AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳು ಪ್ರಕಟ

India Squad: ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಘೋಷಿಸಲಾಗಿದೆ. ಏಕದಿನ ತಂಡದಲ್ಲಿ ಹೊಸಮುಖವಾಗಿ ಮೂವರು ಆಟಗಾರರು ಕಾಣಿಸಿಕೊಂಡಿದ್ದು, ಟೆಸ್ಟ್ ತಂಡದಲ್ಲಿ ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ಈ ಬಾರಿ ಟೀಮ್ ಇಂಡಿಯಾದ ಉಪ ನಾಯಕರುಗಳು ಕೂಡ ಬದಲಾಗಿದ್ದಾರೆ.

ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳು ಪ್ರಕಟ
Team India
ಝಾಹಿರ್ ಯೂಸುಫ್
|

Updated on:May 19, 2026 | 5:00 PM

Share

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಟೆಸ್ಟ್ ತಂಡದಲ್ಲಿ ಹೊಸ ಮುಖಗಳು:

  • ಮಾನವ್ ಸುತಾರ್ (ಸ್ಪಿನ್ನರ್)
  • ಗುರ್ನೂರ್ ಬ್ರಾರ್ (ವೇಗದ ಬೌಲರ್).

ಏಕದಿನ ತಂಡದಲ್ಲಿ ಹೊಸ ಮುಖಗಳು:

  • ಗುರ್ನೂರ್ ಬ್ರಾರ್ (ವೇಗದ ಬೌಲರ್)
  • ಪ್ರಿನ್ಸ್ ಯಾದವ್ (ವೇಗದ ಬೌಲರ್)
  • ಹರ್ಷ್ ದುಬೆ (ಸ್ಪಿನ್ನರ್)

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.

ಇದನ್ನೂ ಓದಿ:BBL 2026: ಭಾರತದಲ್ಲಿ ಬಿಗ್ ಬ್ಯಾಷ್ ಲೀಗ್..!

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯು ಜೂನ್ 6 ರಿಂದ ಆರಂಭವಾಗಲಿದ್ದು, ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಈ ಎಲ್ಲಾ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

ದಿನಾಂಕ ಸಮಯ ಪಂದ್ಯ ಸ್ವರೂಪ ಸ್ಥಳ
ಜೂನ್ 6 ಬೆಳಿಗ್ಗೆ 9:30 ಭಾರತ vs ಅಫ್ಘಾನಿಸ್ತಾನ್ ಟೆಸ್ಟ್ ನ್ಯೂ ಚಂಡೀಗಢ್
ಜೂನ್ 14 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಧರ್ಮಶಾಲಾ
ಜೂನ್ 17 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಲಕ್ನೋ
ಜೂನ್ 20 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಚೆನ್ನೈ

Published On - 4:54 pm, Tue, 19 May 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More