Team India: ಏಷ್ಯಾಕಪ್​ಗೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!

India Squad Asia Cup: ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ.

Team India: ಏಷ್ಯಾಕಪ್​ಗೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!
Team India
Updated By: ಝಾಹಿರ್ ಯೂಸುಫ್

Updated on: Aug 07, 2022 | 2:58 PM

ಏಷ್ಯನ್ ರಾಷ್ಟ್ರಗಳ ಟಿ20 ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2022)  ಆಗಸ್ಟ್ 27 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಈಗಾಗಲೇ ಪಾಕಿಸ್ತಾನ್ ತನ್ನ ತಂಡವನ್ನು ಘೋಷಿಸಿದೆ. ಇತ್ತ ಉಳಿದ ತಂಡಗಳ ಘೋಷಣೆಗೆ ಆಗಸ್ಟ್ 8ರವರೆಗೆ ಏಷ್ಯನ್ ಕ್ರಿಕೆಟ್ ಅಸೋಷಿಯೇಷನ್ ಗಡುವು ನೀಡಿದೆ. ಹೀಗಾಗಿ ಟೀಮ್ ಇಂಡಿಯಾ (Team India) ಸೇರಿದಂತೆ ಉಳಿದ ತಂಡಗಳನ್ನು ಸೋಮವಾರ ಘೋಷಿಸಬಹುದು. ಆದರೆ ಇದಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಭಾರತ ತಂಡದ ಪ್ರಮುಖ ವೇಗಿ ಹರ್ಷಲ್ ಪಟೇಲ್ ಗಾಯಗೊಂಡಿದ್ದ ಕಾರಣ ವೆಸ್ಟ್ ಇಂಡೀಸ್ ವಿರುದ್ದದದ ಸರಣಿಯಲ್ಲಿ ಮೈದಾನಕ್ಕೆ ಇಳಿದಿರಲಿಲ್ಲ. ಇದೀಗ ಅವರು ಏಷ್ಯಾಕಪ್ ಕೂಡ ಆಡುವುದು ಅನುಮಾನ ಎನ್ನಲಾಗುತ್ತಿದೆ.

ಹರ್ಷಲ್ ಪಟೇಲ್ ಪಕ್ಕೆಲುಬಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ವೆಸ್ಟ್ ಇಂಡೀಸ್ ವಿರುದ್ದ ಸರಣಿಯ ವೇಳೆ ವಿಶ್ರಾಂತಿ ಪಡೆದರೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರಿಗೆ ನಾಲ್ಕರಿಂದ 6 ವಾರಗಳವರೆಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಇತ್ತ ಆಗಸ್ಟ್ 27 ರಿಂದ ಏಷ್ಯಾಕಪ್ ಶುರುವಾಗಲಿದ್ದು, ಅದಕ್ಕೂ ನಾಲ್ಕೈದು ದಿನಗಳ ಮೊದಲು ಟೀಮ್ ಇಂಡಿಯಾ ಯುಎಇನತ್ತ ಮುಖ ಮಾಡಲಿದೆ. ಆದರೆ ಹರ್ಷಲ್ ಪಟೇಲ್ ಅವರಿಗೆ ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿರುವ ಕಾರಣ ಅವರು ಏಷ್ಯಾಕಪ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಮತ್ತೊಂದೆಡೆ ಮುಂಬರುವ ಟಿ20 ವಿಶ್ವಕಪ್​ ಹಿನ್ನೆಲೆಯಲ್ಲಿ ಹರ್ಷಲ್ ಪಟೇಲ್ ಅವರ ಗಾಯವನ್ನು ಬಿಸಿಸಿಐ ಕೂಡ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ವಿಂಡೀಸ್ ವಿರುದ್ದದ ಸರಣಿಯ ಬಳಿಕ ಹರ್ಷಲ್ ಪಟೇಲ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಒಟ್ಟಿನಲ್ಲಿ ಟೀಮ್ ಇಂಡಿಯಾ ಬೌಲಿಂಗ್ ವಿಭಾಗದ ಟ್ರಂಪ್ ಕಾರ್ಡ್ ಆಗಿರುವ ಹರ್ಷಲ್ ಪಟೇಲ್ ಹೊರಗುಳಿಯುತ್ತಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯುಂಟು ಮಾಡಲಿದೆ. ಅದರಲ್ಲೂ ಡೆತ್ ಓವರ್​ಗಳಲ್ಲಿ ಅತ್ಯುತ್ತಮ ದಾಳಿ ನಡೆಸುವ ಪಟೇಲ್ ಸ್ಥಾನದಲ್ಲಿ ಯಾರಿಗೆ ಚಾನ್ಸ್ ಸಿಗಲಿದೆ ಕಾದು ನೋಡಬೇಕಿದೆ. ಅಂದಹಾಗೆ ಏಷ್ಯಾಕಪ್ ಆಗಸ್ಟ್ 27 ರಿಂದ ಶುರುವಾಗಲಿದ್ದು, ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ.

 

ಏಷ್ಯಾ ಕಪ್ ತಂಡಗಳ ಗ್ರೂಪ್​:

  • ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  • ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

ಸಂಪೂರ್ಣ ವೇಳಾಪಟ್ಟಿ ಹೀಗಿದೆ:

  • ಆಗಸ್ಟ್ 27 – ಶ್ರೀಲಂಕಾ vs ಅಫ್ಘಾನಿಸ್ತಾನ- ದುಬೈ
  • ಆಗಸ್ಟ್ 28 – ಭಾರತ vs ಪಾಕಿಸ್ತಾನ- ದುಬೈ
  • ಆಗಸ್ಟ್ 30 – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  • ಆಗಸ್ಟ್ 31 – ಭಾರತ vs ಕ್ವಾಲಿಫೈಯರ್ ಟೀಮ್- ದುಬೈ
  • ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  • ಸೆಪ್ಟೆಂಬರ್ 2-  ಪಾಕಿಸ್ತಾನ vs ಕ್ವಾಲಿಫೈಯರ್ ಟೀಮ್-  ಶಾರ್ಜಾ

ಸೂಪರ್- 4  ವೇಳಾಪಟ್ಟಿ:

  • ಸೆಪ್ಟೆಂಬರ್ 3 –  B1 vs B2 – ಶಾರ್ಜಾ
  • ಸೆಪ್ಟೆಂಬರ್ 4 A1 vs A2 – ದುಬೈ
  • ಸೆಪ್ಟೆಂಬರ್ 6 A1 vs B1 – ದುಬೈ
  • ಸೆಪ್ಟೆಂಬರ್ 7 A2 vs B2 –  ದುಬೈ
  • ಸೆಪ್ಟೆಂಬರ್ 8 A1 vs B2 – ದುಬೈ
  • ಸೆಪ್ಟೆಂಬರ್ 9 B1 vs- A2 ದುಬೈ
  • ಸೆಪ್ಟೆಂಬರ್ 11- ಫೈನಲ್ ಪಂದ್ಯ-  ದುಬೈ

ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ.  ಇಲ್ಲಿ ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ. ಇನ್ನು ಸೆಪ್ಟೆಂಬರ್ 3 ರಿಂದ ಸೂಪರ್- 4 ತಂಡಗಳ ಮುಖಾಮುಖಿ ಶುರುವಾಗಲಿದೆ.