನಡೆಯಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಏಕದಿನ ಪಂದ್ಯದ ಅಧಿಕೃತ ಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ಹೊಂದಿದೆ. ಆದ್ದರಿಂದ, ವೀಕ್ಷಕರು ವಿವಿಧ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಎರಡನೇ ಏಕದಿನ ಪಂದ್ಯವನ್ನು ನೇರಪ್ರಸಾರ ವೀಕ್ಷಿಸಬಹುದು.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಏಕದಿನ ಪಂದ್ಯವನ್ನು ಫೋನ್‌ನಲ್ಲಿ ಅಥವಾ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.
IND vs SA: ಏಕದಿನ ಕ್ರಿಕೆಟ್ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ; ಅಫ್ರಿದಿ ದಾಖಲೆ ಧೂಳಿಪಟ
ಭಾರತ ತಂಡ: ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರಿಷಭ್ ಪಂತ್ (ಉಪನಾಯಕ/ವಿಕೆಟ್ ಕೀಪರ್), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ ಮತ್ತು ಅರ್ಶ್ದೀಪ್ ಸಿಂಗ್.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಡೆವಾಲ್ಡ್ ಬ್ರೂಯಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಾಯೆನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ