IND vs SA: ನಾಳೆಯೇ 2ನೇ ಟಿ20 ಕದನ; ಆದರೆ ರಾತ್ರಿ 8:30ಕ್ಕೆ ಆರಂಭವಾಗುವುದಿಲ್ಲ ಪಂದ್ಯ..!

IND vs SA 2nd T20 Match Details: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ನವೆಂಬರ್ 10 ರಂದು ಸೇಂಟ್ ಜಾರ್ಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ 61 ರನ್‌ಗಳ ಜಯ ಸಾಧಿಸಿ 1-0 ಅಂತರದ ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಭಾರತ ತನ್ನ ಮುನ್ನಡೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ದಕ್ಷಿಣ ಆಫ್ರಿಕಾ ಪುನರಾಗಮನಕ್ಕಾಗಿ ಹೋರಾಡಲಿದೆ.

IND vs SA: ನಾಳೆಯೇ 2ನೇ ಟಿ20 ಕದನ; ಆದರೆ ರಾತ್ರಿ 8:30ಕ್ಕೆ ಆರಂಭವಾಗುವುದಿಲ್ಲ ಪಂದ್ಯ..!
ಭಾರತ- ದಕ್ಷಿಣ ಆಫ್ರಿಕಾ
Follow us
|

Updated on: Nov 09, 2024 | 9:45 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಭಾನುವಾರ (ನವೆಂಬರ್ 9) ಜಿಕೆಬೆಹರಾದಲ್ಲಿರುವ ಸೇಂಟ್ ಜಾರ್ಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಮೊದಲ ಟಿ20 ಪಂದ್ಯ ಶುಕ್ರವಾರ (ನವೆಂಬರ್ 8) ಡರ್ಬನ್‌ನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ ತಂಡ 61 ರನ್​ಗಳಿಂದ ಗೆದ್ದುಕೊಂಡಿತು. ತಂಡದ ಪರ ಸ್ಫೋಟಕ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿ ಎನಿಸಿಕೊಂಡರು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 8 ವಿಕೆಟ್‌ಗೆ 202 ರನ್ ಗಳಿಸಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 17.5 ಓವರ್‌ಗಳಲ್ಲಿ 141 ರನ್‌ಗಳಿಗೆ ಆಲೌಟ್ ಆಯಿತು. ಇದೀಗ ಮೊದಲ ಪಂದ್ಯ ಗೆದ್ದಿರುವ ಭಾರತ ತಂಡ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಅಂತರದ ಮುನ್ನಡೆಯ ಮೇಲೆ ಕಣ್ಣಿಟ್ಟಿದ್ದರೆ, ಇತ್ತ ದಕ್ಷಿಣ ಆಫ್ರಿಕಾ ತಂಡವು ಸರಣಿಯಲ್ಲಿ ಪುನರಾಗಮನ ಮಾಡುವ ಇರಾದೆಯಲ್ಲಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವು ಭಾನುವಾರ, ನವೆಂಬರ್ 10 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಸೇಂಟ್ ಜಾರ್ಜ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಭಾರತೀಯ ಕಾಲಮಾನ ರಾತ್ರಿ 7:30 ಕ್ಕೆ ಆರಂಭವಾಗಲಿದೆ. ವಾಸ್ತವವಾಗಿ ಮೊದಲ ಟಿ20 ಪಂದ್ಯ 8:30 ಕ್ಕೆ ಆರಂಭವಾಗಿತ್ತು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ನೋಡುವುದು ಹೇಗೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದರ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾದಲ್ಲಿಯೂ ನೋಡಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್, ಯಶ್ ದಯಾಳ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಓಟ್ನಿಯಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಲಾಲಿ ಮಾಪೊಂಗ್ವಾನಾ, ನ್ಕಾಬಾ ಪೀಟರ್, ಆಂಡಿಲ್ ಸಿಮೆಲಾಬ್ಸ್, ಆಂಡಿಲೆ ರಿಕೆಲಾಬ್ಲಾಮ್ .

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​