AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2025: ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್; ಆಫ್ರಿಕಾ- ಭಾರತ ನಡುವೆ ಫೈನಲ್‌ ಫೈಟ್

U19 T20 World Cup 2025: ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಮೊದಲ ಬಾರಿಗೆ ಅಂಡರ್-19 ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಆಫ್ರಿಕಾ ಮಹಿಳಾ ತಂಡ ಇದೀಗ ಫೈನಲ್​ನಲ್ಲಿ ಅಜೇಯ ಟೀಂ ಇಂಡಿಯಾವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಪ್ರಶಸ್ತಿ ಪಂದ್ಯ ಫೆಬ್ರವರಿ 2 ರಂದು ನಡೆಯಲಿದೆ.

T20 World Cup 2025: ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್; ಆಫ್ರಿಕಾ- ಭಾರತ ನಡುವೆ ಫೈನಲ್‌ ಫೈಟ್
ಅಂಡರ್ 19 ಟಿ20 ವಿಶ್ವಕಪ್
Follow us
ಪೃಥ್ವಿಶಂಕರ
|

Updated on: Jan 31, 2025 | 4:18 PM

ಮಹಿಳೆಯರ ಅಂಡರ್-19 ಟಿ20 ವಿಶ್ವಕಪ್‌ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಸೋಲನುಭವಿಸಿದ ಕಾಂಗರೂ ತಂಡ ಟೂರ್ನಿಯಿಂದ ಹೊರಬಿದ್ದಿರೆ ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಕೇವಲ 105 ರನ್‌ಗಳಿಗೆ ಆಲೌಟ್ ಆಯಿತು. ಆ ನಂತರ ಗುರಿ ಬೆನ್ನಟ್ಟಿದ ಆಫ್ರಿಕಾ ತಂಡ ಇನ್ನು 11 ಎಸೆತಗಳು ಬಾಕಿ ಇರುವಾಗಲೇ 5 ವಿಕೆಟ್‌ ಕಳೆದುಕೊಂಡು ಜಯದ ನಗೆ ಬೀರಿತು. ಈ ಪಂದ್ಯದ ಬಳಿಗ ನಡೆದ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್‌ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿ ಸತತ 2ನೇ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಮಹಿಳಾ ತಂಡಗಳು ಮುಖಾಮುಖಿಯಾಗಲಿವೆ.

ಸೆಮಿಫೈನಲ್‌ನಲ್ಲಿ ಮಿಂಚಿದ ವ್ಯಾನ್ ವೈಕ್

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ದೊಡ್ಡ ಮೊತ್ತ ಕಲೆಹಾಕಿ ಎದುರಾಳಿ ತಂಡದಲ್ಲಿ ಒತ್ತಡ ಸೃಷ್ಟಿಸುವುದು ಅದರ ಉದ್ದೇಶವಾಗಿತ್ತು. ಆದರೆ ಆರಂಭ ಉತ್ತಮವಾಗಿರದ ಕಾರಣ ತಂಡ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಅಲ್ಲದೆ ಪವರ್‌ಪ್ಲೇನಲ್ಲಿಯೇ ತಂಡದ ಮೂವರು ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಸೇರಿಕೊಂಡರು. ಇದಾದ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ರನ್ ಗಳಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದರಾದರೂ ದಕ್ಷಿಣ ಆಫ್ರಿಕಾದ ಎಡಗೈ ಸ್ಪಿನ್ನರ್ ಆಶ್ಲೇ ವ್ಯಾನ್ ವೈಕ್ ಅವರ ಮಾರಕ ಬೌಲಿಂಗ್‌ ಮುಂದೆ ಪರದಾಡಬೇಕಾಯಿತು. ವ್ಯಾನ್ ವೈಕ್ 3 ಓವರ್ ಗಳಲ್ಲಿ ಕೇವಲ 17 ರನ್ ನೀಡಿ 3 ವಿಕೆಟ್ ಪಡೆದರು. ಇದರಿಂದಾಗಿ ಅರ್ಧ ಕಾಂಗರೂ ತಂಡ 62 ರನ್​ಗಳಿಸುವಷ್ಟರಲ್ಲೇ ಪೆವಿಲಿಯನ್ ಸೇರಿಕೊಂಡಿತು. ಆದರೆ ಕೆಳ ಕ್ರಮಾಂಕದ ಬ್ಯಾಟರ್​ಗಳು ಸ್ಕೋರನ್ನು 105 ರನ್​ಗಳಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು.

ಗೆಮ್ಮಾ ಬೋಥಾ ಅದ್ಭುತ ಬ್ಯಾಟಿಂಗ್‌

106 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಮೂರನೇ ಓವರ್‌ನಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಮತ್ತೊಬ್ಬ ಆರಂಭಿಕ ಆಟಗಾರ್ತಿ ಗೆಮ್ಮಾ ಬೋಥಾ ವೇಗವಾಗಿ ರನ್ ಕಲೆಹಾಕಲು ಮುಂದಾದರು. ಆದರೆ ಅಷ್ಟರಲ್ಲಿ ನಾಲ್ಕನೇ ಓವರ್‌ನಲ್ಲಿ ಎರಡನೇ ವಿಕೆಟ್ ಕೂಡ ಪತನವಾಯಿತು. ಆದರೆ ಸ್ಫೋಟಕ ಬ್ಯಾಟಿಂಗ್‌ ಮುಂದುವರೆಸಿದ ಬೋಥಾ 24 ಎಸೆತಗಳಲ್ಲಿ 154 ಸ್ಟ್ರೈಕ್ ರೇಟ್‌ನಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 37 ರನ್ ಗಳಿಸಿದರು.

ಅಂತಿಮವಾಗಿ ಬೋಥಾ 56 ರನ್ ಗಳಿಸಿ ಔಟಾದರಾದರೂ, ಅವರ ಇನ್ನಿಂಗ್ಸ್‌ನಿಂದಾಗಿ ದಕ್ಷಿಣ ಆಫ್ರಿಕಾ ತಂಡ ಗುರಿಯ ಅರ್ಧಕ್ಕಿಂತ ಹೆಚ್ಚು ರನ್ ಗಳಿಸಿತು. ಇದಾದ ಬಳಿಕ ನಾಯಕಿ ಕೈಲ್ ರೈನೆಕೆ ಹಾಗೂ ವಿಕೆಟ್‌ಕೀಪರ್ ಬ್ಯಾಟರ್ ಕರಾಬೊ ಮಿಸೊ 38 ರನ್‌ಗಳ ಜೊತೆಯಾಟ ನಡೆಸಿದರು. ಇದರಿಂದಾಗಿ ತಂಡದ ಸ್ಕೋರ್ ಕೇವಲ 14.2 ಓವರ್‌ಗಳಲ್ಲಿ 94ಕ್ಕೆ ತಲುಪಿತು. ಅಂತಿಮವಾಗಿ ಗೆಲ್ಲಲು 28 ಎಸೆತಗಳಲ್ಲಿ 12 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಸುಲಭವಾಗಿ ಸಾಧಿಸಿತು. ತಂಡದ ಪರ ರೈನೆಕೆ 26 ಎಸೆತಗಳಲ್ಲಿ 26 ರನ್ ಗಳಿಸಿದರೆ, ಮಿಸೊ 29 ಎಸೆತಗಳಲ್ಲಿ 19 ರನ್‌ಗಳ ಮಹತ್ವದ ಇನ್ನಿಂಗ್ಸ್ ಆಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್