
ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಟೀಮ್ ಇಂಡಿಯಾ ಮೊದಲ ಪಂದ್ಯವನ್ನು 101 ರನ್‌ಗಳಿಂದ ಗೆದ್ದರೆ, ಆಫ್ರಿಕನ್ ತಂಡ ಎರಡನೇ ಟಿ20 ಪಂದ್ಯವನ್ನು 51 ರನ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಎರಡೂ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸಲು ಪ್ರಯತ್ನಿಸಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳಾಗಿದ್ದರೆ, ಆಫ್ರಿಕಾ ತಂಡದಲ್ಲಿ 3 ಬದಲಾವಣೆಗಳಾಗಿವೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯಕ್ಕಾಗಿ ಭಾರತ ಪ್ಲೇಯಿಂಗ್-11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ. ಅಕ್ಷರ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅಕ್ಷರ್ ಆರೋಗ್ಯ ಹದಗೆಟ್ಟಿರುವುದರಿಂದ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಆದರೆ ಬುಮ್ರಾ ವೈಯಕ್ತಿಕ ಕಾರಣಗಳಿಂದ ಮನೆಗೆ ಹೋಗಬೇಕಾಗಿದ್ದು, ಅವರೂ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಸೂರ್ಯ ಹೇಳಿದ್ದಾರೆ. ಹೀಗಾಗಿ ಇವರಿಬ್ಬರ ಬದಲು ಕುಲ್ದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಾಮ್ ಕೂಡ ಪ್ಲೇಯಿಂಗ್ ಹನ್ನೊಂದರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ಹೇಳಿದರು.
🚨 Toss 🚨#TeamIndia have won the toss and elected to field first.
Updates ▶️ https://t.co/AJZYgMAHc0#INDvSA | @IDFCFIRSTBank pic.twitter.com/OpifuykG3G
— BCCI (@BCCI) December 14, 2025
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.
ದಕ್ಷಿಣ ಆಫ್ರಿಕಾ ತಂಡ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೆರಾ, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಆನ್ರಿಚ್ ನೋಕಿಯಾ, ಲುಂಗಿ ಎನ್ಡಿಗಿ, ಒಟೆನ್ಲೆ ಬಾರ್ಟ್‌ಮನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:39 pm, Sun, 14 December 25