IND vs SA: ಭಾರತ- ಆಫ್ರಿಕಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ! ಇಲ್ಲಿದೆ ಡರ್ಬನ್ ಹವಾಮಾನ ವರದಿ
Durban weather forecast: ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಮೊದಲ ಪಂದ್ಯ ನವೆಂಬರ್ 8 ರಂದು ಡರ್ಬನ್‌ನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿದ್ದು, ಪಂದ್ಯ ರದ್ದಾಗಬಹುದು.
ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ, ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ 4 ಪಂದ್ಯಗಳ ಟಿ20 ಸರಣಿಯಲ್ಲಿ ನಿರತವಾಗಲಿದೆ. ಈ ಸರಣಿಯ ಮೊದಲ ಪಂದ್ಯ ನಾಳೆ ಅಂದರೆ ನವೆಂಬರ್ 8 ರಂದು ಡರ್ಬನ್‌ನಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಲು ಬಯಸಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಈ ವರ್ಷ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಈ ಸರಣಿಯನ್ನು ಗೆಲ್ಲುವ ಮೂಲಕ ಟಿ20 ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಆಫ್ರಿಕನ್ ತಂಡವಿದೆ. ಆದರೆ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಹವಾಮಾನ ವರದಿ
ಹವಾಮಾನ ವರದಿಯ ಪ್ರಕಾರ, ಡರ್ಬನ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಈ ಪಂದ್ಯವು ಸ್ಥಳೀಯ ಕಾಲಮಾನ ಸಂಜೆ 5:00 ಗಂಟೆಗೆ ಮತ್ತು ಭಾರತೀಯ ಕಾಲಮಾನ ರಾತ್ರಿ 8:30 ಕ್ಕೆ ಆರಂಭವಾಗಲಿದೆ. ಅಕ್ಯುವೆದರ್ ಪ್ರಕಾರ, ಪಂದ್ಯದ ಆರಂಭದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿಲ್ಲ. ಆದರೆ ಸ್ಥಳೀಯ ಕಾಲಮಾನ ಸಂಜೆ 7:00 ಗಂಟೆಗೆ ಮಳೆಯ ಸಂಭವನೀಯತೆ ಶೇಕಡಾ 47 ರಷ್ಟಿರಲಿದ್ದು, ಆ ಬಳಿಕ ಅದರ ತೀವ್ರತೆ ಹೆಚ್ಚಾಗಲಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿದ್ದು, ಪಂದ್ಯ ರದ್ದಾಗಬಹುದು.
ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್, ಯಶ್ ದಯಾಳ್.
ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಓಟ್ನಿಯಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಲಾಲಿ ಮಾಪೊಂಗ್ವಾನಾ, ನ್ಕಾಬಾ ಪೀಟರ್, ಆಂಡಿಲ್ ಸಿಮೆಲಾಬ್ಸ್, ಆಂಡಿಲೆ ರಿಕೆಲಾಬ್ಲಾಮ್ .
ಟಿ20 ಸರಣಿ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ- ನವೆಂಬರ್ 8
- ಎರಡನೇ ಟಿ20 ಪಂದ್ಯ- ನವೆಂಬರ್ 10
- ಮೂರನೇ ಟಿ20 ಪಂದ್ಯ- ನವೆಂಬರ್ 13
- ನಾಲ್ಕನೇ ಟಿ20 ಪಂದ್ಯ- ನವೆಂಬರ್ 15
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:21 pm, Thu, 7 November 24