ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಎಂಟು ತಂಡಗಳಲ್ಲಿ ಈಗಾಗಲೇ 6 ತಂಡಗಳ ಘೋಷಣೆಯಾಗಿದೆ. ಇದಾಗ್ಯೂ ಆತಿಥೇಯ ಪಾಕಿಸ್ತಾನ್ ಹಾಗೂ ಭಾರತ ಚಾಂಪಿಯನ್ಸ್ ಟ್ರೋಫಿಗಾಗಿ ತಮ್ಮ ತಂಡಗಳನ್ನು ಪ್ರಕಟಿಸಿಲ್ಲ.
ಬಿಸಿಸಿಐ ಆಯ್ಕೆ ಸಮಿತಿ ಭಾರತ ತಂಡವನ್ನು ಘೋಷಿಸದಿರಲು ಮುಖ್ಯ ಕಾರಣ ವಿಜಯ ಹಝಾರೆ ಟೂರ್ನಿ (VHT) ಎನ್ನಲಾಗಿದೆ. ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆ ಆಟಗಾರರ ಪ್ರದರ್ಶನವನ್ನು ಪರಿಗಣಿಸಲು ಅಂತಿಮ ಪಂದ್ಯದದವರೆಗೆ ಕಾಯಲು ನಿರ್ಧರಿಸಲಾಗಿದೆ.
ವಿಜಯ ಹಝಾರೆ ಟೂರ್ನಿ ಫೈನಲ್ ಪಂದ್ಯವು ಜನವರಿ 18 ರಂದು ನಡೆಯಲಿದೆ. ಈ ಪಂದ್ಯದ ಬಳಿಕ ಆಯ್ಕೆ ಸಮಿತಿಯು ಅಂತಿಮ ಸಭೆ ನಡೆಸಲಿದ್ದು, ಆ ಬಳಿಕ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾದ ಘೋಷಣೆಯಾಗಲಿದೆ. ಅಂದರೆ ಜನವರಿ 19 ರಂದು, ಭಾನುವಾರ ಭಾರತ ತಂಡದ ಘೋಷಣೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Champions Trophy 2025: ಚಾಂಪಿಯನ್ಸ್ ಟ್ರೋಫಿಗೆ 6 ತಂಡಗಳು ಪ್ರಕಟ
ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಲೆಜೆಂಡ್ ಸುನಿಲ್ ಗವಾಸ್ಕರ್ ಹಾಗೂ ಇರ್ಫಾನ್ ಪಠಾಣ್ ಹೆಸರಿಸಿದ 15 ಸದಸ್ಯರ ಸಂಭಾವ್ಯ ತಂಡ ಈ ಕೆಳಗಿನಂತಿದೆ.
ಭಾರತ ಸಂಭಾವ್ಯ ಏಕದಿನ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.
Published On - 2:09 pm, Tue, 14 January 25