ಟೀಮ್ ಇಂಡಿಯಾದಲ್ಲಿ ಆರು ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು..!

India Test Squad: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಇನ್ನು 2ನೇ ಟೆಸ್ಟ್ ಪಂದ್ಯವು ಮಾರ್ಚ್ 27 ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಉಭಯ ತಂಡಗಳು ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

ಟೀಮ್ ಇಂಡಿಯಾದಲ್ಲಿ ಆರು ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು..!
India Squad
Follow us
ಝಾಹಿರ್ ಯೂಸುಫ್
|

Updated on:Sep 09, 2024 | 8:01 AM

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಟೆಸ್ಟ್ ಪಂದ್ಯಕ್ಕಾಗಿ ಘೋಷಿಸಲಾಗಿರುವ 16 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಡಗೈ ವೇಗಿ ಯಶ್ ದಯಾಳ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಹಾಗೆಯೇ ಈ ಸರಣಿಯ ಮೂಲಕ ರಿಷಭ್ ಪಂತ್ ಭಾರತ ಟೆಸ್ಟ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಇನ್ನು ಈ ಬಾರಿ ಆಯ್ಕೆ ಮಾಡಲಾದ 16 ಸದಸ್ಯರಲ್ಲಿ ಆರು ಪರಿಪೂರ್ಣ ಬ್ಯಾಟರ್​ಗಳಿದ್ದಾರೆ. ಇವರ ಜೊತೆ ಮೂವರು ಆಲ್​ರೌಂಡರ್​ಗಳಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಇಬ್ಬರಿದ್ದರೆ, ಬೌಲರ್​ಗಳಾಗಿ ಐವರಿಗೆ ಸ್ಥಾನ ಕಲ್ಪಿಸಲಾಗಿದೆ.

  • ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಸ್ಥಾನ ಪಡೆದಿದ್ದಾರೆ.
  • ವಿಕೆಟ್​ ಕೀಪರ್​ಗಳಾಗಿ ಈ ಬಾರಿ ಸ್ಥಾನಗಿಟ್ಟಿಸಿಕೊಂಡಿರುವುದು ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್.
  • ಆಲ್​ರೌಂಡರ್​ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.
  • ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಹಾಗೂ ಆಕಾಶ್ ದೀಪ್ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಬಿಸಿಸಿಐ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ. ಇನ್ನು 2ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಬದಲಾಗುವ ಸಾಧ್ಯತೆಯಿದೆ. ಅಂದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದ್ದು, ಈ ಮೂಲಕ ದುಲೀಪ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಮಣೆಹಾಕಬಹುದು. ಹೀಗಾಗಿಯೇ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಮಾತ್ರ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡದ ಈ ಕೆಳಗಿನಂತಿದೆ…

  1. ರೋಹಿತ್ ಶರ್ಮಾ (ನಾಯಕ)
  2. ಯಶಸ್ವಿ ಜೈಸ್ವಾಲ್
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ಸರ್ಫರಾಝ್ ಖಾನ್
  6. ಕೆಎಲ್ ರಾಹುಲ್,
  7. ರಿಷಭ್ ಪಂತ್ (ವಿಕೆಟ್ ಕೀಪರ್)
  8. ಧ್ರುವ್ ಜುರೇಲ್ (ವಿಕೆಟ್ ಕೀಪರ್)
  9. ರವಿಚಂದ್ರನ್ ಅಶ್ವಿನ್
  10. ರವೀಂದ್ರ ಜಡೇಜಾ
  11. ಕುಲ್ದೀಪ್ ಯಾದವ್
  12. ಅಕ್ಷರ್ ಪಟೇಲ್
  13. ಮೊಹಮ್ಮದ್ ಸಿರಾಜ್
  14. ಜಸ್​ಪ್ರೀತ್ ಬುಮ್ರಾ
  15. ಆಕಾಶ್ ದೀಪ್
  16. ಯಶ್ ದಯಾಳ್.

ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಗುರುವಾರ, 19 ಸೆಪ್ಟೆಂಬರ್ 2024 9:30 AM ಚೆನ್ನೈ
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಶುಕ್ರವಾರ, 27 ಸೆಪ್ಟೆಂಬರ್ 2024 9:30 AM ಕಾನ್ಪುರ
1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್

Published On - 7:59 am, Mon, 9 September 24

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ