ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಏಕದಿನ ಸರಣಿಯಿಂದ ಹೊರಗುಳಿದಿರುವುದು ದೊಡ್ಡ ಸುದ್ದಿಯಾಗಿದೆ. ರೋಹಿತ್ ಶರ್ಮಾ ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಮತ್ತೊಂದೆಡೆ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಇದಲ್ಲದೇ ಆಫ್ ಸ್ಪಿನ್ನರ್ ಆರ್ ಅಶ್ವಿನ್ 4 ವರ್ಷಗಳ ನಂತರ ಟೀಂ ಇಂಡಿಯಾಗೆ ಮರಳಿದ್ದಾರೆ. ಅಶ್ವಿನ್ 2017 ರಲ್ಲಿ ಕೊನೆಯ ಬಾರಿಗೆ ODI ಆಡಿದರು. ಆಯ್ಕೆದಾರರು ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ರಿತುರಾಜ್ ಗಾಯಕ್ವಾಡ್ ಮತ್ತು ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ODI ತಂಡದಲ್ಲಿ ಸೇರಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಾಲ್ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ.
ಏಕದಿನ ಸರಣಿಗೆ ತಂಡ- ಕೆಎಲ್ ರಾಹುಲ್, ಶಿಖರ್ ಧವನ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ಪಂತ್, ಇಶಾನ್ ಕಿಶನ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಸಿರಾಜ್.
TEAM : KL Rahul (Capt), Shikhar Dhawan, Ruturaj Gaekwad, Virat Kohli, Surya Kumar Yadav, Shreyas Iyer, Venkatesh Iyer, Rishabh Pant (wk), Ishan Kishan (wk), Y Chahal, R Ashwin, W Sundar, J Bumrah (VC), Bhuvneshwar Kumar,Deepak Chahar, Prasidh Krishna, Shardul Thakur, Mohd. Siraj
— BCCI (@BCCI) December 31, 2021
ODI ಸರಣಿ ವೇಳಾಪಟ್ಟಿ
ಟೆಸ್ಟ್ ಸರಣಿಯ ನಂತರ, ODI ಸರಣಿಯು ಜನವರಿ 19 ರಿಂದ ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ಪ್ರಾರಂಭವಾಗಲಿದೆ. ಎರಡನೇ ಏಕದಿನ ಪಂದ್ಯ ಕೂಡ ಇದೇ ಮೈದಾನದಲ್ಲಿ ಜನವರಿ 21 ರಂದು ನಡೆಯಲಿದೆ. ಅಂತಿಮ ಏಕದಿನ ಪಂದ್ಯ ಜನವರಿ 23 ರಂದು ಕೇಪ್ ಟೌನ್‌ನಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತವೆ.
ದಕ್ಷಿಣ ಆಫ್ರಿಕಾದಲ್ಲಿ ಭಾರತದ ODI ದಾಖಲೆ
ದಕ್ಷಿಣ ಆಫ್ರಿಕಾದಲ್ಲಿ ಭಾರತ ತಂಡದ ODI ದಾಖಲೆ ತುಂಬಾ ಕೆಟ್ಟದಾಗಿದೆ. ತಂಡವು 34 ಪಂದ್ಯಗಳಲ್ಲಿ ಕೇವಲ 10 ಏಕದಿನ ಪಂದ್ಯಗಳನ್ನು ಗೆದ್ದಿದೆ ಮತ್ತು 22 ರಲ್ಲಿ ಸೋತಿದೆ. ಆದರೆ, ಕಳೆದ ಪ್ರವಾಸದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಅವರ ನೆಲದಲ್ಲಿ ಮೊದಲ ಬಾರಿಗೆ ಏಕದಿನ ಸರಣಿಯಲ್ಲಿ ಸೋಲಿಸಿತು. ಭಾರತ 6 ಪಂದ್ಯಗಳ ಸರಣಿಯನ್ನು 5-1 ಅಂತರದಿಂದ ವಶಪಡಿಸಿಕೊಂಡಿತ್ತು.
Published On - 8:37 pm, Fri, 31 December 21