India T20 WC Squad: ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಲು ದಿನಾಂಕ ನಿಗದಿ..!
T20 World Cup: ಐಸಿಸಿ ಒಂದು ತಂಡಕ್ಕೆ ಒಟ್ಟು 23 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶ ನೀಡಿದೆ. ಇದರಲ್ಲಿ 15 ಆಟಗಾರರು ಮತ್ತು 8 ಸಹಾಯಕ ಸಿಬ್ಬಂದಿ ಇರಬಹುದು ಎಂಬ ಷರತ್ತು ವಿಧಿಸಿದೆ.
T20 ವಿಶ್ವಕಪ್ 2022 (T20 World Cup) ಅಕ್ಟೋಬರ್ 16 ರಿಂದ ಪ್ರಾರಂಭವಾಗಲಿದ್ದು, ಇದರಲ್ಲಿ ಭಾರತ ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ. ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಈ ಪಂದ್ಯದ ಬಗ್ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಸೆಪ್ಟೆಂಬರ್ 15 ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ (Rohit Sharma) ನಾಯಕತ್ವದಲ್ಲಿ ಅನೇಕ ಯುವ ಆಟಗಾರರು ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯುವ ನಿರೀಕ್ಷೆ ಇದೆ.
ಮಾಧ್ಯಮ ವರದಿಗಳ ಪ್ರಕಾರ, ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಸೆಪ್ಟೆಂಬರ್ 15 ರಂದು ಪ್ರಕಟಿಸುವ ಸಾಧ್ಯತೆಯಿದೆ. ಇದಕ್ಕೂ ಮೊದಲು ಮುಂಬೈನಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆಗಸ್ಟ್ 28ರಿಂದ ಏಷ್ಯಾಕಪ್ನಲ್ಲಿ ಭಾಗವಹಿಸಲಿದ್ದು, ಆಯ್ಕೆ ಸಮಿತಿಯೂ ಈ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ಏಷ್ಯಾಕಪ್ ಫೈನಲ್ ಪಂದ್ಯದ ನಂತರ ಟೀಂ ಇಂಡಿಯಾ ಘೋಷಣೆಯಾಗುವ ಸಾಧ್ಯತೆ ಇದೆಯಂತೆ.
ತಮ್ಮ ತಮ್ಮ ತಂಡಗಳನ್ನು ಘೋಷಿಸಲು ಐಸಿಸಿ ಎಲ್ಲಾ ತಂಡಗಳಿಗೆ ಸೆಪ್ಟೆಂಬರ್ 16 ರವರೆಗೆ ಕಾಲಾವಕಾಶ ನೀಡಿದೆ. ಈ ಪಂದ್ಯಾವಳಿಗೆ ಪ್ರತಿ ತಂಡಗಳು ಗರಿಷ್ಠ 15 ಆಟಗಾರರನ್ನು ಮಾತ್ರ ಆಯ್ಕೆ ಮಾಡಬೇಕಿದೆ. ಐಸಿಸಿ ಒಂದು ತಂಡಕ್ಕೆ ಒಟ್ಟು 23 ಸದಸ್ಯರನ್ನು ಆಯ್ಕೆ ಮಾಡುವ ಅವಕಾಶ ನೀಡಿದೆ. ಇದರಲ್ಲಿ 15 ಆಟಗಾರರು ಮತ್ತು 8 ಸಹಾಯಕ ಸಿಬ್ಬಂದಿ ಇರಬಹುದು ಎಂಬ ಷರತ್ತು ವಿಧಿಸಿದೆ.
ಏತನ್ಮಧ್ಯೆ, ಅಕ್ಟೋಬರ್ 23 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ T20 ವಿಶ್ವಕಪ್ ಪಂದ್ಯ ನಡೆಯಲಿದೆ. ಇದಾದ ನಂತರ ಅಕ್ಟೋಬರ್ 30 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ನವೆಂಬರ್ 2 ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನು ಆಡಲಿದೆ. ಮೊದಲ ಸೆಮಿಫೈನಲ್ ಪಂದ್ಯಾವಳಿಯು ನವೆಂಬರ್ 9 ರಂದು ನಡೆಯಲಿದ್ದು, ಎರಡನೇ ಸೆಮಿಫೈನಲ್ ನವೆಂಬರ್ 10 ರಂದು ನಡೆಯಲಿದೆ. ಫೈನಲ್ ಪಂದ್ಯವು ನವೆಂಬರ್ 13 ರಂದು ನಡೆಯಲಿದೆ.
ಭಾರತ ಪಂದ್ಯಗಳ ವೇಳಾಪಟ್ಟಿ:
ಭಾರತ vs ಪಾಕಿಸ್ತಾನ, ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್, ಅಕ್ಟೋಬರ್ 23
ಭಾರತ vs ಗ್ರೂಪ್ A ರನ್ನರ್ ಅಪ್, ಸಿಡ್ನಿ ಕ್ರಿಕೆಟ್ ಗ್ರೌಂಡ್, ಅಕ್ಟೋಬರ್ 27
ಭಾರತ vs ದಕ್ಷಿಣ ಆಫ್ರಿಕಾ, ಪರ್ತ್ ಸ್ಟೇಡಿಯಂ, ಅಕ್ಟೋಬರ್ 30
ಭಾರತ vs ಬಾಂಗ್ಲಾದೇಶ, ಅಡಿಲೇಡ್ ಓವಲ್, ನವೆಂಬರ್ 2
ಗ್ರೂಪ್ ಎ: ಶ್ರೀಲಂಕಾ, ನಮೀಬಿಯಾ, ಎರಡು ಕ್ವಾಲಿಫೈಯರ್ ತಂಡಗಳು
ಗ್ರೂಪ್ ಬಿ: ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್, ಎರಡು ಕ್ವಾಲಿಫೈಯರ್ ತಂಡಗಳು
ಸೂಪರ್ 12 ಹಂತ:
ಗ್ರೂಪ್ 1: ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್, ನ್ಯೂಜಿಲೆಂಡ್, A1, A2
ಗ್ರೂಪ್ 2: ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ವೆಸ್ಟ್ ಇಂಡೀಸ್, B1, B2
Published On - 6:40 pm, Sat, 20 August 22