ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಭಾನುವಾರ (ನವೆಂಬರ್ 9) ಜಿಕೆಬೆಹರಾದಲ್ಲಿರುವ ಸೇಂಟ್ ಜಾರ್ಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಮೊದಲ ಟಿ20 ಪಂದ್ಯ ಶುಕ್ರವಾರ (ನವೆಂಬರ್ 8) ಡರ್ಬನ್‌ನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ ತಂಡ 61 ರನ್ಗಳಿಂದ ಗೆದ್ದುಕೊಂಡಿತು. ತಂಡದ ಪರ ಸ್ಫೋಟಕ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿ ಎನಿಸಿಕೊಂಡರು.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 8 ವಿಕೆಟ್‌ಗೆ 202 ರನ್ ಗಳಿಸಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 17.5 ಓವರ್‌ಗಳಲ್ಲಿ 141 ರನ್‌ಗಳಿಗೆ ಆಲೌಟ್ ಆಯಿತು. ಇದೀಗ ಮೊದಲ ಪಂದ್ಯ ಗೆದ್ದಿರುವ ಭಾರತ ತಂಡ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಅಂತರದ ಮುನ್ನಡೆಯ ಮೇಲೆ ಕಣ್ಣಿಟ್ಟಿದ್ದರೆ, ಇತ್ತ ದಕ್ಷಿಣ ಆಫ್ರಿಕಾ ತಂಡವು ಸರಣಿಯಲ್ಲಿ ಪುನರಾಗಮನ ಮಾಡುವ ಇರಾದೆಯಲ್ಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವು ಭಾನುವಾರ, ನವೆಂಬರ್ 10 ರಂದು ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಸೇಂಟ್ ಜಾರ್ಜ್ ಓವಲ್ ಮೈದಾನದಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಭಾರತೀಯ ಕಾಲಮಾನ ರಾತ್ರಿ 7:30 ಕ್ಕೆ ಆರಂಭವಾಗಲಿದೆ. ವಾಸ್ತವವಾಗಿ ಮೊದಲ ಟಿ20 ಪಂದ್ಯ 8:30 ಕ್ಕೆ ಆರಂಭವಾಗಿತ್ತು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದರ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾದಲ್ಲಿಯೂ ನೋಡಬಹುದು.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್, ಯಶ್ ದಯಾಳ್.
ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಓಟ್ನಿಯಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಲಾಲಿ ಮಾಪೊಂಗ್ವಾನಾ, ನ್ಕಾಬಾ ಪೀಟರ್, ಆಂಡಿಲ್ ಸಿಮೆಲಾಬ್ಸ್, ಆಂಡಿಲೆ ರಿಕೆಲಾಬ್ಲಾಮ್ .
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ