IND vs SA: ಭಾರತ- ಆಫ್ರಿಕಾ ನಡುವೆ ಟಿ20 ವಿಶ್ವಕಪ್ ಫೈನಲ್; ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

Women's U19 T20 World Cup Final: ಫೆಬ್ರವರಿ 2, ಭಾನುವಾರ ಮಲೇಷ್ಯಾದ ಕೌಲಾಲಂಪುರದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಫೈನಲ್ ನಡೆಯಲಿದೆ. ಭಾರತ ತಂಡ ಅಜೇಯವಾಗಿ ಫೈನಲ್ ತಲುಪಿದರೆ, ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಪಂದ್ಯದ ನೇರ ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ಲಭ್ಯವಿದೆ.

IND vs SA: ಭಾರತ- ಆಫ್ರಿಕಾ ನಡುವೆ ಟಿ20 ವಿಶ್ವಕಪ್ ಫೈನಲ್; ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?
ಭಾರತ- ಆಫ್ರಿಕಾ ಮಹಿಳಾ ತಂಡ

Updated on: Feb 01, 2025 | 5:33 PM

ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ನಾಳೆ ಅಂದರೆ ಫೆಬ್ರವರಿ 2 ರ ಭಾನುವಾರದಂದು ನಡೆಯಲಿದೆ. ಈ ಪ್ರಶಸ್ತಿ ಸುತ್ತಿನಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ ಹಾಗೂ ಇದೇ ಮೊದಲ ಬಾರಿಗೆ ಫೈನಲ್​ಗೆ ಅರ್ಹತೆ ಪಡೆದುಕೊಂಡಿರುವ ದಕ್ಷಿಣ ಆಫ್ರಿಕಾ ತಂಡದ ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಇದುವರೆಗೆ ಅಜೇಯವಾಗಿರುವ ಭಾರತ ತಂಡ ಫೈನಲ್ ಪಂದ್ಯದಲ್ಲೂ ಅದೇ ರೀತಿಯ ಪ್ರದರ್ಶನವನ್ನು ಮುಂದುವರೆಸಲು ಎದುರು ನೋಡುತ್ತಿದ್ದರೆ, ಇತ್ತ ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ದಕ್ಷಿಣ ಆಫ್ರಿಕಾ ಕೂಡ ಟೀಂ ಇಂಡಿಯಾವನ್ನು ಮಣಿಸುವ ಇರಾದೆಯಲ್ಲಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳು ಬಲಿಷ್ಠ ತಂಡಗಳನ್ನು ಮಣಿಸಿ ಫೈನಲ್ ಪ್ರವೇಶಿಸಿರುವುದರಿಂದ ನಾಳಿನ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಫೆಬ್ರವರಿ 2 ರ ಭಾನುವಾರದಂದು ನಡೆಯಲಿದೆ.

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಕೌಲಾಲಂಪುರದ ಬಯುಮಾಸ್ ಓವಲ್‌ನಲ್ಲಿ ನಡೆಯಲಿದೆ.

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದ ನೇರಪ್ರಸಾರ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಆಫ್ರಿಕಾ ನಡುವೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಇರಲಿದೆ.

ಎರಡು ತಂಡಗಳು ಇಂತಿವೆ:

ಭಾರತ: ನಿಕಿ ಪ್ರಸಾದ್ (ನಾಯಕಿ), ಸನಿಕಾ ಚಲಾಕೆ, ಗೊಂಗಡಿ ತ್ರಿಶಾ, ಕಮಲಿನಿ ಜಿ, ಭಾವಿಕಾ ಅಹಿರೆ, ಈಶ್ವರಿ ಅವಸಾರೆ, ಮಿಥಿಲಾ ವಿನೋದ್, ಜೋಶಿತಾ ವಿಜೆ, ಸೋನಮ್ ಯಾದವ್, ಪರುಣಿಕಾ ಸಿಸೋಡಿಯಾ, ಕೇಸರಿ ದೃತಿ, ಆಯುಷಿ ಶುಕ್ಲಾ, ಆನಂದಿತ ಕಿಶೋರ್, ಎಂಡಿ ಶಬ್ನಮ್, ವೈಷ್ಣವಿ ಶರ್ಮಾ.

ದಕ್ಷಿಣ ಆಫ್ರಿಕಾ: ಸಿಮೋನೆ ಲಾರೆನ್ಸ್, ಕರಾಬೊ ಮೆಸೊ, ಕೈಲಾ ರೆನೆಕೆ (ನಾಯಕಿ), ಗೆಮ್ಮಾ ಬೋಥಾ, ಸೆಶ್ನಿ ನಾಯ್ಡೂ, ಡಯಾರಾ ರಾಮ್ಲಕನ್, ಮೊನಾಲಿಸಾ ಲೆಗೊಡಿ, ನ್ಥಾಬಿಸೆಂಗ್ ನಿನಿ, ಫಾಯೆ ಕೌಲಿಂಗ್, ಜೆ-ಲೀ ಫಿಲಾಂಡರ್, ಲುಯಾಂಡಾ ನ್ಜುಜಾ, ಡೀ ವ್ಯಾನ್ ರೆನ್ಸ್‌ಬರ್ಗ್, ಮೀಕೆ ವ್ಯಾನ್ ವೂರ್ಸ್ಟ್, ಆಶ್ಲೇ ವ್ಯಾನ್ ವೈಕ್, ಶನೆಲ್ ವೆಂಟರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Sat, 1 February 25

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us