AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಾಸ್ ಗೆದ್ದ ಸೂರ್ಯ; ಬುಮ್ರಾ, ಅಕ್ಷರ್ ಔಟ್..! ಬದಲಿಯಾಗಿ ಬಂದಿದ್ಯಾರು?

India vs South Africa 3rd T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಐದು ಪಂದ್ಯಗಳ ಸರಣಿ 1-1 ರಲ್ಲಿ ಸಮಬಲಗೊಂಡಿದ್ದು, ಇಂದು ಸರಣಿ ಮುನ್ನಡೆ ಸಾಧಿಸಲು ಎರಡೂ ತಂಡಗಳು ಪೈಪೋಟಿ ನಡೆಸಲಿವೆ. ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಭಾರತ ತಂಡದಲ್ಲಿ 2, ಆಫ್ರಿಕಾ ತಂಡದಲ್ಲಿ 3 ಬದಲಾವಣೆಗಳೊಂದಿಗೆ ಪ್ಲೇಯಿಂಗ್ 11 ಘೋಷಿಸಲಾಗಿದೆ. ರೋಚಕ ಕದನಕ್ಕೆ ವೇದಿಕೆ ಸಿದ್ಧವಾಗಿದೆ.

IND vs SA: ಟಾಸ್ ಗೆದ್ದ ಸೂರ್ಯ; ಬುಮ್ರಾ, ಅಕ್ಷರ್ ಔಟ್..! ಬದಲಿಯಾಗಿ ಬಂದಿದ್ಯಾರು?
Ind Vs Sa
ಪೃಥ್ವಿಶಂಕರ
|

Updated on:Dec 14, 2025 | 6:50 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಟೀಮ್ ಇಂಡಿಯಾ ಮೊದಲ ಪಂದ್ಯವನ್ನು 101 ರನ್‌ಗಳಿಂದ ಗೆದ್ದರೆ, ಆಫ್ರಿಕನ್ ತಂಡ ಎರಡನೇ ಟಿ20 ಪಂದ್ಯವನ್ನು 51 ರನ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಎರಡೂ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸಲು ಪ್ರಯತ್ನಿಸಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳಾಗಿದ್ದರೆ, ಆಫ್ರಿಕಾ ತಂಡದಲ್ಲಿ 3 ಬದಲಾವಣೆಗಳಾಗಿವೆ.

ಟಾಸ್ ಗೆದ್ದ ಟೀಂ ಇಂಡಿಯಾ

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯಕ್ಕಾಗಿ ಭಾರತ ಪ್ಲೇಯಿಂಗ್-11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ. ಅಕ್ಷರ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅಕ್ಷರ್ ಆರೋಗ್ಯ ಹದಗೆಟ್ಟಿರುವುದರಿಂದ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಆದರೆ ಬುಮ್ರಾ ವೈಯಕ್ತಿಕ ಕಾರಣಗಳಿಂದ ಮನೆಗೆ ಹೋಗಬೇಕಾಗಿದ್ದು, ಅವರೂ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಸೂರ್ಯ ಹೇಳಿದ್ದಾರೆ. ಹೀಗಾಗಿ ಇವರಿಬ್ಬರ ಬದಲು ಕುಲ್ದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಾಮ್ ಕೂಡ ಪ್ಲೇಯಿಂಗ್ ಹನ್ನೊಂದರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ಹೇಳಿದರು.

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೆರಾ, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಆನ್ರಿಚ್ ನೋಕಿಯಾ, ಲುಂಗಿ ಎನ್ಡಿಗಿ, ಒಟೆನ್ಲೆ ಬಾರ್ಟ್‌ಮನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Sun, 14 December 25

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್