IND vs AFG T20I: ಮುಂದಿನ ವಾರ ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡ ಪ್ರಕಟ: ಕ್ಯಾಪ್ಟನ್ ಯಾರು ಗೊತ್ತೇ?

India Squad for Afghanistan T20I Series: ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದಿನ ವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಟಿ20I ನಾಯಕತ್ವಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರಂತೆ. ಆಯ್ಕೆಗಾರರು ಮತ್ತು ಬಿಸಿಸಿಐ ರೋಹಿತ್ ಮನವೊಲಿಸುತ್ತಿದ್ದಾರಂತೆ.

IND vs AFG T20I: ಮುಂದಿನ ವಾರ ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡ ಪ್ರಕಟ: ಕ್ಯಾಪ್ಟನ್ ಯಾರು ಗೊತ್ತೇ?
IND vs AFG T20I
Follow us
|

Updated on: Dec 28, 2023 | 7:20 AM

ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ, ಭಾರತ ಕ್ರಿಕೆಟ್ ತಂಡವು ಮೂರು ಪಂದ್ಯಗಳ ಟಿ20I ಸರಣಿಯಲ್ಲಿ ಅಫ್ಘಾನಿಸ್ತಾನ (India vs Afghanistan) ತಂಡವನ್ನು ಎದುರಿಸಲಿದೆ. ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಟಿ20 ಸರಣಿ ಐಸಿಸಿ ಟಿ20 ವಿಶ್ವಕಪ್ 2024 ರ ಕೊನೆಯ ದ್ವಿಪಕ್ಷೀಯ ಟಿ20I ಸರಣಿಯಾಗಿದೆ. ಆದರೆ ಭಾರತದ ಟಿ20I ತಂಡದ ನಾಯಕರಾದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕ್ವಾಡ್ ಗಾಯಗೊಂಡಿದ್ದು, ಬಿಸಿಸಿಐ ಆಯ್ಕೆ ಸಮಿತಿಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಹೀಗಾಗಿ ನಾಯಕನನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಟೆನ್ಶನ್​ನಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಇದೆ. ಒಂದು ಮೂಲಗಳ ಪ್ರಕಾರ, ಈ ಸರಣಿ ಮೂಲಕ ರೋಹಿತ್ ಶರ್ಮಾ ಟಿ20I ನಾಯಕತ್ವಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರಂತೆ.

ರೋಹಿತ್ ಶರ್ಮಾ ಟಿ20 ವಿಶ್ವಕಪ್ 2022 ರಿಂದ ಈವರೆಗೆ ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ. ಆದರೆ ಆಯ್ಕೆಗಾರರು ಮತ್ತು ಬಿಸಿಸಿಐ ಟಿ20 ವಿಶ್ವಕಪ್ 2024 ರಲ್ಲಿ ಭಾರತವನ್ನು ಮುನ್ನಡೆಸಬೇಕೆಂದು ರೋಹಿತ್ ಬಳಿ ಕೇಳಿದ್ದಾರೆ. ಹೀಗಾಗಿ ರೋಹಿತ್ ಪುನಃ ಟಿ20 ನಾಯಕತ್ವಕ್ಕೆ ಮರಳುವ ಸಾಧ್ಯತೆ ಇದೆ.

KL Rahul: ಧೋನಿಯ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಎಂಟ್ರಿ

ಇದನ್ನೂ ಓದಿ
Image
2023ರ ಒಡಿಐ ವರ್ಲ್ಡ್​ಕಪ್ ಪಂದ್ಯಗಳಿಗೆ ದಾಖಲೆ ವೀಕ್ಷಣೆ
Image
KL Rahul: ಸೆಂಚುರಿಯನ್​ನಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
Image
KL Rahul: ಭರ್ಜರಿ ಶತಕ ಬಾರಿಸಿದ ಕೆಎಲ್ ರಾಹುಲ್
Image
Kagiso Rabada: ರೋಹಿತ್ ಶರ್ಮಾರನ್ನು ಔಟ್ ಮಾಡಿಯೇ ದಾಖಲೆ ಬರೆದ ಕಗಿಸೊ ರಬಾಡ

“ಯಾರು ತಂಡವನ್ನು ಮುನ್ನಡೆಸುತ್ತಾರೆ ಎಂಬುದನ್ನು ಆಯ್ಕೆದಾರರು ನಿರ್ಧರಿಸುತ್ತಾರೆ. ನಾವು ರೋಹಿತ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇವೆ ಮತ್ತು ಅವರು ಟಿ20 ವಿಶ್ವಕಪ್‌ನಲ್ಲಿ ಮುನ್ನಡೆಸಲು ಸಿದ್ಧರಾಗಿದ್ದಾರೆ. ಆದರೆ ಇಂಗ್ಲೆಂಡ್ ಟೆಸ್ಟ್ ಸರಣಿ ಹೆಚ್ಚು ಮಹತ್ವದ್ದಾಗಿದೆ. ಅಜಿತ್ (ಅಗರ್ಕರ್) ರೋಹಿತ್ ಅವರೊಂದಿಗೆ ಈ ಕುರಿತು ಮಾತನಾಡುತ್ತಾರೆ,”ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದರು.

ಈ ಹಿಂದೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕರಾದರು. ಆದರೆ ಅಕ್ಟೋಬರ್‌ನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಪಾದದ ಗಾಯದಿಂದಾಗಿ ಪಾಂಡ್ಯ ಹೊರಗುಳಿದಿದ್ದಾರೆ. ಅವರು ಇನ್ನೂ ತಮ್ಮ ಗಾಯದಿಂದ ಚೇತರಿಸಿಕೊಂಡಿಲ್ಲ. ಐಪಿಎಲ್ 2024 ರ ವೇಳೆಗೆ ಮರಳುವ ಸಾಧ್ಯತೆಯಿದೆ.

ಇನ್ನು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಕೂಡ ಪಾದದ ಗಾಯದಿಂದ ಹೊರಗುಳಿದಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಇನ್ನೊಬ್ಬ ನಾಯಕ – ರುತುರಾಜ್ ಗಾಯಕ್ವಾಡ್ ಕೂಡ ಗಾಯಗೊಂಡಿದ್ದಾರೆ. ಆದ್ದರಿಂದ, ಭಾರತವು ಈಗ ರೋಹಿತ್ ಶರ್ಮಾಗೆ ನಾಯಕತ್ವ ನೀಡಲು ಮುಂದಾಗಿದೆ. ಭಾರತ-ಆಫ್ರಿಕಾ ಟೆಸ್ಟ್ ಸರಣಿಗೆ ಮುಂಚಿತವಾಗಿ, ರೋಹಿತ್ ಶರ್ಮಾ ಟಿ20I ಗಳಿಗೆ ಮರಳುವ ಸುಳಿವು ನೀಡಿದ್ದರು. “ನನ್ನ ಮುಂದೆ ಯಾವ ಕ್ರಿಕೆಟ್ ಇದೆಯೋ ಅದನ್ನು ನಾನು ಆಡಲು ಬಯಸುತ್ತೇನೆ” ಎಂದು ರೋಹಿತ್ ಹೇಳಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ
ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ
ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ
ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು
ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು
ಹಿಂದೂ-ಮುಸ್ಲಿಂ ಮಾಡೋದು ಬಿಟ್ರೆ ಯತ್ನಾಳ್​ಗೆ ಬೇರೇನು ಗೊತ್ತಿದೆ: ಲಕ್ಷ್ಮಿ
ಹಿಂದೂ-ಮುಸ್ಲಿಂ ಮಾಡೋದು ಬಿಟ್ರೆ ಯತ್ನಾಳ್​ಗೆ ಬೇರೇನು ಗೊತ್ತಿದೆ: ಲಕ್ಷ್ಮಿ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ
ರಾಜ್ಯೋತ್ಸವದಂದು ಹಿಂದಿ ಸಿನಿಮಾ ಕನ್ನಡಪರ ಸಂಘಟನೆಗಳ ವಿರೋಧ
ರಾಜ್ಯೋತ್ಸವದಂದು ಹಿಂದಿ ಸಿನಿಮಾ ಕನ್ನಡಪರ ಸಂಘಟನೆಗಳ ವಿರೋಧ
ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ
ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ
ನೋಟೀಸ್ ವಾಪಸ್ಸು ಪಡೆಯುತ್ತೇವೆಂದು ಸಿಎಂ ಹೇಳಿದರೂ ಮುಗಿಯದ ತಗಾದೆ!
ನೋಟೀಸ್ ವಾಪಸ್ಸು ಪಡೆಯುತ್ತೇವೆಂದು ಸಿಎಂ ಹೇಳಿದರೂ ಮುಗಿಯದ ತಗಾದೆ!