
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಟಿ20 ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ.
ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಶುಭ್ಮನ್ ಗಿಲ್ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಜಿತೇಶ್ ಶರ್ಮಾ ಬದಲಿಗೆ ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಕಿವೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಈ ಕೆಳಗಿನಂತಿವೆ…
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಇನ್ನು ಈ ಇದೇ ತಂಡವೇ ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ನಲ್ಲೂ ಕಣಕ್ಕಿಳಿಯಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೂಲಕ 15 ಸದಸ್ಯರುಗಳ ಬಳಗವು ಟಿ20 ವಿಶ್ವಕಪ್ಗೆ ಸಿದ್ಧತೆಗಳನ್ನು ನಡೆಸಲಿದೆ.
ಇದನ್ನೂ ಓದಿ: ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ