India Squad: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ನಾಯಕ
India Squad: ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ. ಅಂದರೆ ಅಕ್ಟೋಬರ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವುದು ವಿಶೇಷ.
ಏಕದಿನ ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಆಯ್ಕೆ ಮಾಡಲಾದ 15 ಸದಸ್ಯರ ಈ ಬಳಗವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮೊದಲ ಎರಡು ಪಂದ್ಯಗಳಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಮೂರನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಇನ್ನು ಈ ಸರಣಿಯ ಮೂಲಕ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ ಮರಳಿದ್ದಾರೆ. ಅಂದರೆ ಏಷ್ಯಾಕಪ್ ಟೂರ್ನಿಗೆ ಅಶ್ವಿನ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಿರುವುದು ವಿಶೇಷ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಮಿಂಚಿದರೆ ಏಕದಿನ ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯಬಹುದು. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.
ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.
ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್ (ಫಿಟ್ನೆಸ್ ಸಾಧಿಸಿದರೆ).
ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಅಕ್ಷರ್ ಪಟೇಲ್ ಅವರು ಮೊದಲ 2 ಪಂದ್ಯಗಳಿಂದ ಹೊರಗುಳಿದಿದ್ದು, ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಮೂರನೇ ಏಕದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:
- ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
- ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
- ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).
ಆಸ್ಟ್ರೇಲಿಯಾ ಮೊದಲ ಎದುರಾಳಿ:
ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ. ಅಂದರೆ ಅಕ್ಟೋಬರ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವುದು ವಿಶೇಷ.
ಈ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರೆ ಏಕದಿನ ವಿಶ್ವಕಪ್ನಲ್ಲೂ ಭಾರತ ತಂಡದಿಂದ ಅತ್ಯುತ್ತಮ ಆಟವನ್ನು ನಿರೀಕ್ಷಿಸಬಹುದು. ಏಕೆಂದರೆ ಪ್ರಸ್ತುತ ಏಕದಿನ ತಂಡಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ವಿರುದ್ಧ ಏಷ್ಯಾಕಪ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ.
ಇದೀಗ ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ವಿಶ್ವಕಪ್ಗೂ ಮುನ್ನ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ. ಹೀಗಾಗಿ ಈ ಸರಣಿಯಲ್ಲಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.
Published On - 8:50 pm, Mon, 18 September 23