Breaking News: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿ, ಬುಮ್ರಾಗೆ ವಿಶ್ರಾಂತಿ

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ವಿಂಡೀಸ್ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

Breaking News: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿ, ಬುಮ್ರಾಗೆ ವಿಶ್ರಾಂತಿ
ಟೀಂ ಇಂಡಿಯಾ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ಪೃಥ್ವಿಶಂಕರ

Updated on:Jul 14, 2022 | 2:53 PM

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ (Team India) ವನ್ನು ಪ್ರಕಟಿಸಲಾಗಿದೆ. ವಿಂಡೀಸ್ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ (Virat Kohli and Jasprit Bumrah) ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರ ಜೊತೆಗೆ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಅವರಿಗೂ ಆಯ್ಕೆದಾರರು ವಿಶ್ರಾಂತಿ ನೀಡಿದ್ದಾರೆ. ಅದೇ ಸಮಯದಲ್ಲಿ ಕೆಎಲ್ ರಾಹುಲ್ ಮತ್ತು ಕುಲ್ದೀಪ್ ಯಾದವ್ (KL Rahul and Kuldeep Yadav) ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆದರೆ, ಇಬ್ಬರೂ ಫಿಟ್ ಆದ ನಂತರವೇ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಆರ್ ಅಶ್ವಿನ್ ಟಿ20 ತಂಡಕ್ಕೆ ವಾಪಸಾಗಿರುವುದು ದೊಡ್ಡ ಸುದ್ದಿಯಾಗಿದೆ. ಟಿ20 ವಿಶ್ವಕಪ್ ಬಳಿಕ ಆರ್ ಅಶ್ವಿನ್ ಟಿ20 ತಂಡಕ್ಕೆ ಆಯ್ಕೆಯಾಗಿರಲಿಲ್ಲ. ನಾಯಕತ್ವ ರೋಹಿತ್ ಶರ್ಮಾ ಕೈಯಲ್ಲಿದ್ದು, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ ಕೂಡ ತಂಡದಲ್ಲಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ 20 ಸರಣಿಯು ಜುಲೈ 29 ರಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಏಕದಿನ ಸರಣಿಯನ್ನು ಆಡಲಾಗುವುದು. ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 22 ರಂದು ನಡೆಯಲಿದೆ.

ವೆಸ್ಟ್ ಇಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ

ರೋಹಿತ್ ಶರ್ಮಾ, ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವಾಸ್ ಖಾನ್, ಅವಾಸ್ ಮತ್ತು ಅರ್ಷದೀಪ್ ಸಿಂಗ್.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ

– ಮೊದಲ ಏಕದಿನ ಪಂದ್ಯ ಜುಲೈ 22 ರಂದು ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ.

– ಎರಡನೇ ಏಕದಿನ ಪಂದ್ಯ ಜುಲೈ 24 ರಂದು ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ.

– ಮೂರನೇ ಏಕದಿನ ಪಂದ್ಯ ಜುಲೈ 27 ರಂದು ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ.

ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ ವೇಳಾಪಟ್ಟಿ

– ಟಿ20 ಸರಣಿಯ ಮೊದಲ ಪಂದ್ಯ ಜುಲೈ 29 ರಂದು ಟ್ರಿನಿಡಾಡ್‌ನಲ್ಲಿ ನಡೆಯಲಿದೆ.

– ಎರಡನೇ ಟಿ20 ಪಂದ್ಯ ಆಗಸ್ಟ್ 1 ರಂದು ಸೇಂಟ್ ಕಿಟ್ಸ್‌ನಲ್ಲಿ ನಡೆಯಲಿದೆ.

– ಮೂರನೇ ಟಿ20 ಪಂದ್ಯ ಆಗಸ್ಟ್ 2 ರಂದು ಸೇಂಟ್ ಕಿಟ್ಸ್‌ನಲ್ಲಿ ನಡೆಯಲಿದೆ.

– ನಾಲ್ಕನೇ ಟಿ20 ಪಂದ್ಯ ಆಗಸ್ಟ್ 6 ರಂದು ಲಾಂಡರ್‌ಹಿಲ್‌ನಲ್ಲಿ ನಡೆಯಲಿದೆ.

– ಐದನೇ ಟಿ20 ಪಂದ್ಯ ಆಗಸ್ಟ್ 7 ರಂದು ಲಾಂಡರ್‌ಹಿಲ್‌ನಲ್ಲಿ ನಡೆಯಲಿದೆ.

ವೆಸ್ಟ್ ಇಂಡೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್.

Published On - 2:34 pm, Thu, 14 July 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ