VHT ಫೈನಲ್ ಬಳಿಕ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದ ಆಯ್ಕೆ

Champions trophy 2025: ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ ತಿಂಗಳಿಂದ ಶುರುವಾಗಲಿದೆ. ಈ ಬಾರಿ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್​ಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಇದಾದ ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಜರುಗಲಿದೆ.

VHT ಫೈನಲ್ ಬಳಿಕ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದ ಆಯ್ಕೆ
Team India
Follow us
ಝಾಹಿರ್ ಯೂಸುಫ್
|

Updated on:Jan 14, 2025 | 2:11 PM

ಬಹುನಿರೀಕ್ಷಿತ ಚಾಂಪಿಯನ್ಸ್​ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಎಂಟು ತಂಡಗಳಲ್ಲಿ ಈಗಾಗಲೇ 6 ತಂಡಗಳ ಘೋಷಣೆಯಾಗಿದೆ. ಇದಾಗ್ಯೂ ಆತಿಥೇಯ ಪಾಕಿಸ್ತಾನ್ ಹಾಗೂ ಭಾರತ ಚಾಂಪಿಯನ್ಸ್​ ಟ್ರೋಫಿಗಾಗಿ ತಮ್ಮ ತಂಡಗಳನ್ನು ಪ್ರಕಟಿಸಿಲ್ಲ.

ಬಿಸಿಸಿಐ ಆಯ್ಕೆ ಸಮಿತಿ ಭಾರತ ತಂಡವನ್ನು ಘೋಷಿಸದಿರಲು ಮುಖ್ಯ ಕಾರಣ ವಿಜಯ ಹಝಾರೆ ಟೂರ್ನಿ (VHT) ಎನ್ನಲಾಗಿದೆ. ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆ ಆಟಗಾರರ ಪ್ರದರ್ಶನವನ್ನು ಪರಿಗಣಿಸಲು ಅಂತಿಮ ಪಂದ್ಯದದವರೆಗೆ ಕಾಯಲು ನಿರ್ಧರಿಸಲಾಗಿದೆ.

ವಿಜಯ ಹಝಾರೆ ಟೂರ್ನಿ ಫೈನಲ್ ಪಂದ್ಯವು ಜನವರಿ 18 ರಂದು ನಡೆಯಲಿದೆ. ಈ ಪಂದ್ಯದ ಬಳಿಕ ಆಯ್ಕೆ ಸಮಿತಿಯು ಅಂತಿಮ ಸಭೆ ನಡೆಸಲಿದ್ದು, ಆ ಬಳಿಕ ಚಾಂಪಿಯನ್ಸ್​ ಟ್ರೋಫಿಗೆ ಟೀಮ್ ಇಂಡಿಯಾದ ಘೋಷಣೆಯಾಗಲಿದೆ. ಅಂದರೆ ಜನವರಿ 19 ರಂದು, ಭಾನುವಾರ ಭಾರತ ತಂಡದ ಘೋಷಣೆಯಾಗುವ ಸಾಧ್ಯತೆಯಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು?

  • ಗ್ರೂಪ್-A
  • ಭಾರತ
  • ಪಾಕಿಸ್ತಾನ್
  • ನ್ಯೂಝಿಲೆಂಡ್
  • ಬಾಂಗ್ಲಾದೇಶ್

ಇದನ್ನೂ ಓದಿ: Champions Trophy 2025: ಚಾಂಪಿಯನ್ಸ್ ಟ್ರೋಫಿಗೆ 6 ತಂಡಗಳು ಪ್ರಕಟ

  • ಗ್ರೂಪ್- B
  • ಸೌತ್ ಆಫ್ರಿಕಾ
  • ಆಸ್ಟ್ರೇಲಿಯಾ
  • ಅಫ್ಘಾನಿಸ್ತಾನ್
  • ಇಂಗ್ಲೆಂಡ್

ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ:

  1. ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
  2. ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
  3. ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
  4. ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
  5. ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)

ಚಾಂಪಿಯನ್ಸ್​ ಟ್ರೋಫಿಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಲೆಜೆಂಡ್ ಸುನಿಲ್ ಗವಾಸ್ಕರ್ ಹಾಗೂ ಇರ್ಫಾನ್ ಪಠಾಣ್ ಹೆಸರಿಸಿದ 15 ಸದಸ್ಯರ ಸಂಭಾವ್ಯ ತಂಡ ಈ ಕೆಳಗಿನಂತಿದೆ.

ಭಾರತ ಸಂಭಾವ್ಯ ಏಕದಿನ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

Published On - 2:09 pm, Tue, 14 January 25

ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?